
ಲಿಂಗಸುಗೂರು (ಏ.9) : ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ರಾಜಕೀಯ ಪಕ್ಷಗಳ ಮುಖಂಡರು ಟಿಕೆಟ್‌ಗಾಗಿ ನಾನಾ ತಂತ್ರಗಳ ಮೂಲಕ ಗಮನ ಸೆಳೆಯುತ್ತಿದ್ದು, ಅದರಂತೆ ಕಾಂಗ್ರೆಸ್ ಮುಖಂಡ ಎಚ್.ಬಿ. ಮುರಾರಿಯವರಿಗೆ ಕೈ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಮಣ್ಣಿನ ಮಡಿಕೆ ಕೊರಳಲ್ಲಿ ನೇತು ಹಾಕಿಕೊಂಡು, ಸೊಂಟಕ್ಕೆ ಪೊರಕೆ ಕಟ್ಟಿಕೊಂಡು ಅರೆಬೆತ್ತಲೆ ಮೆರವಣಿಗೆ ನಡೆಸಿ ವಿನೂತನ ಪ್ರತಿಭಟನೆ ನಡೆಸಿ ಗಮನ ಸೆಳೆದರು.
ಪರಿಶಿಷ್ಟಜಾತಿಗೆ ಮೀಸಲಾದ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್(Congress Ticket)ಗೆ ಆಗ್ರಹಿಸಿ ಅರೆಬೆತ್ತಲೆ ಮೆರವಣಿಗೆ ನಡೆಸಿದ ದಲಿತ ಸಂಘರ್ಷ ಸಮಿತಿ ಮುಖಂಡರು, ಕಾರ್ಯಕರ್ತರು, ಸೊಂಟಕ್ಕೆ ಕಸಬಾರಿಗೆ ಕಟ್ಟಿಕೊಂಡು, ಕೊರಳಲ್ಲಿ ಮಣ್ಣಿನ ಮಡಿಕೆ ನೇತು ಹಾಕಿಕೊಂಡು ಲಿಂಗಸುಗೂರು ಪಟ್ಟಣ ಪ್ರಮುಖ ಬೀದಿಗಳಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ, ಮೂಲ ಅಸ್ಪಶ್ಯರು ಕಾಂಗ್ರೆಸ್‌ಗೆ ಬೆಂಬಲಿಸುತ್ತಾ ಬಂದಿದ್ದಾರೆ. ಆದ್ದರಿಂದ ಮೀಸಲು ಕ್ಷೇತ್ರದಲ್ಲಿ ಮೂಲ ಅಸ್ಪಶ್ಯರಿಗೆ ಟಿಕೆಟ್ ನೀಡಬೇಕು ಇಲ್ಲದೇ ಇದ್ದರೇ ಲಿಂಗಸುಗೂರು ಸೇರಿ ಜಿಲ್ಲೆಯ ಇತರೆ ಕ್ಷೇತ್ರಗಳಲ್ಲಿ ಕೆಟ್ಟಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದರು.
Ticket fight: ಮಾನ್ವಿ ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಆಕ್ರೋಶ ಸ್ಪೋಟ!
ಪ್ರತಿಭಟನಾ ಮೆರವಣಿಗೆಯಲ್ಲಿ ದಸಸಂ ಮುಖಂಡರಾದ ಜೆ. ಬಾಬು ಹಟ್ಟಿ, ನಾಗರಾಜ ತಿಪ್ಪಣ್ಣ, ಸಂದೀಪ್ ಮುರಾರಿ, ನ್ಯಾಯವಾದಿ ಪಂಪಾಪತಿ ಪರಂಗಿ, ಪ್ರದೀಪ್, ಬಸವರಾಜ, ಯಲ್ಲಪ್ಪ, ಜೋಸೆಫ್ ದೇವದುರ್ಗ, ತಿಪ್ಪಣ್ಣ, ವಿಜಯ ಕುಮಾರ ಹಟ್ಟಿ, ನಾಗರಾಜ, ದುರಗರಾಜ್ ವಟಗಲ್, ಜಯರಾಜ್, ಮೌನೇಶ ಮೆದಕಿನಾಳ, ಬಸವರಾಜ ಟೈಲರ್, ನೀತಿರಾಜ್ ಮಳ್ಳಿ, ಮುತ್ತು, ಅನಿಲ್, ನೀತಿರಾಜ್ ನಗನೂರು ಇತರರು ಭಾಗವಹಿಸಿದ್ದರು.
ಕೈ ಟಿಕೆಟ್ ಪಕ್ಕಾ, 2ನೇ ಅವಧಿಗೆ ನಾನೇ ಶಾಸಕ: ಡಿ.ಎಸ್. ಹೂಲಗೇರಿ
ಲಿಂಗಸುಗೂರು (ಏ.9) : ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುವುದು ಪಕ್ಕಾ ಆಗಿದೆ. ಅದರಂತೆ ಮೊದಲ ಅವಧಿಯಲ್ಲಿ ಉತ್ತಮ ಅಭಿವೃದ್ಧಿ ಕಾಮಗಾರಿಗಳು ಕೈಗೊಂಡಿದ್ದು, ಮತ್ತೊಮ್ಮೆ ಜನಾಶೀರ್ವಾದ ಸಿಕ್ಕು 2ನೇ ಅವಧಿಗೆ ನಾನೇ ಶಾಸಕನಾಗುತ್ತೇನೆ ಎಂದು ಶಾಸಕ ಡಿ.ಎಸ್. ಹೂಲಗೇರಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಆಯ್ದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಪರಿಶಿಷ್ಟಜಾತಿ ಮೀಸಲು ಕ್ಷೇತ್ರದ ಟಿಕೆಟ್ ನನಗೇ ನೀಡುವುದಾಗಿ ಭರವಸೆ ನೀಡಿದ್ದು, ಕೂಡಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಲು ಸೂಚನೆ ನೀಡಿದ್ದಾರೆ. ಅದರಂತೆ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಹಾಗೂ ಚುನಾವಣೆ ರಣತಂತ್ರದ ಕುರಿತು ಕಾಂಗ್ರೆಸ್, ಮುಖಂಡರು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದೇನೆ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳಿಂದ ಪಕ್ಷದ ವರ್ಚಸ್ಸು ಉತ್ತಮವಾಗಿದೆ ಎಂದು ತಿಳಿಸಿದರು.
ಮಾನ್ವಿ: ಕಾಂಗ್ರೆಸ್ ಟಿಕೆಟ್ ಘೋಷಣೆಗೆ ಮುನ್ನವೇ ಅಸಮಾಧಾನ ಸ್ಫೋಟ: ಬಿವಿ ನಾಯಕ ವಿರುದ್ಧ ತಿರುಗಿಬಿದ್ದ ಸ್ಥಳೀಯರು!
ಈಗಾಗಲೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡುವುದು ಖಚಿತಗೊಂಡಿದೆ. ಟಿಕೆಟ್ ಹಂಚಿಕೆ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ. ಮುಖಂಡರು, ಕಾರ್ಯಕರ್ತರು ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು. ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.