
ಬೆಂಗಳೂರು (ಆ.3): ಮುಡಾ ಹಗರಣ ಎಂದು ನಮ್ಮ ಮೇಲೆ ಆರೋಪ ಮಾಡಿ ಏನೂ ಬಿಂಬಿಸಲು ಹೊರಟಿದೆ. ಅವರ ಹಗರಣವನ್ನ ನಮ್ಮ ಮೂತಿಗೆ ಒರೆಸುವ ಕೆಲಸ ಮಾಡ್ತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದದ ಅವರು, ಬಿಜೆಪಿ-ಜೆಡಿಎಸ್ ಕುತಂತ್ರವನ್ನ ಜನರು ಅರ್ಥ ಮಾಡಿಕೊಳ್ಳಬೇಕು. ಹಾಗಾಗಿ ನಾವು ಜನಾಂದೋಲನ ಕಾರ್ಯಕ್ರಮ ಮಾಡಿದ್ದೇವೆ. ನಮ್ಮ ಮೇಲೆ ಆರೋಪ ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲರ ನೋಟಿಸ್ ನೀಡಿರುವುದು ದುರುದ್ದೇಶದಿಂದ ನೀಡಲಾಗಿದೆ. ರಾಜ್ಯಪಾಲರು ತಮ್ಮ ಹುದ್ದೆ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರ ಬಿಜೆಪಿ ಎಷ್ಟರಪಟ್ಟಿಗೆ ಅಧಿಕಾರ ದುರುಪಯೋಗ ಮಾಡಿಕೊಳ್ತಿದೆ ಅಂತಾ ಇದರಿಂದ ಗೊತ್ತಾಗುತ್ತಿದೆ ಎಂದರು.
10 ವರ್ಷ ಅಲ್ಲ, ಹತ್ತು ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: ಕೇಂದ್ರ ಸಚಿವ ಎಚ್‌ಡಿಕೆ ಸವಾಲು!
ಪ್ರಾಸಿಕ್ಯೂಷನ್ ನೀಡಲು ಅವರ ಬಳಿ ಇನ್ನು ಅನೇಕ ಅರ್ಜಿಗಳಿವೆ. ಆದರೆ ಇದಕ್ಕೇ ಯಾಕೆ ಅಷ್ಟೊಂದು ಪ್ರಾಮುಖ್ಯತೆ ನೀಡಬೇಕು? ಒಬ್ಬ ಖಾಸಗಿ ವ್ಯಕ್ತಿ ಕೊಟ್ಟಿರೋ ಅರ್ಜಿಗೆ ನೋಟಿಸ್ ಕೊಟ್ಟಿದ್ದಾರೆ. ಇದು ಆ ಹುದ್ದೆಗೆ ಗೌರವ ತರುವಂತದ್ದಲ್ಲ. ಸಚಿವ ಸಂಪುಟದಲ್ಲಿ ಈ ಬಗ್ಗೆ ನಾಯಕರು ಉತ್ತರ ಕೊಟ್ಟಿದ್ದಾರೆ ಎಂದರು. ಇದೇ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ಮಾಜಿ ಸಂಸದರು. ಕುಮಾರಸ್ವಾಮಿಗೆ ಡಿಕೆ ಶಿವಕುಮಾರ ವಿಚಾರ ಮಾತನಾಡದಿದ್ರೆ ನಿದ್ದೆ ಬರೊಲ್ಲ, ಊಟ ಸೇರಲ್ಲ ಅದಕ್ಕಾಗಿ ಪದೇಪದೆ ಅವರ ಬಗ್ಗೆ ಮಾತಾಡ್ತಾರೆ. ಅವರಿಗೆ ಪಿಕ್ಚರ್ ತೆಗೆದು ಅಭ್ಯಾಸ ಇದೆ. ಅವರು ಪ್ರೊಡ್ಯೂಸರ್, ನಟನೆ, ಹಂಚಿಕೆ ಎಲ್ಲವೂ ಗೊತ್ತಿದೆ. ಹಾಗಾಗಿ ಸುಳ್ಳನ್ನು ಸತ್ಯ ಮಾಡುವುದು ಅವರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.