ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್: ಕುಮಾರಸ್ವಾಮಿ ಕಿಡಿ

By Sathish Kumar KH  |  First Published Nov 9, 2023, 6:01 PM IST

ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ!


ಬೆಂಗಳೂರು (ನ.09): ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಈ ಕುರಿತು ತಮ್ಮ ಸಮಾಜಿಕ ಜಾಲತಾಣದ ಎಕ್ಸ್‌ ನಲ್ಲಿ ಪೋಸ್ಟ್‌ಮಾಡಿಕೊಂಡಿರುವ ಅವರು, ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್‌ ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ. 'ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ' ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರಕಾರ ಕತ್ತರಿ ಹಾಕಿದೆ ಎನ್ನುವ ಸರಕಾರಿ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು. ಕೇಡುಗಾಲಕ್ಕೆ ಕೋಳಿಯು ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ. 

Tap to resize

Latest Videos

ವಿಜಯಪುರ ಜಿಲ್ಲೆಯೇ 6 ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಸೂಕ್ತ: ಉನ್ನತ ಸಮಿತಿ ವರದಿ

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್ ಫಾರ್ಮ್, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರಕಾರವು, ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ! ಸರಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಲೇಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಒಂದು ವೇಳೆ ಆದೇಶ ವಾಪಸ್ ಪಡೆಯದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ, ಹೊರಗೆ ಹೋರಾಟಕ್ಕೆ ಇಳಿಯುತ್ತದೆ.

ಅಂಕೋಲಾ ಏರ್ಪೋರ್ಟ್‌ ನಿರ್ಮಾಣಕ್ಕೆ ಭೂಮಿ ಕೊಟ್ಟವರಿಗೆ ಪರ್ಯಾಯ ಭೂಮಿ: ಸಚಿವ ಮಂಕಾಳ್‌ ವೈದ್ಯ ಭರವಸೆ

ಕಾಂಗ್ರೆಸ್ ಬಂಡವಾಳಶಾಹಿ ಮನಃಸ್ಥಿತಿಯ ಲಾಭಕೋರ ಪಕ್ಷ. ಕಸಾಯಿ ಸಂಸ್ಕೃತಿಯ ಕಟುಕ ಪಕ್ಷ. ಅದಕ್ಕೆ ಕರುಣೆ, ದಯೆ, ದಾಕ್ಷಿಣ್ಯ ಎನ್ನುವುದು ಇರುವುದಿಲ್ಲ. ಇಡೀ ಕರ್ನಾಟಕವನ್ನೇ #ATM ಮಾಡಿಕೊಂಡು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರಕಾರ, ಈಗ ರೈತರನ್ನೂ ಕೊಳ್ಳೆ ಹೊಡೆಯುತ್ತಿದೆ. ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್  ಸರಕಾರದ ಪಾಪದ ಕೊಡ ತುಂಬಿದೆ. ವಿನಾಶಕಾಲೇ ವಿಪರೀತ ಬುದ್ಧಿ! ವಿನಾಶಕಾಲೇ ವಿಪರೀತ ಆಸೆ! #ರೈತದ್ರೋಹಿ_ಕಾಂಗ್ರೆಸ್_ಸರಕಾರ ಎಂದು ಟ್ವೀಟ್‌ ಮಾಡಿಕೊಂಡಿದ್ದಾರೆ.

click me!