ಅಮಿತ್ ಶಾ ಮಂಡ್ಯಕ್ಕೆ ಬಂದು ಸಾರ್ವಜನಿಕ ಸಭೆಯಲ್ಲಿ ರಾಜ್ಯ ನಮ್ಮ ಕುಟುಂಬದ ಎಟಿಎಂ ಎಂದಿದ್ದಾರೆ. ಯಾವುದಾದರೂ ಪ್ರಕರಣದಲ್ಲಿ ದೇವೇಗೌಡ ಅವರು ಪಿಎಂ ಆಗಿದ್ದಾಗ, ನಾನು ಸಿಎಂ ಆಗಿದ್ದಾಗ ಸರ್ಕಾರದ ಖಜಾನೆ ಲೂಟಿ ಮಾಡಿದ್ರೆ ಒಂದೇ ಪ್ರಕರಣ ತೋರಿಸಲಿ ಎಂದು ಸವಾಲು ಹಾಕಿದ ಕುಮಾರಸ್ವಾಮಿ
ಮೈಸೂರು(ಜ.04): ಕೇಂದ್ರ ಗೃಹ ಸಚಿವ ಅಮಿತ್ ಶಾ ದೇವೇಗೌಡರ ಉಗುರಿಗೂ ಸಮನಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸೋಮವಾರ ‘ಶರಣರೊಂದಿಗೆ ಕುಮಾರಣ್ಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಮಂಡ್ಯಕ್ಕೆ ಬಂದು ಸಾರ್ವಜನಿಕ ಸಭೆಯಲ್ಲಿ ರಾಜ್ಯ ನಮ್ಮ ಕುಟುಂಬದ ಎಟಿಎಂ ಎಂದಿದ್ದಾರೆ. ಯಾವುದಾದರೂ ಪ್ರಕರಣದಲ್ಲಿ ದೇವೇಗೌಡ ಅವರು ಪಿಎಂ ಆಗಿದ್ದಾಗ, ನಾನು ಸಿಎಂ ಆಗಿದ್ದಾಗ ಸರ್ಕಾರದ ಖಜಾನೆ ಲೂಟಿ ಮಾಡಿದ್ರೆ ಒಂದೇ ಪ್ರಕರಣ ತೋರಿಸಲಿ ಎಂದು ಸವಾಲು ಹಾಕಿದರು.
ದೇಶದಲ್ಲಿ 800ಕ್ಕೂ ಹೆಚ್ಚು ಶಾಸಕರನ್ನು, ಸಂಸದರನ್ನು ಖರೀದಿ ಮಾಡಿರುವ ಇತಿಹಾಸ ಇದ್ರೇ ಅದು ಬಿಜೆಪಿಯದ್ದು. ಚುನಾವಣೆಗೂ ಮುನ್ನವೇ ಆಪರೇಷನ್ ಕಮಲ ಹುನ್ನಾರ ಮಾಡಿದೆ. ರಾಜ್ಯದಿಂದ ಬಿಜೆಪಿ ಪಕ್ಷವನ್ನು ಕಳುಹಿಸಲು ಜೆಡಿಎಸ್ ಪಣ ತೊಟ್ಟಿದೆ ಎಂದ ಅವರು, ನಿಮ್ಮ ರಾಜಕಾರಣ ಉತ್ತರ ಭಾರತದಲ್ಲಿ ಇಟ್ಕೊಳ್ಳಿ, ಕರ್ನಾಟಕದಲ್ಲಿ ಅಲ್ಲ ಎಂದು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.
undefined
ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'
ಅಧಿಕಾರ ಹಸ್ತಾಂತರದಲ್ಲಿ ನನ್ನ ತಪ್ಪಿಲ್ಲ:
ಜೆಡಿಎಸ್-ಬಿಜೆಪಿ 20:20 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಧಿಕಾರ ಹಸ್ತಾಂತರ ಮಾಡುವ ವಿಚಾರದಲ್ಲಿ ನನ್ನದೇನೂ ತಪ್ಪಿಲ್ಲ. 2006ರಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅದು ದೆಹಲಿ ನಾಯಕರು ನಿಶ್ಚಯ ಮಾಡಿದ ಸರ್ಕಾರವಲ್ಲ. ಆಗ ಯಡಿಯೂರಪ್ಪ ನನ್ನನ್ನು ಭೇಟಿ ಮಾಡಿದರು. ಬಿಜೆಪಿಯಲ್ಲಿ ತಮಗೆ ಆದ ನೋವಿನ ಬಗ್ಗೆ ಚರ್ಚಿಸಿ, ಜೆಡಿಎಸ್ ಪಕ್ಷಕ್ಕೆ ಬರುವ ಬಗ್ಗೆಯೂ ಮಾತನಾಡಿದರು. ಆಗ ದುಡುಕಿ ರಾಜೀನಾಮೆ ನೀಡಬೇಡಿ ಎಂದು ಸಲಹೆ ನೀಡಿದ್ದೆ ಎಂದರು.
ಕರ್ನಾಟಕದಿಂದಲೇ ಬಿಜೆಪಿಯ ಸಮಾಪ್ತಿ ಆರಂಭ : ಕುಮಾರಸ್ವಾಮಿ
ಈ ವೇಳೆ ದೇವೇಗೌಡರ ಭಾವನೆಗಳನ್ನು ಮೊದಲ ಬಾರಿ ಧಿಕ್ಕರಿಸಿದೆ. ಅಧಿಕಾರ ಹಸ್ತಾಂತರ ವಿಚಾರದಲ್ಲಿ ನೀವು ಮಧ್ಯೆ ಬರಬೇಡಿ ಎಂದೂ ಹೇಳಿದ್ದೆ. ವೈಕುಂಠ ಏಕಾದಶಿ ದಿವಸ ಹೇಳುತ್ತಿದ್ದೇನೆ. ನಾನು ಅಧಿಕಾರ ಬಿಡಲು ತಯಾರಿದ್ದೆ. ಆಗ ಬಿಜೆಪಿಯಲ್ಲಿದ್ದ ಯಶವಂತ್ ಸಿನ್ಹಾ ಮತ್ತು ದೇವೇಗೌಡರು ಚರ್ಚೆ ನಡೆಸಿದ ನಂತರ ಹಲವು ರಾಜಕೀಯ ಬೆಳವಣಿಗೆಗಳಾದವು ಎಂದರು.
ಸಂಕ್ರಾಂತಿ ನಂತರ 2ನೇ ಪಟ್ಟಿ:
ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆಯಾಗಿದೆ. ಎರಡನೇ ಪಟ್ಟಿಬಿಡುಗಡೆ ಸಂಬಂಧ 4-5 ಕ್ಷೇತ್ರಗಳ ಪ್ರಮುಖರ ಸಭೆ ಕರೆದು ತೀರ್ಮಾನ ಮಾಡುತ್ತೇನೆ. ಸಂಕ್ರಾಂತಿ ನಂತರ ಎರಡನೇ ಪಟ್ಟಿಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.