: ಬಿಜೆಪಿ ರಾಜ್ಯದಲ್ಲಿ ಅಭಿವೃದ್ಧಿಯ ಜೊತೆಗೆ ಉತ್ತಮ ಆಡಳಿತ ನೀಡಿದ್ದು, ಈ ಬಾರಿಯ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಜನರ ಆಶೀರ್ವಾದ ದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಶೃಂಗೇರಿ (ಮಾ.17) : ಬಿಜೆಪಿ ರಾಜ್ಯದಲ್ಲಿ ಅಭಿವೃದ್ಧಿಯ ಜೊತೆಗೆ ಉತ್ತಮ ಆಡಳಿತ ನೀಡಿದ್ದು, ಈ ಬಾರಿಯ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಜನರ ಆಶೀರ್ವಾದ ದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yadiyurappa) ವಿಶ್ವಾಸ ವ್ಯಕ್ತಪಡಿಸಿದರು.
ಅವರು ಪಟ್ಟಣದ ಸಂತೇಮಾರುಕಟ್ಟೆಎದುರು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ(BJP Vijayasankalpa yatre)ಯಲ್ಲಿ ರೋಡ್‌ಶೋ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಬಜೆಟ್‌ನಲ್ಲಿ ಎಲ್ಲಾ ವರ್ಗದವರಿಗೂ ಅನುಕೂಲವಾಗುವಂತೆ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬಿಜೆಪಿ ಅಧಿಕಾರ ಅವಧಿಯಲ್ಲಿ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ. ಮುಂದೆಯೂ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುವುದು. ರಾಜ್ಯದ ಅಭಿವೃದ್ಧಿಯೇ ಪಕ್ಷದ ಮುಖ್ಯ ಗುರಿಯಾಗಿದೆ.
ಮೂಡಿಗೆರೆ ಬಿಜೆಪಿಯಲ್ಲಿ ಬಂಡಾಯ: ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯ
ವಿಪಕ್ಷಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದೆ. ಅದು ಕೇವಲ ಅವರ ಭ್ರಮೆಯಾಗಿದೆ. ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರುವುದು ಖಚಿತ. ಮೋದಿ ಅಮೀತ್ ಶಾ ರೋಡ್‌ಶೋಗಳಲ್ಲಿ ಜನಸಾಗರವೇ ಹರಿದು ಬರುತ್ತಿದೆ. ಮೋದಿಗೆ ರಾಹುಲ್ ಗಾಂಧಿ ಸರಿಸಾಟಿ ಅಲ್ಲ. ಶೃಂಗೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದರು. ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ವಿಪ ಸದಸ್ಯ ಎಂ.ಕೆ.ಪ್ರಾಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರಡಪ್ಪ, ಡಿ.ಎನ್.ಜೀವರಾಜ್ ಮತ್ತಿತರರು ಇದ್ದರು.
ರೈತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲಾಗುವುದು: ಶೃಂಗೇರಿ ಕ್ಷೇತ್ರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಅರಿವಿದೆ. ಫಾರಂ 50, 53, 57 ಹಾಗೂ 94 ಸಿ ಅರ್ಜಿಗಳ ವಿಲೇವಾರಿಗೆ ಅರಣ್ಯ ಇಲಾಖೆಯ ಸಮಸ್ಯೆಗಳು ಇದ್ದು, ಆ ಬಗ್ಗೆ ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಬಗೆಹರಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅವರು ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಕೆರೆಕಟ್ಟೆಎಸ್‌ಕೆ ಬಾರ್ಡರ್ ರಸ್ತೆ ಅಭಿವೃದ್ಧಿಗೆ 500 ಕೋಟಿ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ 100 ಕೋಟಿ ರು. ಅರಣ್ಯ ಇಲಾಖೆಗೆ ಹಾಗೂ 400 ಕೋಟಿ ರು. ರಸ್ತೆ ಅಭಿವೃದ್ಧಿಗೆ ಬಿಡುಗಡೆಗೊಳಿಸಲಾಗಿದೆ. ಆಗುಂಬೆ ಶೃಂಗೇರಿ ಸಂಪರ್ಕ ರಸ್ತೆ ನೇರಳಕೊಡಿಗೆ ರಸ್ತೆ ಅಭಿವೃದ್ಧಿಗೆ 4 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಶೃಂಗೇರಿಗೆ ಅಗತ್ಯ 110 ಕೆವಿ ವಿದ್ಯುತ್ ಲೈನ್ ಶೀಘ್ರವಾಗಿ ಆರಂಭಿಸುವ ಕೆಲಸಕ್ಕೆ ಚಾಲನೆ ನೀಡಲಾಗುವುದು.
ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಮೂಡಿಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಟಿಕೆಟ್ ಗೊಂದಲದ ಬಗ್ಗೆ ಕೇಳಲಾದ ಪ್ರಶ್ನೆಗೆ ಅಧಿಕಾರಕ್ಕಾಗಿ, ಟಿಕೆಟ್‌ಗಾಗಿ ಎಲ್ಲಾ ಪಕ್ಷಗಳಲ್ಲಿ ಪೈಪೋಟಿ ಸಹಜ. ಇದು ಪಕ್ಷದ ಆಂತರಿಕ ವಿಚಾರ. ಗೆಲ್ಲುವ ಅಭ್ಯರ್ಥಿಗೆ ಟಿಕೇಟ್ ನೀಡಲಾಗುವುದು ಎಂದರು,
ಗುಳಿಗ ದೈವದ ಬಗ್ಗೆ ನಾನು ಎಲ್ಲೂ ಟೀಕೆ ಮಾಡಿಲ್ಲ: ಆರಗ ಜ್ಞಾನೇಂದ್ರ
ಶಿವಮೊಗ್ಗ ಜಿಲ್ಲೆಯಲ್ಲಿ ವಿಜಯ ರಾಘವೇಂದ್ರ ಬಗ್ಗೆ ಪಕ್ಷದಲ್ಲಿನ ಉಂಟಾದ ಸಮಸ್ಯೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಇದು ಪಕ್ಷದ ಆಂತರಿಕ ವಿಚಾರವಾಗಿದ್ದು, ಪಕ್ಷದೊಳಗಿನ ಸಮಸ್ಯೆ, ಇನ್ನು ಸರಿಪಡಿಸಲಾಗುವುದು ಎಂದರು.
ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಬಿಎಸ್‌ವೈ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶ್ರೀ ಮಠದ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರಳಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ತೋರಣ ಗಣಪತಿ, ಶ್ರೀ ಶಂಕರಾಚಾರ್ಯ, ಶ್ರೀ ವಿದ್ಯಾಶಂಕರ ದೇವಾಲಯಗಳಿಗೆ ತೆರಳಿ ದರ್ಶನ ಪಡೆದರು. ಬಳಿಕ ಶ್ರೀ ಮಠದ ನರಸಿಂಹವನದಲ್ಲಿನ ಶ್ರೀ ಗುರುನಿವಾಸಕ್ಕೆ ತೆರಳಿ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ರೋಡ್ ಶೋನಲ್ಲಿ ಪಾಲ್ಗೊಂಡರು.