
ಬೆಂಗಳೂರು (ಏ.14) : ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ(Siddaramaiah) ಅವರ ನಿವಾಸದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ(Randeep singh surjewala), ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ(Laxman savadid) ಅವರ ಜತೆ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಶಿವಕುಮಾರ್(DK Shivakumar) ಅವರು ಮಾತನಾಡಿದರು.
ಸಿದ್ದು-ಡಿಕೆಶಿ ಕಟ್ಟಿ ಹಾಕಲು ಕಮಲಾಧಿಪತಿಗಳ ಮೆಗಾ ಪ್ಲಾನ್! ಬಿಜೆಪಿಗೆ ಬ್ರಹ್ಮಾಸ್ತ್ರ ಸಿದ್ಧಪಡಿಸಿದ ಕಾಂಗ್ರೆಸ್!
‘ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರನ್ನು ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರುತ್ತೇವೆ.
ಲಕ್ಷ್ಮಣ ಸವದಿ ಅವರ ಜತೆಗೆ ಇನ್ನು ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಅವರು ತಿಳಿಸಿದರು.
ಇಂದು ಸಂಜೆ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆ, ಅಥಣಿಯಿಂದ ಟಿಕೆಟ್, ಕುಮಟಳ್ಳಿ ವಿರುದ್ಧ ಸ್ಪರ್ಧೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.