Karnataka election 2023: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಪ್ರಕಟ: 4 ಕ್ಷೇತ್ರ ನಿಗೂಢ!

By Kannadaprabha NewsFirst Published Mar 26, 2023, 10:34 AM IST
Highlights

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ 124 ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಮಾಡಿದೆ. ಜಿಲ್ಲೆಯ ಶೃಂಗೇರಿ ಕ್ಷೇತ್ರದಿಂದ ಹಾಲಿ ಶಾಸಕ ಟಿ.ಡಿ.ರಾಜೇಗೌಡ ಅವರ ಹೆಸರು ನಿರೀಕ್ಷೆಯಂತೆ ಮೊದಲ ಪಟ್ಟಿಯಲ್ಲಿಯೇ ಫೈನಲ್‌ ಮಾಡಲಾಗಿದೆ. ಇನ್ನುಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕುತೂಹಲ ವ್ಯಕ್ತವಾಗಿದೆ.

ಚಿಕ್ಕಮಗಳೂರು (ಮಾ.26) : ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ 124 ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಮಾಡಿದೆ. ಜಿಲ್ಲೆಯ ಶೃಂಗೇರಿ ಕ್ಷೇತ್ರದಿಂದ ಹಾಲಿ ಶಾಸಕ ಟಿ.ಡಿ.ರಾಜೇಗೌಡ ಅವರ ಹೆಸರು ನಿರೀಕ್ಷೆಯಂತೆ ಮೊದಲ ಪಟ್ಟಿಯಲ್ಲಿಯೇ ಫೈನಲ್‌ ಮಾಡಲಾಗಿದೆ. ಇನ್ನುಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕುತೂಹಲ ವ್ಯಕ್ತವಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ(Congress candidate) ಹೆಸರು ಪ್ರಕಟವಾದ ನಂತರದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರ(Shringeri assembly constituency)ದಲ್ಲಿ ಚುನಾವಣಾ ಅಖಾಡದ ಸ್ಪಷ್ಟಚಿತ್ರಣ ಹೊರ ಬಿದ್ದಿದೆ. ಜೆಡಿಎಸ್‌ನಿಂದ ಸುಧಾಕರ ಶೆಟ್ಟಿಸ್ಪರ್ಧೆ ಮಾಡಲು ಈಗಾಗಲೇ ಪಕ್ಷ ಹೆಸರು ಘೋಷಣೆ ಮಾಡಿದೆ. ಬಿಜೆಪಿಯಿಂದ ಮಾಜಿ ಸಚಿವ ಡಿ.ಎನ್‌.ಜೀವರಾಜ್‌ ಅವರು ಸ್ಪರ್ಧೆ ಮಾಡಲಿದ್ದಾರೆ. ಅಂದರೆ ಮೂರು ಪಕ್ಷಗಳ ಅಭ್ಯರ್ಥಿಗಳು ಬಹುತೇಕ ಅಂತಿಮಗೊಂಡಿದ್ದಾರೆ.

ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‌ ವಶ: ಶೃಂಗೇರಿ ಶಾಸಕ ರಾಜೇಗೌಡಗೆ ಹಿನ್ನಡೆ

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಡಿ.ಎನ್‌. ಜೀವರಾಜ್‌(DN Jeevaraj) 60791 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡ 62780 ಮತಗಳನ್ನು ಪಡೆದು 1989 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ಎಚ್‌.ಜಿ.ವೆಂಕಟೇಶ್‌ 9799 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದರು. ಈ ಬಾರಿ ಟಿ.ಡಿ. ರಾಜೇಗೌಡ ಮತ್ತು ಡಿ.ಎನ್‌.ಜೀವರಾಜ್‌ ಮತ್ತೆ ಮುಖಾಮುಖಿಯಾಗಲಿದ್ದಾರೆ.

ಕುತೂಹಲ:

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಅಭ್ಯರ್ಥಿಗಳ ಚಿತ್ರಣ ಬಹುತೇಕ ಫೈನಲ್‌ ಆಗಿದೆ. ಆದರೆ, ಕಾಂಗ್ರೆಸ್‌ ನಡೆ ಕುತೂಹಲ ಮೂಡಿಸಿದೆ.

ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿದೊಡ್ಡದಾಗಿದೆ. ಮಾಜಿ ಶಾಸಕರಾದ ಶ್ರೀನಿವಾಸ್‌, ಶಿವಶಂಕರಪ್ಪ, ದೋರನಾಳು ಪರಮೇಶ್‌, ಗೋಪಿಕೃಷ್ಣ ಸೇರಿದಂತೆ 11 ಮಂದಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಬಿಜೆಪಿಯಿಂದ ಹಾಲಿ ಶಾಸಕ ಡಿ.ಎಸ್‌. ಸುರೇಶ್‌(MLA DS Suresh) ಅವರು ಮತ್ತೆ ಈ ಬಾರಿ ಸ್ಪರ್ಧೆ ಮಾಡಲಿದ್ದಾರೆ. ಅವರು, ಲಿಂಗಾಯತ ಸಮುದಾಯ(Lingayat community)ಕ್ಕೆ ಸೇರಿದವರಾಗಿರುವುದರಿಂದ ಕಾಂಗ್ರೆಸ್‌ ನಂಬರ್‌ ಗೇಮ್‌ ಲೆಕ್ಕಾಚಾರ ನಡೆಸಿ ತನ್ನ ಅಭ್ಯರ್ಥಿ ಅಂತಿಮಗೊಳಿಸಲು ಇನ್ನಷ್ಟುಕಾಲಾವಕಾಶ ಬೇಕಾಗಬಹುದು. ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ಟಿಕೆಟ್‌ಗೆ ತೀವ್ರ ಪೈಪೋಟಿ ಇಲ್ಲದಿರುವ ಕ್ಷೇತ್ರಗಳ ಹೆಸರು ಪ್ರಕಟವಾಗುತ್ತದೆ ಎಂದು ಅಂದಾಜು ಮಾಡಲಾಗಿತ್ತು. ಅದರಲ್ಲಿ ಕಡೂರು ಕ್ಷೇತ್ರವೂ ಕೂಡ ಇತ್ತು. ಮಾಜಿ ಶಾಸಕ ವೈಎಸ್‌ವಿ ದತ್ತ ಅವರಿಗೆ ಟಿಕೆಟ್‌ ಫೈನಲ್‌ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ, ಆಕಾಂಕ್ಷಿಗಳ ಸಾಲಿನಲ್ಲಿ ಆನಂದ್‌, ಕಡೂರು ಸಿ. ನಂಜಪ್ಪ ಅವರು ಕೂಡ ಇದ್ದಾರೆ.

ಚಿಕ್ಕಮಗಳೂರು:

ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಅತಿ ಹೆಚ್ಚು ಕುತೂಹಲ ಇರುವುದು ಚಿಕ್ಕಮಗಳೂರು ಕ್ಷೇತ್ರ. ಶಾಸಕ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್‌ ಪಕ್ಷದಿಂದ ಯಾರು ಸ್ಪರ್ಧೆ ಮಾಡುತ್ತಾರೆಂಬುದಾಗಿದೆ. ಸದ್ಯ ಕೈ ಟಿಕೆಟ್‌ ಕೋರಿ 6 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಯಾರಿಗಾದರೂ ಓರ್ವರಿಗೆ ಅಥವಾ ಅರ್ಜಿ ಸಲ್ಲಿಸದೆ ಇರುವವರಿಗೆ ಟಿಕೆಟ್‌ ಸಿಗುತ್ತೋ ಎನ್ನುವ ಕುತೂಹಲ ಇದೆ. ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳ ಪೈಕಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯತ್ತ ಎಲ್ಲರ ಚಿತ್ತ ಇದೆ.

ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ ವಶ; ಮತ್ತೊಂದಡೆ ಚುನಾವಣೆಗೆ ಹಂಚಲು ತಂದಿದ್ದ ಲಕ್ಷಾಂತರ ಮೌಲ್ಯದ ಸೀರೆ ವಶ!

ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ಮೋಟಮ್ಮ, ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ, ಹೂವಪ್ಪ, ನಾಗರತ್ನ ಅವರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ನಾಗರತ್ನ ಅವರು ಪ್ರಯತ್ನವನ್ನು ಕೈಬಿಟ್ಟಿದ್ದಾರೆ. ಇನ್ನುಳಿದ ಆಕಾಂಕ್ಷಿಗಳು ತೀವ್ರ ಪ್ರಯತ್ನದಲ್ಲಿ ಇದ್ದಾರೆ. ಒಟ್ಟಾರೆ, ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಯಾ ರನ್ನು ಅಭ್ಯರ್ಥಿ ಮಾಡುತ್ತೆ ಎಂಬುದು ಸಾರ್ವಜನಿಕರಲ್ಲಿ ಹೆಚ್ಚು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

click me!