ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಬಂಜಾರಾ (ಲಂಬಾಣಿ) ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಮತದಾನ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ವಿಜಯನಗರ (ಏ.3): ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಬಂಜಾರಾ (ಲಂಬಾಣಿ) ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಮತದಾನ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಯಾವುದೇ ಕಾಣಕ್ಕೂ ಚುನಾವಣೆಯಲ್ಲಿ ಮತದಾನ ಮಾಡೋದಿಲ್ಲ ಎಂದು ಪಟ್ಟು ಹಿಡಿದಿರುವ ಗ್ರಾಮಸ್ಥರು. ಹರಪನಹಳ್ಳಿ ತಾಲೂಕಿನ ಹಾರಕನಾಳು ದೊಡ್ಡ ತಾಂಡದ ಗ್ರಾಮಸ್ಥರಿಂದ ತೀರ್ಮಾನ.
ರಾಜ್ಯ ಸರ್ಕಾರ ಒಳ ಮೀಸಲಾತಿ ಘೋಷಣೆ ಮಾಡಿರುವುದರಿಂದ ಬಂಜಾರ ಸಮುದಾಯ(Banjara community)ಕ್ಕೆ ಅನ್ಯಾಯ ವಾಹಿದೆಯೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಒಳಮೀಸಲಾತಿ ಹೊಡೆತ ನೀಡಲು ಸಜ್ಜಾದ ಲಂಬಾಣಿ ಸಮುದಾಯ. 2023ರ ವಿಧಾನ ಸಭೆ ಚುನಾವಣೆ ಹಿನ್ನಲೆ ಮತದಾನ ಬಹಿಷ್ಕಾರಕ್ಕೆ ನಿರ್ಧಾರ ಒಮ್ಮತದಿಂದ ನಿರ್ಧಾರಕ್ಕೆ ಬಂದಿರುವ ಗ್ರಾಮಸ್ಥರು.
ದಕ್ಷಿಣ ಕನ್ನಡ: ಜನಾರ್ದನ ಪೂಜಾರಿ ಆಪ್ತನಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಚಿಂತನೆ?