
ಮೈಸೂರು/ಮಂಡ್ಯ, (ಮೇ.21): ಆಧುನಿಕ ಗಾಂಧಿವಾದಿ ಎಂದೇ ಪ್ರಸಿದ್ಧಿಯಾಗಿದ್ದ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ (80) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಚೈನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೈಸೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು (ಶುಕ್ರವಾರ) ಮಧ್ಯಾಹ್ನ ಮೈಸೂರಿನ ಕುವೆಂಪು ನಗರ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ.
ಹುಡ್ಗೀರ ಕಣ್ಮಣಿ BBK ಅರವಿಂದ್, 10 ಜಿಲ್ಲೆ ಸಂಪೂರ್ಣ ಬಂದ್; ಮೇ.21ರ ಟಾಪ್ 10 ಸುದ್ದಿ!
ಕೆ.ಆರ್.ಪೇಟೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು. ಒಂದು ಬಾರಿ ಸಂಸದರಾಗಿದ್ದರು. 1996ರಲ್ಲಿ ಸೋಲಿಲ್ಲದ ಸರದಾರರಾಗಿದ್ದ ಮತ್ತೊಬ್ಬ ಗಾಂಧಿಯಾಗಿದ್ದ ಮಾಜಿ ಸಂಸದ ಜಿ.ಮಾದೇಗೌಡರನ್ನು ಸೋಲಿಸಿ ಸಂಸದರಾಗಿದ್ದರು.
1988ರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕೆ.ಆರ್.ಪೇಟೆ ತಾಲೂಕಿನ ಮೊದಲ ಸಚಿವರಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದರು.
ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 2006 ರಿಂದ 2008 ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.
ಡಿಸಿಎಂ ಕಂಬನಿ
ಮಾಜಿ ಸಭಾಧ್ಯಕ್ಷರಾದ ಕೆ.ಆರ್.ಪೇಟೆ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಂಬನಿ ಮಿಡಿದಿದ್ದಾರೆ. ಅವರ ನಿಧನ ಬಹಳ ನೋವುಂಟು ಮಾಡಿದೆ. ಕೃಷ್ಣ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ, ಅವರ ಪಕ್ಷದ ಕಾರ್ಯಕರ್ತರಿಗೆ ನೀಡಲಿ ಎಂದು ಡಿಸಿಎಂ ಅವರು ಪ್ರಾರ್ಥನೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.