ಬೈರತಿ ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ- ರೇಣುಕಾಚಾರ್ಯ 

By Suvarna News  |  First Published Oct 20, 2024, 11:28 PM IST

ಸಚಿವ ಬೈರತಿ ಸುರೇಶ ಮಹಿಳೆಯರ ಮಾನಹಾನಿಯಾಗುವಂತಹ ಹೇಳಿಕೆ ನೀಡಿದ್ದನ್ನು ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ.


ದಾವಣಗೆರೆ, (ಅ.20): ಸಚಿವ ಬೈರತಿ ಸುರೇಶ ಮಹಿಳೆಯರ ಮಾನಹಾನಿಯಾಗುವಂತಹ ಹೇಳಿಕೆ ನೀಡಿದ್ದನ್ನು ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ.

ಹೊನ್ನಾಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸುರೇಶ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದರು. ಸಚಿವ ಸ್ಥಾನದಲ್ಲಿರುವ ಬೈರತಿ ಸುರೇಶ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದು ಸರಿಯಲ್ಲ. ಯಡಿಯೂರಪ್ಪ ಮತ್ತು ನಮ್ಮ ಸಂಬಂಧ 35 ವರ್ಷಗಳಿಂದ ಇದೆ. ಭೈರತಿ ಸುರೇಶ ಇನ್ನೂ ರಾಜಕೀಯದಲ್ಲಿ ಬಚ್ಚಾ.  ತಾವು ಸಚಿವರಾಗಿ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ಕೊಡಬಾರದು ಎಂದು ಅವರು ತಾಕೀತು ಮಾಡಿದರು. ಯಡಿಯೂರಪ್ಪ, ಮೈತ್ರಾದೇವಿ, ಶೋಭಾ ಕರಂದ್ಲಾಜೆ ಬಗ್ಗೆ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇನೆ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಅವರು ಹೇಳಿದರು. 

Tap to resize

Latest Videos

ಯಡಿಯೂರಪ್ಪ ಹೆಂಡ್ತಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ: ಸಚಿವ ಬೈರತಿ ಸುರೇಶ್

ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಬೇಕು. ತಮ್ಮ ಮೇಲೆ ಅಪವಾದ ಬಂದ ತಕ್ಷಣ ಮಹಿಳೆಯರ ಗುಣನಡತೆ ಕುರಿತು ಆರೋಪ ಮಾಡುವುದು ಇಂತಹವರಿಗೆ ಅಭ್ಯಾಸವಾಗಿದೆ. ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವವರ ಗುಣನಡತೆ ಬಗ್ಗೆ ಮಾತನಾಡುವುದು ಅಕ್ಷಮ್ಯ ಎಂದು ಅವರು ತಿಳಿಸಿದರು. 

ಮೈತ್ರಾದೇವಿಯವರು ತಾಯಿ ಸಮಾನ. ಅಂತಹವರು ಸಾವನ್ನಪ್ಪಿ ಹಲವಾರು ವರ್ಷಗಳು ಕಳೆದಿದ್ದು, ಈಗ ಅದರ ಕುರಿತು ಮಾತನಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಬೇಜವಾಬ್ದಾರಿ ಹೇಳಿಕೆಗಳನ್ನು ಭೈರತಿ ಸುರೇಶ ನಿಲ್ಲಿಸದಿದ್ದಲ್ಲಿ ಕಾನೂನು ಹೋರಾಟ ನಿಶ್ವಿತ.  ನಗರಾಭಿವೃದ್ಧಿ ಸಚಿವರಾಗಿದ್ದೀರಿ ಉತ್ತಮ ಅಧಿಕಾರ ನಡೆಸಿಕೊಂಡು ಹೋಗಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.  ಮುಡಾ ಹಗರಣ ಮುಚ್ವಿ ಹಾಕಲು ಈ ರೀತಿ ಹೇಳಿಕೆ ನೀಡಿ ವಿಷಯಾಂತರ ಮಾಡಲು ಹೊರಟಿದ್ದಾರೆ ಎಂದು ರೇಣುಕಾಚಾರ್ಯ ಆರೋಪಿಸಿದ್ದಾರೆ.

click me!