
ಹೈದ್ರಾಬಾದ್ (ಮಾ.26): ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರು ಆಂಧ್ರಪ್ರದೇಶ ತಿರುಪತಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ಶೀಘ್ರವೇ ಉಪಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈ ವೇಳೆ ರತ್ನಪ್ರಭಾ ಅವರು ಬಿಜೆಪಿ ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷದ ಜಂಟಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಕೆಲ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರತ್ನಪ್ರಭಾ ಅವರು ಮೂಲತಃ ಆಂಧ್ರದ ಪ್ರಕಾಶಂ ಜಿಲ್ಲೆಯವರು.
ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿ ಸೇರ್ಪಡೆ ..
ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾದ ಅವರು, ಈ ಹಿಂದೆ ಸಿಎಂ ವೈ.ಎಸ್. ರಾಜಶೇಖರ ರೆಡ್ಡಿ ಅವಧಿಯಲ್ಲಿ ಕೆಲಕಾಲ ನಿಯೋಜನೆ ಮೇಲೆ ಆಂಧ್ರಪ್ರದೇಶ ಸರ್ಕಾರದಲ್ಲೂ ಕೆಲಸ ಮಾಡಿ, ಬಳಿಕ ಕರ್ನಾಟಕಕ್ಕೆ ಮರಳಿದ್ದರು. ರತ್ನಪ್ರಭಾ ಅವರ ತಂದೆ, ಸೋದರ ಮತ್ತು ಪತಿ ಕೂಡಾ ಐಎಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ ಅನುಭವದ ಜೊತೆಗೆ ಆಂಧ್ರದಲ್ಲಿ ಪ್ರಭಾವ ಹೊಂದಿದ್ದಾರೆ ಎನ್ನಲಾಗಿದೆ.
ಹೀಗಾಗಿ ಸೂಕ್ತ ಅಭ್ಯರ್ಥಿಯಾಗಿ ಹುಡುಕಾಡುತ್ತಿರುವ ಬಿಜೆಪಿ, ಈಗಾಗಲೇ ಕರ್ನಾಟಕದಲ್ಲಿ ತಮ್ಮ ಪಕ್ಷ ಸೇರಿರುವ ರತ್ನಪ್ರಭಾ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ನಿರ್ಧಾರ ಕೈಗೊಂಡಿತ್ತು. ಆದರೆ ತಿರುಪತಿಯಲ್ಲಿ ತಮ್ಮ ಅಭ್ಯರ್ಥಿಯನ್ನ ಕಣಕ್ಕೆ ಇಳಿಸಿಯೇ ತೀರುವುದಾಗಿ ಜನಸೇನಾ ಪಕ್ಷ ಕೂಡಾ ಹಠಕ್ಕೆ ಬಿದ್ದ ಹಿನ್ನೆಲೆಯಲ್ಲಿ, ರತ್ನಪ್ರಭಾ ಅವರನ್ನೇ ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಉಭಯ ಪಕ್ಷಗಳು ಸಮ್ಮತಿಸಿವೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.