2 ತಿಂಗಳಲ್ಲಿ ಕರ್ನಾಟಕದ ಆರ್ಥಿಕತೆ ಕಾಂಗ್ರೆಸ್‌ನಿಂದ ಸರ್ವನಾಶ, ರಾಜೀವ್ ಚಂದ್ರಶೇಖರ್ ಆರೋಪ!

Published : Aug 21, 2023, 10:01 PM IST
2 ತಿಂಗಳಲ್ಲಿ ಕರ್ನಾಟಕದ ಆರ್ಥಿಕತೆ ಕಾಂಗ್ರೆಸ್‌ನಿಂದ ಸರ್ವನಾಶ, ರಾಜೀವ್ ಚಂದ್ರಶೇಖರ್ ಆರೋಪ!

ಸಾರಾಂಶ

ಭ್ರಷ್ಟಾಚಾರ, ದುರಾಡಳಿತ,ಸುಳ್ಳು ಭರವಸೆಗಳಿಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರ್ಥಿಕತೆಯನ್ನು ನಾಶ ಮಾಡಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. ಇದೇ ವೇಳೆ ಕಾವೇರಿ ನೀರು ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆ ನೀತಿಯನ್ನು ಖಂಡಿಸಿದ್ದಾರೆ.  

ನವದೆಹಲಿ(ಆ.21) ಭ್ರಷ್ಟಾಚಾರದಲ್ಲಿ ಮಳುಗಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆರ್ಥಿಕತೆಯನ್ನು ಸರ್ವನಾಶ ಮಾಡಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. ಸುಳ್ಳು ಭರವಸೆ, ದುರಾಡಳಿತದಿಂದ ಕರ್ನಾಟಕದಲ್ಲಿ ಅಭಿವೃದ್ದಿ ಶೂನ್ಯವಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹಲವು ಜಿಲ್ಲೆಗಳಲ್ಲಿ ಬರಾಗಲವಿದೆ. ಆದರೆ ಇಂಡಿಯಾ ಒಕ್ಕೂಟದಲ್ಲಿರುವ ಡಿಎಂಕೆ ಒತ್ತಡಕ್ಕೆ ಮಣಿದು ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ರಾಜೀವ್ ಚಂದ್ರಶೇಖರ್ ಕಾಂಗ್ರೆಸ್ ಸರ್ಕಾರದ  ಅಸಮರ್ಪಕ ಆಡಳಿತವನ್ನು ಪ್ರಶ್ನಿಸಿದ್ದಾರೆ. ಕರ್ನಾಟಕ ಸರ್ಕಾರ ರೈತರನ್ನು ನಿರ್ಲಕ್ಷಿಸಿದೆ. ಜೊತೆ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ತನ್ನ ಸುಳ್ಳು ಭರವಸೆಗಳಿಂದ ಅಭಿವೃದ್ಧಿ ಮರೀಚಿಕೆಯಾಗಿದೆ. ಇದು ಎಂಎನ್‌ಸಿ ಸರ್ಕಾರ ಎಂದು ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. 

ನಾಲ್ಕು ದೇಶಗಳ ಸಚಿವರೊಂದಿಗೆ ರಾಜೀವ್‌ ಚಂದ್ರಶೇಖರ್‌ ದ್ವಿಪಕ್ಷೀಯ ಸಭೆ!

ಕಳೆದ ಎರಡು ತಿಂಗಳಿನಿಂದ 50ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ಜಿಲ್ಲೆಗಳು ಬರಗಾಲದ ಪರಿಸ್ಥಿತಿ ಎದುರಿಸುತ್ತಿದೆ. 85 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿದೆ. ಆದರ ಕಾಂಗ್ರೆಸ್ ಸರ್ಕಾರ ಇದ್ಯಾವುದರ ಚಿಂತೆ ಇಲ್ಲ. ತನ್ನ ಸುಳ್ಳು ಭರವಸೆ ನೀಡುತ್ತಾ ಸಾಗುತ್ತಿದೆ. ರೈತರನ್ನು ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ನೀರಿನ ಕೊರತೆ ಇದೆ. ಕೆಆರ್‌ಎಸ್ ಜಲಾಶಯ ಬರಿದಾಗುತ್ತಿದೆ. ಮಳೆ ಕೊರತೆ ಕಾರಣ ನೀರಿನ ಸಮಸ್ಯೆ ಎದುರಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಘಮಾಂಡಿಯಾ ಘಟಬಂಧನ್ ಒಕ್ಕೂಟದ ಪಾಲುದಾರ ಡಿಎಂಕೆಯ ಒತ್ತಡಕ್ಕೆ ಮಣಿದಿದೆ. ಡಿಎಂಕೆ ಸೂಚನೆ ಮೇರೆಗೆ ಕಾವೇರಿ ನೀರು ತಮಿಳುನಾಡಿಗೆ ಹರಿಸಲಾಗಿದೆ. ಕಾವೇರಿ ನೀರು ಹರಿಸುವ ಮುನ್ನ ಸರ್ವಪಕ್ಷ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿತ್ತು. ಆದರೆ ಕಾಂಗ್ರೆಸ್ ಒತ್ತಡಕ್ಕೆ ಮಣಿದು ಏಕಪಕ್ಷೀಯವಾಗಿ ನೀರು ಹರಿಸಿದೆ ಎಂದು ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.

ಕೇಂದ್ರದ ಹಣ ನೇರವಾಗಿ ಜನರ ಕೈಗೆ ಹೋಗ್ತಿದೆ; ಮೋದಿ ಸರ್ಕಾರದ ಡಿಜಿಟಲ್‌ ಕ್ಷೇತ್ರದ ಕ್ರಾಂತಿಯೇ ಕಾರಣ: ರಾಜೀವ್ ಚಂದ್ರಶೇಖರ್

ತಮಿಳುನಾಡಿಗೆ 10 ಟಿಎಂಸಿ  ನೀರು ಬಿಡುವ ನಿರ್ಧಾರ ಕೈಗೊಂಡಿದೆ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರು ಹಾಗೂ ಜನರಿಗೆ ಅನ್ಯಾಯ ಮಾಡಿದೆ. ಕರ್ನಾಟಕದ ಬುಹತೇಕ ಜಲಾಶಗಳು ನೀರಿನ ಕೊರತೆ ಎದುರಿಸುತ್ತಿದೆ. ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ತನ್ನ ಒಕ್ಕೂಟವನ್ನು ಮೆಚ್ಚಿಸುವುದೇ ಮುಖ್ಯವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ದುರಾಡಳಿತದಿಂದ ಜನರು ಸಮಸ್ಯೆಯಲ್ಲಿ ಸಿಲುಕಿದ್ದಾರೆ ಎಂದು ಆರೋಪಿಸಿದ್ದಾರೆ.  
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌