ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ(Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ಅವರು ಈಗಾಗಲೇ ಅಬ್ಬರದ ಸಮಾರಂಭಗಳನ್ನು ಮಾಡಿರುವ ನಡುವೆಯೇ ಕಾಂಗ್ರೆಸ್ ಕೂಡ ತಮ್ಮ ಕೇಂದ್ರ ವರಿಷ್ಠರನ್ನು ಕರೆತರಲು ಸಜ್ಜಾಗಿದೆ.
ಬೆಳಗಾವಿ (ಮಾ.14) : ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ(Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ಅವರು ಈಗಾಗಲೇ ಅಬ್ಬರದ ಸಮಾರಂಭಗಳನ್ನು ಮಾಡಿರುವ ನಡುವೆಯೇ ಕಾಂಗ್ರೆಸ್ ಕೂಡ ತಮ್ಮ ಕೇಂದ್ರ ವರಿಷ್ಠರನ್ನು ಕರೆತರಲು ಸಜ್ಜಾಗಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul gandhi) ಅವರು ಮಾ.20 ರಂದು ಬೆಳಗಾವಿ(Belgum) ಆಗಮಿಸುತ್ತಿದ್ದಾರೆ. ಬೆಳಗಾವಿಯಲ್ಲಿಯೇ ದೊಡ್ಡ ಪ್ರಮಾಣದ ಸಮಾವೇಶ ಮಾಡುವ ಇರಾದೆ ಹೊಂದಿರುವ ಕಾಂಗ್ರೆಸ್ ನಾಯಕರು ಈ ಮೂಲಕ ಕಾಂಗ್ರೆಸ್ ಅಲೆ ಎಬ್ಬಿಸುವಂತೆ ಮಾಡುವ ಪೂರ್ವಾಲೋಚನೆಯಲ್ಲಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರು ಬರಲಿರುವ ಈ ಸಮಾವೇಶವನ್ನು ಎಲ್ಲಿ ನಡೆಸಲಾಗುತ್ತದೆ ಎಂಬುವುದನ್ನು ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.
ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾ.20 ರಂದು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಾ.16 ರಂದು ಬೆಳಗ್ಗೆ 10ಕ್ಕೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಪಕ್ಷದ ಮುಖಂಡರ ಪೂರ್ವಭಾವಿ ಸಭೆಯನ್ನೂ ಕರೆಯಲಾಗಿದೆ.
ಈ ಸಭೆಯಲ್ಲಿ ಚಿಕ್ಕೋಡಿ, ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಹುಬ್ಬಳ್ಳಿ ನಗರ, ಧಾರವಾಡ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, 2019ರ ಲೋಕಸಭಾ ಅಭ್ಯರ್ಥಿಗಳು, 2018ರ ವಿಧಾನಸಭಾ ಅಭ್ಯರ್ಥಿಗಳು, ಉಸ್ತುವಾರಿ ಕೆಪಿಸಿಸಿ ಪದಾಧಿಕಾರಿಗಳು ಹಾಗೂ 2023ರ ವಿಧಾನಸಭಾ ಆಕಾಂಕ್ಷಿ ಅಭ್ಯರ್ಥಿಗಳು ಹಾಗೂ ಮುಂಚೂಣಿ ಘಟಕ, ವಿಭಾಗ, ಸೆಲ್‌ಗಳ ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Prajadhwani yatre: 17ರಂದು ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶಕ್ಕೆ ಭರ್ಜರಿ ಸಿದ್ಧತೆ