
ತುಮಕೂರು(ಜ.22): ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಸಿಎಂ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹೀಗಾಗಿ, ನಾವು ಇಡೀ ತಂಡವಾಗಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತುಮಕೂರು ವಿಶ್ವವಿದ್ಯಾಲಯದ ಮುಂಭಾಗದಲ್ಲಿರುವ ಬಾಯರ್ಸ್ ಕಾಫಿ ಶಾಫ್ ಬಳಿ ‘ವಿಜಯ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರಕಾರ ಆಡಳಿತದಲ್ಲಿ ಇದ್ದರೆ ರಾಜ್ಯದ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗುತ್ತದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಪರವಾಗಿ ಬಿರುಗಾಳಿ ಬೀಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಭರ್ಜರಿ ಜಯಭೇರಿ ಬಾರಿಸಲಿದೆ. ನಮ್ಮ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರಿಗೆ ಬಿಜೆಪಿ ಮೇಲೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಡಳಿತದ ಮೇಲೆ ನಂಬಿಕೆ ಇದೆ. ಹೀಗಾಗಿ, ಈ ಬಾರಿಯ ಚುನಾವಣೆಯಲ್ಲಿ 130 ಸೀಟುಗಳನ್ನು ಗೆಲ್ಲುತ್ತೇವೆ.
ಸಿದ್ಧಗಂಗಾ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ: ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ-ಸಿಎಂ ಬೊಮ್ಮಾಯಿ
ಜನತೆಯ ಅಭಿಪ್ರಾಯ ಸಂಗ್ರಹಿಸಿ ಮುಂಬರುವ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ನಾಲ್ಕು ಮೂಲೆಗಳಿಂದಲೂ ಯಾತ್ರೆ ನಡೆಸಿ, ಜನಾಭಿಪ್ರಾಯ ಸಂಗ್ರಹಿಸಿ, ಅದರ ಆಧಾರದಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಈ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇದಕ್ಕೂ ಮೊದಲು ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಮಹಿಳೆಯರ ಕುರಿತಾಗಿ ವಿಶಾಲ ದೃಷ್ಟಿಕೋನವನ್ನು ಹೊಂದಿರುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ. ಮಹಿಳೆಯರು ಸಂಘಟಿತರಾಗಿ, ಭಾಜಪದಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕು. ಬಿಜೆಪಿಯ ನಾಯಕಿಯರೂ ಆಗಬೇಕು. ಸುಷ್ಮಾ ಸ್ವರಾಜ್ ಅವರು ಪಕ್ಷದ ಪ್ರಮುಖ ನಾಯಕಿಯಾಗಿದ್ದರು. ಎಲ್ಲಾ ಪ್ರಮುಖರೊಂದಿಗೆ ಹೆಗಲಿಗೆ ಹೆಗಲು ನೀಡಿ ಕಾರ್ಯ ನಿರ್ವಹಿಸಿದ್ದರು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.