
ಬೆಂಗಳೂರು, (ನ.29): ಸದ್ಯ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ (MLC Election) ಕಾವು ರಂಗೇರಿದೆ. ಇದರ ಮಧ್ಯೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ.
ಅವಧಿ ಮುಕ್ತಾಯಗೊಂಡ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (Local Body Elections) ದಿನಾಂಕವನ್ನು ರಾಜ್ಯ ಆಯೋಗ ಚುನಾವಣೆ (Karnataka Election Commission) ಘೋಷಣೆ ಮಾಡಿದೆ. 4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.
MLC Election: ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ನಿಂದ ಕುಟುಂಬ ಕಲ್ಯಾಣ
ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 386 ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ. ಡಿಸೆಂಬರ್ 13 ರಿಂದ ನೀತಿಸಂಹಿತೆ ಜಾರಿಯಾಗಲಿದೆ.
ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ಪಾಲನೆ ಮಾಡಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ದಿನಾಂಕ
ಡಿಸೆಂಬರ್ 13 ಚುನಾವಣಾ ಅಧಿಸೂಚನೆ
ಡಿಸೆಂಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಡಿಸೆಂಬರ್ 27 ಮತದಾನ
ಡಿಸೆಂಬರ್ 30 ಫಲಿತಾಂಶ
ವಿಧಾನ ಪರಿಷತ್ ಚುನಾವಣೆ ದಿನಾಂಕ
ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಿಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಚುನಾವಣೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.