Karnataka Election Result 2023 ಕಾಂಗ್ರೆಸ್ ಭರ್ಜರಿ ಗೆಲುವು ಕೊಂಡಾಡಿದ ಚಕ್ರವರ್ತಿ ಸೂಲಿಬೆಲೆ!

Published : May 13, 2023, 04:36 PM IST
Karnataka Election Result 2023 ಕಾಂಗ್ರೆಸ್ ಭರ್ಜರಿ ಗೆಲುವು ಕೊಂಡಾಡಿದ ಚಕ್ರವರ್ತಿ ಸೂಲಿಬೆಲೆ!

ಸಾರಾಂಶ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವನ್ನು ಚಕ್ರವರ್ತಿ ಸೂಲಿಬೆಲೆ ಕೊಂಡಾಡಿದ್ದಾರೆ. ಅದ್ಭುತ ಗೆಲುವು ಹಾಗೂ ಅತ್ಯುತ್ತಮ ರಣತಂತ್ರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.

ಬೆಂಗಳೂರು(ಮೇ.13): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ದಾಖಲಿಸಿದೆ. ಬಿಜೆಪಿ ಹೇಳಹೆಸರಿಲ್ಲದಂತಾಗಿದೆ. ಕಳೆದ ಚುನಾವಣೆಯಲ್ಲಿ 104 ಸ್ಥಾನ ಗೆದ್ದು ಬಳಿಕ ಪಕ್ಷಾಂತರಿಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸಿದ್ದ ಬಿಜೆಪಿ ಈ ಬಾರಿ 65 ಸ್ಥಾನಕ್ಕೆ ಕುಸಿದಿದೆ. ಬಿಜೆಪಿಯ ಘಟಾನುಘಟಿ ನಾಯಕರು ಮುಗ್ಗರಿಸಿದ್ದಾರೆ. ಇನ್ನು ಗೆದ್ದ ನಾಯಕರು ಹರಸಾಹಸದ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇದು ಬಿಜೆಪಿ ಭ್ರಷ್ಟಾಚಾರ ವಿರುದ್ದದ ಗೆಲುವು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗ, ಹಿಂದೂ ಯವ ಬ್ರಿಗೇಡ್ ಸಂಸ್ಥಾಪ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಕಾಂಗ್ರೆಸ್ ಭರ್ಜರಿ ಗೆಲುವಿಗೆ ಡಿಕೆ ಶಿವಕುಮಾರ್ ಹಾಗೂ ಅತ್ಯುತ್ತಮ ರಣತಂತ್ರವನ್ನು ಕೊಂಡಾಡಿದ್ದಾರೆ. 

ಕಾಂಗ್ರೆಸ್ ಅಭೂತಪೂರ್ವ ಗೆಲುವಿಗೆ ಡಿಕೆ ಶಿವಕುಮಾರ್ ಕೊಂಡಾಡಿದ ಚಕ್ರವರ್ತಿ ಸೂಲೆಬೆಲೆ , ಇದೇ ವೇಳೆ ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.  ಕರ್ನಾಟಕ ಮತದಾರರು ಸ್ಥಿರ ಸರ್ಕಾರವನ್ನು ಆಯ್ಕೆ ಮಾಡಿರುವುದು ಉತ್ತಮ ಬೆಳವಣಿಗೆ. ಕರ್ನಾಟಕದ ಮತದಾರರು ಕೆಟ್ಟ ಆಯ್ಕೆ ಮಾಡುತ್ತಾರೆ ಎಂದು ಕೆಲವರು ದೂಷಿಸುತ್ತಾರೆ. ಆದರೆ ಜನ ಬುದ್ಧಿವಂತರು. ನಾಯಕರ ದುರಂಹಕಾರ ಜನರಿಗೆ ಸರಿ ಹೋಗಲಿಲ್ಲ. ಬಿಜೆಪಿಗೆ ಪಾಠ ಕಲಿಯುವ ಹಾಗೂ ಆತ್ಮಾವನ ಮಾಡಿಕೊಳ್ಳುವ ಸಮಯವಾಗಿದೆ. ಕಾಂಗ್ರೆಸ್ ಅದ್ಭುತ ಗೆಲುವು ಹಾಗೂ ಅತ್ಯುತ್ತಮ ರಣತಂತ್ರಕ್ಕೆ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಚಕ್ರವರ್ತಿ ಸೂಲಿಬೆಲೆ ಟ್ವೀಟ್ ಮಾಡಿದ್ದಾರೆ.

 

 

Karnataka Election Result 2023 ಕನಕಪುರದಲ್ಲಿ ಬಂಡೆ ಪ್ರಚಂಡ, ಸಾಮ್ರಾಟ ಸಾಷ್ಟಾಂಗ!

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿತ್ತು.ಬಳಿಕ ಪಕ್ಷಾಂತರದಿಂದ ಬಿಜೆಪಿ ಸರ್ಕಾರ ಆಧಿಕಾರಕ್ಕೇರಿತು. ಕಳೆದ ಮೂರುವರೇ ವರ್ಷ ಆಡಳಿದಲ್ಲಿ ಭ್ರಷ್ಟಾಚಾರ, ಕಮಿಷನ್ ಸೇರಿದಂತೆ ಹಲವು ಆರೋಪಗಳು ಬಿಜೆಪಿ ಹೆಗಲೇರಿತ್ತು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬಸವರಾಜ್ ಬೊಮ್ಮಾಯಿಗೆ ಪಟ್ಟ ನೀಡಿದ್ದರು. ಸಮರ್ಥ ನಾಯಕತ್ವದ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಮತದಾರರ ಬಿಜೆಪಿಗೆ ಮತ ನೀಡಲಿಲ್ಲ. ಕಾಂಗ್ರೆಸ್ ಕೈಹಿಡಿದ ಮತದಾರರ ಅಭೂತಪೂರ್ವ ಗೆಲುವು ನೀಡಿದ್ದಾರೆ.

Chikkamagaluru Election Result 2023: ಸಿಟಿ ರವಿ ಮುಂದೆ ಸೀಟಿ ಹೊಡೆದ ತಮ್ಮಯ್ಯ!

16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂದು ಜ್ಯೋತಿಷಿ ಹೇಳಿದ್ದು 'The Devilʼ ಸಿನಿಮಾದಲ್ಲಿ ನಿಜವಾಯ್ತು, Darshan ರಿಯಲ್‌ ಲೈಫ್‌ನಲ್ಲಿ ಏನಾಗತ್ತೆ?
ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!