
ಬೆಂಗಳೂರು(ಆ.04): ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೊರೋನಾ ಸೋಂಕು ದೃಢಪಟ್ಟ ಬೆನ್ನಲ್ಲೇ , ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ಸೋಂಕು ದೃಢಪಟ್ಟಿದೆ.
"
ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, 'ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ.' ಎಂದಿದ್ದಾರೆ.
ಸಿಎಂಗೆ ಕೊರೋನಾ: ಮತ್ತಿಬ್ಬರು ಸಚಿವರು ಸೆಲ್ಫ್ ಕ್ವಾರಂಟೈನ್
ಕೊರೋನಾ ಗೆದ್ದ ಬಿಜೆಪಿ ಶಾಸಕ: ಚಿಕಿತ್ಸೆ ನೀಡಿದ ವೈದ್ಯಕೀಯ ಸಿಬ್ಬಂದಿಗೆ ಸನ್ಮಾನ
"
ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿ ಕೊರೋನಾ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದಾರೆ. 'ನನ್ನ ಕೊರೋನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.' ಎಂದಿದ್ದಾರೆ.
ಇನ್ನು ಮೂತ್ರ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಪುತ್ರ ಯತೀಂದ್ರ ಜೊತೆಗಗೆ ಸಿದ್ದರಾಮಯ್ಯ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸಿಎಂ ಯಡಿಯೂರಪ್ಪ ಕೂಡಾ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುವುದು ಉಲ್ಲೇಖನೀಯ.
ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕೂಡಾ ಈ ಸಂಬಂಧ ಟ್ವೀಟ್ ಮಾಡಿ ಸಿದ್ದರಾಮಯ್ಯ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ. ಅಲ್ಲದೇ ತಾವು ಮಣಿಪಾಲ್ ಆಸ್ಪತ್ರೆಗೆ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿಯೂ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.