ಪ್ರಸ್ತುತ ರಾಜ್ಯದಲ್ಲಿ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಇದರ ಮಧ್ಯೆಯೇ ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಎಲೆಕ್ಷನ್‌ಗೆ ತಯಾರಿ ನಡೆಸಿದೆ.
ಬೆಂಗಳೂರು, (ಮಾ.24): ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಎಲೆಕ್ಷನ್‌ಗೆ ಚುನಾವಣೆ ಆಯೋಗ ಭರ್ಜರಿ ತಯಾರಿ ನಡೆಸಿದೆ.
ಇದಕ್ಕೆ ಪೂರಕವೆಂಬಂತೆ ಚುನಾವಣಾ ಆಯೋಗ ಇಂದು (ಬುಧವಾರ) ರಾಜ್ಯದ ಜಿಲ್ಲಾವಾರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು ಪ್ರಕಟಿಸಿದೆ.
ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆಗಳಿಗೆ ದಿನಾಂಕ ಘೋಷಣೆ
ಚುನಾವಣೆ ಆಯೋಗ ಪ್ರಕಟಿಸಿರುವಂತೆ ಈ ಬಾರಿ ಜಿಲ್ಲಾ ಪಂಚಾಯತಿ ಸೀಟುಗಳ ಸಂಖ್ಯೆ 1,191 ಹಾಗೂ ತಾಲ್ಲೂಕು ಪಂಚಾಯತಿ ಸ್ಥಾನಗಳ ಸಂಖ್ಯೆ 3,285 ಆಗಿದೆ.
ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗೆ ಮೊದಲು ರಾಜ್ಯ ಚುನಾವಣಾ ಆಯೋಗ ಕ್ಷೇತ್ರಗಳ ಮರುವಿಂಗಡನೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿತ್ತು. ಇದೀಗ ಯಾವ ಜಿಲ್ಲೆಯಲ್ಲಿ ಎಷ್ಟು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿವೆ ಎನ್ನುವ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ತಿಳಿಸಿದೆ.
ಮುಂದಿನ ಮೇ ಅಥವಾ ಜೂನ್ ತಿಂಗಳಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಯಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಸಿದ್ದತೆ ನಡೆಸುತ್ತಿವೆ.