ಕರ್ನಾಟಕದ ಮಾಜಿ ಸಚಿವ ಕೊರೋನಾಗೆ ಬಲಿ, ಬಿಎಸ್‌ವೈ ಸಂತಾಪ

By Suvarna News  |  First Published May 9, 2021, 5:37 PM IST

* ಮಾಜಿ ಸಚಿವ, ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ ಕೊರೋನಾಗೆ ಬಲಿ
* ಕೊರೋನಾ ಸೋಂಕು ತಗುಲಿದ್ದರಿಂದ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಶಾಣಪ್ಪ
* ಚಿಕಿತ್ಸೆ ಫಲಕಾರಯಾಗದೇ ಭಾನುವಾರ ನಿಧನ 


ಕಲಬುರಗಿ, (ಮೇ.09): ಮಾಜಿ ಸಚಿವ, ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

82 ವರ್ಷದ ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಭಾನುವಾರ) ಮೃತಪಟ್ಟಿದ್ದಾರೆ. 

Latest Videos

undefined

ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಜೆ.ಹೆಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಕೋವಿಡ್‌ಗೆ ಬಲಿ

ಕೆ.ಬಿ. ಶಾಣಪ್ಪ ಅವರು ಈ ಹಿಂದೆ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಆದ್ರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಯಾರಿಗೂ ಕೇಳದೆ ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಡಾ. ಉಮೇಶ್ ಜಾಧವ್‌ ಅವರಿಗೆ ನೀಡಿದ್ದರಿಂದು ಅವರು ಅಸಮಾಧಾನಗೊಂಡಿದ್ದರು. ಅಲ್ಲದೇ ಬಳಿಕ ಕಾಂಗ್ರೆಸ್‌ ಸೇರಿದ್ದರು.

ಬಿಎಸ್‌ವೈ ಸಂತಾಪ
ಮಾಜಿ ಸಚಿವ ಕೆ.ಬಿ.ಶಾಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ನಾಯಕರಾಗಿ, ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು, ಸದನದಲ್ಲಿ ಸದಾ ನೊಂದ ಜನರ ದನಿಯಾಗಿದ್ದರು.

ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ಸ್ವಭಾವದ ನಾಯಕರನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

click me!