ಜೆಡಿಎಸ್ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ಒಟ್ಟು 49 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ.
ಬೆಂಗಳೂರು (ಏ.14): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲೇಬೆಂಕೆಂದು ಕಸರತ್ತು ನಡೆಸುತ್ತಿರುವ ಜೆಡಿಎಸ್ ವರಿಷ್ಠ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು 2ನೇ ಪಟ್ಟಿಯನ್ನು (JDS Candidates 2nd List) ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಭಾರಿ ಕುತೂಹಲ ಸೃಷ್ಟಿಸಿದ್ದ ಹಾಸನ ವಿಧಾನಸಭಾ ಟಿಕೆಟ್ ಅನ್ನು ಸ್ವರೂಪ್‌ಗೆ ಕೊಡುವ ಮೂಲಕ ಭವಾನಿ ರೇವಣ್ಣಗೆ ಕೊಕ್ ಕೊಡಲಾಗಿದೆ.
ಸ್ವರೂಪ್ ಮನೆಯಲ್ಲಿ ಭಾರಿ ಹರ್ಷೋದ್ಘಾರ: ಇನ್ನು ರಾಜ್ಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಅನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ಮೊದಲೇ ಹೇಳುತ್ತಿದ್ದಂತೆ ಪಕ್ಷದ ಕಾರ್ಯಕರ್ತ ಸ್ವರೂಪ್ ಪ್ರಕಾಶ್ ಅವರಿಗೆ ನೀಡಿದ್ದಾರೆ. ಈ ಮೂಲಕ ತಮ್ಮ ಕುಟುಂಬದಲ್ಲಿ ಭವಾನಿ ರೇವಣ್ಣ ಅವರು ನನಗೆ ಹಾಸನದ ಟಿಕೆಟ್ ಬೇಕೇ ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದರೂ, ಅವರಿಗೆ ಟಿಕೆಟ್ ಕೊಡದೇ ಕೈಬಿಡಲಾಗಿದೆ. ಈ ಮೂಲಕ ಭಾರಿ ಕುತೂಹಲ ಕೆರಳಿಸಿದ್ದ ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿದ್ದರಿಂದ ಸ್ವರೂಪ್ ಪ್ರಕಾಶ್ ಅವರ ಮನೆಯಲ್ಲಿ ತೀವ್ರ ಕುತೂಹಲ ಉಂಟಾಗಿದೆ.
ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: 42 ಕ್ಷೇತ್ರಗಳ ಅಭ್ಯರ್ಥಿಗಳು ಇಲ್ಲಿದ್ದಾರೆ ನೋಡಿ..
ಪ್ರೀತಂಗೌಡಗೆ ಟಾಂಗ್ ಕೊಡಲು ತೀರ್ಮಾನ: ಇನ್ನು ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿಯೇ ಕಳೆದ ಎರಡು ವರ್ಷಗಳ ಹಿಂದೆ ಬಿಜೆಪಿ ಶಾಸಕ ಪ್ರೀತಂ ಗೌಡ ಜೆಡಿಎಸ್‌ಗೆ ಸವಾಲು ಹಾಕಿದ್ದರು. ಆದರೆ, ಈಗ ಹಾಸನದಲ್ಲಿ ಯಾರನ್ನು ನಿಲ್ಲಿಸಬೇಕು ಎನ್ನುವ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಸೇರಿ ಈಗ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಚುನಾವಣೆ ಕಣಕ್ಕೆ ಇಳಿಸುತ್ತಿದ್ದೇವೆ. ಇನ್ನು ನಮ್ಮ ಕುಟುಂಬದಲ್ಲಿ ಸಹೋದರನ್ನು ಯಾರು ಏನೇ ಮಾಡಿದರೂ ಇಬ್ಭಾಗ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದರು.