ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತುಕತೆ ಆಗಿದೆ, ಶೆಟ್ಟರ್‌ಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಜೋಶಿ

Published : Apr 15, 2023, 10:48 AM IST
ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತುಕತೆ ಆಗಿದೆ, ಶೆಟ್ಟರ್‌ಗೆ ಟಿಕೆಟ್‌ ಸಿಗುವ  ವಿಶ್ವಾಸವಿದೆ : ಜೋಶಿ

ಸಾರಾಂಶ

ಮಾಜಿ ಸಿಎಂ ಜಗದೀಶ ಶೆಟ್ಟರ ಅವರಿಗೆ ಟಿಕೆಟ್‌ ನೀಡುವ ವಿಚಾರವನ್ನು ರಾಷ್ಟ್ರೀಯ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ನಾವು ಸಹ ಅವರಿಗೆ ಟಿಕೆಟ್‌ ನೀಡಬೇಕೆಂಬ ಅಭಿಪ್ರಾಯವನ್ನು ವರಿಷ್ಠರ ಎದುರು ಮಂಡಿಸಿದ್ದೇವೆ. ಅವರಿಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿ (ಏ.15) ಮಾಜಿ ಸಿಎಂ ಜಗದೀಶ ಶೆಟ್ಟರ ಅವರಿಗೆ ಟಿಕೆಟ್‌ ನೀಡುವ ವಿಚಾರವನ್ನು ರಾಷ್ಟ್ರೀಯ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ನಾವು ಸಹ ಅವರಿಗೆ ಟಿಕೆಟ್‌ ನೀಡಬೇಕೆಂಬ ಅಭಿಪ್ರಾಯವನ್ನು ವರಿಷ್ಠರ ಎದುರು ಮಂಡಿಸಿದ್ದೇವೆ. ಅವರಿಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಇಲ್ಲಿಯ ಅಂಬೇಡ್ಕರ್‌ ವೃತ್ತ(Ambedkar circle hubballi)ದಲ್ಲಿ ಶುಕ್ರವಾರ ಅಂಬೇಡ್ಕರ್‌ ಅವರ ಮೂತಿರ್ಗೆ ಮಾಲಾಪರ್ಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ಜಗದೀಶ ಶೆಟ್ಟರ(Jagadish shettar) ಅವರ ಜತೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ ಟಿಕೆಟ್‌ ನೀಡಬೇಕೆಂಬ ವಿಚಾರ ತಿಳಿಸಿದ್ದೇವೆ. ಬರುವ ದಿನಗಳಲ್ಲಿ ಎಲ್ಲವೂ ಸುಲಲಿತವಾಗಿ ಈ ಸಮಸ್ಯೆ ಪರಿಹಾರವಾಗಲಿದೆ ಎಂದರು.

ದೆಹಲಿಯಲ್ಲಿ ಟಿಕೆಟ್‌ಗಾಗಿ ಮಾಜಿ ಸಿಎಂ ಶೆಟ್ಟರ್ ಅಲೆದಾಟ, ಜೋಶಿ ಬಳಿಕ ಜೆಪಿ ನಡ್ಡಾ ಮನೆಗೆ ತೆರಳಿ ಚರ್ಚೆ!

ಬಿಜೆಪಿ ಗೆಲ್ಲುವ ಪಕ್ಷ. ಹೀಗಾಗಿ ಆಕಾಂಕ್ಷಿಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚಿದೆ. ಆಗಿರುವ ಎಲ್ಲ ಗೊಂದಲಗಳನ್ನು ನಿವಾರಿಸುವಲ್ಲಿ ಪಕ್ಷ ಯಶಸ್ವಿಯಾಗಲಿದೆ. ಬಿಜೆಪಿ ಕಾರ್ಯಕರ್ತರು ಬಹಳಷ್ಟು ಹುಮ್ಮಸ್ಸು ಮತ್ತು ಭಾವನೆ ಉಳ್ಳವರಾಗಿದ್ದಾರೆ.. ಪಕ್ಷ ಎಲ್ಲರನ್ನೂ ಪರಿಗಣನೆಗೆ ತೆಗೆದುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಮೂಲಕ ಗೊಂದಲ ನಿವಾರಿಸಲಿದೆ ಎಂದರು.

ಪ್ರಸ್ತುತ ಚುನಾವಣೆಯಲ್ಲಿ 52 ಜನ ಹೊಸ ಮುಖಗಳಿಗೆ ಟಿಕೆಟ್‌ ನೀಡಲಾಗಿದೆ. ಕಾಂಗ್ರೆಸ್ ನಾಯಕರು ಕುಟುಂಬ ಹಾಗೂ ಸಂಬಂಧಿಕರಿಗೆ ಟಿಕೆಟ್‌ ನೀಡುತ್ತಿದ್ದಾರೆ. ಮೋದಿ(Narendra Modi) ಅವರು ಪ್ರಧಾನಿಯಾದ ಬಳಿಕ ಪ್ರಜಾಪ್ರಭುತ್ವದ ಆಶಯದಂತೆ ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗುತ್ತಿದೆ ಎಂದರು.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ(ex DCM Laxman savadi) ಕಾಂಗ್ರೆಸ್ ಸೇಪರ್ಡೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಲಕ್ಷ್ಮಣ ಸವದಿ ಅವರಿಗೆ ಪಕ್ಷ  ಬಹಳಷ್ಟು ಮಹತ್ವ ನೀಡುವ ಮೂಲಕ ಅಗತ್ಯ ಸ್ಥಾನಮಾನ ನೀಡಿದೆ. ಅಲ್ಲದೇ, ಕಾಂಗ್ರೆಸ್ ಪಕ್ಷ ಕಾರ್ಯಕರ್ತರನ್ನು ಯೂಸ್‌ ಆ್ಯಂಡ್‌ ಥ್ರೋ ಮಾಡುತ್ತದೆ. ಅವರು ಇಲ್ಲಿಯೇ ಇದ್ದರೆ ಉತ್ತಮ ಭವಿಷ್ಯ ಇದೆ. ಹಾಗಾಗಿ ಲಕ್ಷ್ಮಣ ಸವದಿ ಅವರು ಪಕ್ಷ ತೊರೆಯಬಾರದು ಎಂದರು.

ಕಲಘಟಗಿ ಟಿಕೆಟ್‌(Kalaghatagi assembly constituency ticket) ತಪ್ಪಿದ್ದಕ್ಕೆ ಜೋಶಿ(Pralhad joshi) ಅವರೇ ಕಾರಣ ಎಂಬ ನಿಂಬಣ್ಣವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಲಘಟಗಿ ಕ್ಷೇತ್ರದ ಶಾಸಕ ಸಿ.ಎಂ. ನಿಂಬಣ್ಣ(CM Nimbanna)ವರ ಹಿರಿಯರಿದ್ದಾರೆ. ಟಿಕೆಟ್‌ ತಪ್ಪಿದ ಕೋಪದಲ್ಲಿ ಮಾತನಾಡಿರಬಹುದು. ಈಗಾಗಲೇ ಎರಡು ಮೂರು ಬಾರಿ ಮಾತನಾಡಿದ್ದು, ಅವರು ಪಕ್ಷ ಬಿಟ್ಟು ಹೋಗಲ್ಲ. ಮತ್ತೊಮ್ಮೆ ಮಾತನಾಡಿ ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಪಕ್ಷದಲ್ಲಿ ಅಧಿಕಾರ ಅನುಭವಿಸಿ ಬೆನ್ನಿಗೆ ಚೂರಿ ಹಾಕಿದ ಸವದಿ ವಿಶ್ವಾಸಘಾತುಕ: ಎಂಪಿ ರೇಣುಕಾಚಾರ್ಯ

ಕಾಂಗ್ರೆಸ್‌ನ ಅಧಿಕಾರಾವಧಿಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌(Dr BR Ambedkar) ಅವರಿಗೆ ಸಿಗಬೇಕಾದ ಪ್ರಾಶಸ್ತ್ಯ ಸಿಕ್ಕಿರಲಿಲ್ಲ. ಆದರೆ, ಬಿಜೆಪಿ ನೇತೃತ್ವದ ಸರಕಾರ ಅವರಿಗೆ ಗೌರವ ತಂದುಕೊಡುವ ಕೆಲಸ ಮಾಡಿದೆ. ಈಗಾಗಲೇ ಅಂಬೇಡ್ಕರ್‌ ಅವರ ಜನ್ಮಸ್ಥಳವನ್ನು ಅಧ್ಯಯನ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ