ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಬೈ ಎಲೆಕ್ಷನ್‌: ಚುನಾವಣಾಧಿಕಾರಿ ಮಹತ್ವದ ಮಾಹಿತಿ

By Suvarna News  |  First Published Feb 9, 2021, 6:33 PM IST

ರಾಜ್ಯದಲ್ಲಿ ಒಂದು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ಇನ್ನು ಈ ಬಗ್ಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಹತ್ವದ ಮಾಹಿತಿ ಕೊಟ್ಟಿದ್ದಾರೆ.


ಬೆಳಗಾವಿ, (ಫೆ.09): ಬಸವಕಲ್ಯಾಣ, ಮಸ್ಕಿ ಹಾಗೂ ಬೆಳಗಾವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದ್ದು, ಇದಕ್ಕೆ ರಾಜಕೀಯ ಪಕ್ಷಗಳು ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿವೆ. 

ಇನ್ನು ಈ ಬಗ್ಗೆ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಬೆಳಗಾವಿ ಲೋಕಸಭಾ ಕ್ಷೇತ್ರ ಸೇರಿದಂತೆ ಮುಂಬರುವ ಉಪ ಚುನಾವಣೆಗಳಿಗೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

Tap to resize

Latest Videos

ಮತದಾರರ ಪಟ್ಟಿ ಪರಿಷ್ಕರಣೆ, ಸಿಬ್ಬಂದಿ ನಿಯೋಜನೆ, ಇವಿಎಂಗಳ ವ್ಯವಸ್ಥೆ ಮೊದಲಾದ ತಯಾರಿಯನ್ನು ಮಾಡಿಕೊಂಡಿದ್ದೇವೆ. ಮತದಾರರ ಪಟ್ಟಿ ಪರಿಷ್ಕರಣೆ ಮುಗಿದಿದೆ. ನವ ಮತದಾರರಿಗೆ ಗುರುತಿನ ಚೀಟಿ(ಎಪಿಕ್)ಗಳನ್ನು ವಾರಗೊಳಗೆ ವಿತರಿಸಲಾಗುವುದು. ಉಪ ಚುನಾವಣೆ ಯಾವಾಗ ಘೋಷಣೆ ಆಗುತ್ತದೆ ಎನ್ನುವುದನ್ನು ನಾವು ಹೇಳಲಾಗುವುದಿಲ್ಲ. ನಾವೂ ಕಾಯುತ್ತಿದ್ದೇವೆ ಎಂದು ಎಂದು ಹೇಳಿದರು.

ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಅಂಗವಿಕಲರಿಗೆ ಅಂಚೆ ಮತದಾನ
ಅಂಗವಿಕಲರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. 80 ವರ್ಷ ದಾಟಿದವರು ಹಾಗೂ ಕೋವಿಡ್ ಸೋಂಕಿತರಿಗೂ ಈ ಸೌಲಭ್ಯ ದೊರೆಯಲಿದೆ. ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರಿರುವುದು ಮುಖ್ಯ
ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಇಲ್ಲವೇ ಎನ್ನುವುದನ್ನು ಪೂರ್ವಭಾವಿಯಾಗಿ ಪರಿಶೀಲಿಸಿಕೊಳ್ಳಬೇಕು. ಹೆಸರು ಬಿಟ್ಟು ಹೋಗಿದ್ದರೆ ಸೇರಿಸಲು ಅವಕಾಶವಿದೆ. ಚುನಾವಣಾ ಆಯೋಗದ ಹೊಸ ಉಪಕ್ರಮದಲ್ಲಿ ಮತದಾರರು ಇ-ಎಪಿಕ್ ಕಾರ್ಡ್‌ ಅನ್ನು ಜಾಲತಾಣದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಗುರುತಿನ ಚೀಟಿ ಇರುವುದು ಮುಖ್ಯವಲ್ಲ. ಮತ ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರಿರುವುದು ಮುಖ್ಯ ಎನ್ನುವುದನ್ನು ಮರೆಯಬಾರದು ಎಂದರು.

click me!