ಕೊಡಗು: ಮತದಾರರ ಓಲೈಕೆಗೆ ಅಭ್ಯರ್ಥಿಗಳ ತಂತ್ರಗಾರಿಕೆ ಬಿರುಸು

By Kannadaprabha News  |  First Published Apr 27, 2023, 5:15 AM IST

ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ಮತದಾರರನ್ನು ಸೆಳೆಯಲು ವಿವಿಧ ರಾಜಕೀಯ ಪಕ್ಷದವರು ಹಲವು ಕಾರ್ಯತಂತ್ರಗಳನ್ನು ಮಾಡುತ್ತಿದ್ದಾರೆ.


ವಿಘ್ನೇಶ್ ಎಂ. ಭೂತನಕಾಡು

ಮಡಿಕೇರಿ (ಏ.27) : ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ಮತದಾರರನ್ನು ಸೆಳೆಯಲು ವಿವಿಧ ರಾಜಕೀಯ ಪಕ್ಷದವರು ಹಲವು ಕಾರ್ಯತಂತ್ರಗಳನ್ನು ಮಾಡುತ್ತಿದ್ದಾರೆ.

Tap to resize

Latest Videos

undefined

ಬೆಳಗ್ಗೆಯೇ ಮತದಾರರ ಮನೆಗೆ ತೆರಳಿ ‘ಕ್ಯಾನ್ವಾಸ್‌ ಗೆ ಜನ ಬೇಕು, ಬರ್ತೀರಾ?’ ಎಂದು ವಿವಿಧ ಪಕ್ಷದ ಕಾರ್ಯಕರ್ತರು ಕೇಳುತ್ತಿರುವುದು ಸಾಮಾನ್ಯವಾಗಿದೆ. ಕೆಲವರು ಮಾಮೂಲಿ ಕೆಲಸ ಬಿಟ್ಟು ಪ್ರಚಾರ ಕೆಲಸಕ್ಕೆ ಹೋಗುತ್ತಿದ್ದಾರೆ.

ಕೊಡಗಿನಲ್ಲಿ ಎರಡೂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಇರುವುದರಿಂದ ಮತ ಪ್ರಚಾರದ ಭರಾಟೆ ಬಿರುಸುಗೊಂಡಿದ್ದು, ನಿತ್ಯವೂ ಮನೆ ಮನೆಗಳಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಸೇರುತ್ತಿದ್ದು, ಮತಯಾಚನೆಯಲ್ಲಿ ತೊಡಗಿಕೊಂಡಿದ್ದಾರೆ. ಮತದಾರರ ಬಳಿ ಬ್ಯಾಲೆಟ್‌ ಪೇಪರ್‌ ಮಾದರಿ(Ballot paper sample), ಅಭ್ಯರ್ಥಿ ಹಾಗೂ ಪಕ್ಷದ ಪ್ರಣಾಳಿಕೆಯನ್ನು ನೀಡಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಓಲೈಸುತ್ತಿದ್ದಾರೆ.

ರಾತ್ರಿ ಪಕ್ಷ ಸೇರ್ಪಡೆ:

ಚುನಾವಣಾ(Karnataka assembly election) ಹೊತ್ತಿನಲ್ಲಿ ಪಕ್ಷ ಸೇರ್ಪಡೆ ಹಾಗೂ ಪಕ್ಷ ತೊರೆಯುವ ಕಾರ್ಯ ಭರದಿಂದ ಸಾಗಿದೆ. ರಾತ್ರಿ 12 ಗಂಟೆಯಾದರೂ ವಿವಿಧ ಪಕ್ಷದ ಪ್ರಮುಖರು ತಮ್ಮ ಪಕ್ಷಕ್ಕೆ ಇತರೆ ಪಕ್ಷದ ಬೆಂಬಲಿಗರನ್ನು ಮನವೊಲಿಸಿ ಸೇರ್ಪಡೆ ಮಾಡುವ ತಂತ್ರಗಾರಿಕೆಯೂ ನಡೆಯುತ್ತಿದೆ. ಆದರೆ ಬೆಳಗ್ಗೆ ಒಂದು ಪಕ್ಷದಲ್ಲಿ ಇದ್ದವರು ರಾತ್ರಿ ಇನ್ನೊಂದು ಪಕ್ಷದಲ್ಲಿ ಗುರುತಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ.

ಕೊಡಗು: ಅಂಚೆ ಮತಪತ್ರದ ಮೂಲಕ 2,474 ಮಂದಿ ಮತದಾನಕ್ಕೆ ಹೆಸರು ನೋಂದಣಿ...

ರಾತ್ರಿಯಲ್ಲಿ ಸಭೆ ಜೋರು:

ರಾತ್ರೋರಾತ್ರಿ ಗ್ರಾಮೀಣ ಭಾಗದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಾಡಿ ಗೆಲವಿಗೆ ಯಾವ ರೀತಿ ಶ್ರಮಿಸಬೇಕು ಹಾಗೂ ಯಾವೆಲ್ಲ ಯೋಜನೆ ಹಾಕಿಕೊಳ್ಳಬೇಕೆಂಬ ಬಗ್ಗೆಯೂ ಸಭೆಗಳಲ್ಲಿ ಚರ್ಚಿಸಲಾಗುತ್ತಿದೆ.

ಚುನಾವಣಾ ಪ್ರಚಾರ ಕೆಲಸದಲ್ಲಿ ಯುವಕರೇ ಹೆಚ್ಚಾಗಿ ಕಂಡು ಬರುತ್ತಿದ್ದಾರೆ. ಮನೆ ಮನೆ ಭೇಟಿ ಸಂದರ್ಭದಲ್ಲಿ ಆಯಾ ಗ್ರಾಮದ ಯುವಕರು ಒಟ್ಟಾಗಿ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.

ಸ್ಟಾರ್‌ ಪ್ರಚಾರನ್ನು ಕರೆ ತರಲು ಪ್ರಯತ್ನ

ಬಿಜೆಪಿಯಿಂದ ಅಮಿತ್‌ ಶಾ, ಯೋಗಿ ಆದಿತ್ಯನಾಥ್‌, ಯಡಿಯೂರಪ್ಪ, ಅಣ್ಣಾಮಲೈ ಮತ್ತಿತರ ಸ್ಟಾರ್‌ ಪ್ರಚಾರಕ್ಕರನ್ನು ಕರೆ ತರಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಏ.29ರಂದಿ ಅಮಿತ್‌ ಶಾ ಕಾರ್ಯಕ್ರಮ ನಿಗದಿಯಾಗಿದ್ದು, ಮಡಿಕೇರಿಯಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಪ್ರಿಯಾಂಕ ಗಾಂಧಿ ಅವರನ್ನು ಕರೆ ತರಲು ಪ್ರಯತ್ನಿಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತೊಮ್ಮೆ ಕೊಡಗಿಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಜೆಡಿಎಸ್‌ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ಮತ್ತಿತರರು ಜಿಲ್ಲೆಗೆ ಪ್ರಚಾರಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

25 ವರ್ಷ ಶಾಸಕನಾಗಿ ಪಿಕ್ನಿಕ್‌ಗೆ ಹೋಗಿದ್ದ ಅಪ್ಪಚ್ಚುರಂಜನ್: ಅಭಿವೃದ್ಧಿಯೇ ಮಾಡಿಲ್ಲ 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಚುನಾವಣಾ ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಮತದಾರರಿಂದ ಉತ್ತಮ ಸ್ಪಂದನೆ ದೊರಕಿದೆ. ಬೂತ್‌ ಹಾಗೂ ವಲಯ ಮಟ್ಟದಲ್ಲಿ ಸಭೆ ಹಾಗು ಪ್ರಚಾರ ಕಾರ್ಯ ಮಾಡಲಾಗುತ್ತಿದೆ. ಜನ ಈ ಬಾರಿ ಬದಲಾವಣೆ ಬಯಸಿದ್ದಾರೆ.

-ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ.

ಜೆಡಿಎಸ್‌ ಅಭ್ಯರ್ಥಿ ಹಾಗೂ ನಾನು ಎರಡು ತಂಡವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇವೆ. ಹಲವು ಕಡೆಗಳಲ್ಲಿ ಪ್ರಚಾರ ಸಭೆಗಳನ್ನು ಮಾಡುತ್ತಿದ್ದೇವೆ.

-ಕೆ.ಎಂ. ಗಣೇಶ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ.

ನಾವು ಎರಡೂ ಕ್ಷೇತ್ರಗಳಲ್ಲಿ ಈ ಹಿಂದಿನಿಂದಲೂ ಪ್ರಚಾರ ಕಾರ್ಯ ಮಾಡುತ್ತಿದ್ದೇವೆ. ಬೂತ್‌ ಮಟ್ಟದಲ್ಲಿ ನಮ್ಮ ಕಾರ್ಯಕರ್ತರು ಬಲಿಷ್ಠವಾಗಿದ್ದಾರೆ. ಈ ಬಾರಿ ಎರಡೂ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಲಿದೆ.

-ರಾಬಿನ್‌ ದೇವಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ

click me!