ಜೂನ್ 13 ರಂದು ವಿಶೇಷ ಸಾಂದರ್ಭಿಕ ರಜೆ ಘೋಷಿಸಿದ ಸರ್ಕಾರ

By Suvarna News  |  First Published Jun 10, 2022, 8:35 PM IST

* ಇದೇ ಜೂನ್ 13 ರಂದು ವಿಧಾನ ಪರಿಷತ್ ಚುನಾವಣೆ
* ಜೂನ್ 13 ರಂದು ವಿಶೇಷ ಸಾಂದರ್ಭಿಕ ರಜೆ 
* ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಅಧಿಸೂಚನೆ ಹೊರಡಿಸಿದ ಸರ್ಕಾರ 


ಬೆಂಗಳೂರು, (ಜೂನ್.10):  ರಾಜ್ಯಸಭೆ ಚುನಾವಣೆ ಮುಗಿದಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಫಲತಾಂಶ ಪ್ರಕಟವಾಗಲಿದೆ. ಮತ್ತೊಂದೆಡೆ ವಿಧಾನ ಪರಿಷತ್ ಚುನಾವಣೆ ರಂಗೇರಿದೆ.  

ಇದೇ ಜೂನ್ 13 ರಂದು ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಲ್ಲಿ ದ್ವೈವಾರ್ಷಿಕ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಅರ್ಹ ಮತದಾರರಿಗೆ ಸೀಮಿತವಾದಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಅಧಿಸೂಚನೆ ಹೊರಡಿಸಿದೆ.

Tap to resize

Latest Videos

MLC Election; 4 ಮಾಜಿ ಸಿಎಂಗಳಿಂದ ಭರ್ಜರಿ ಪ್ರಚಾರ 

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 13-06-2022ರಂದು ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು , ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು , ಎಲ್ಲಾ ಶೈಕ್ಷಣಿಕ ಸಂಸ್ಥೆಗಳು , ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು , ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು , ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು , ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ , ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ , ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸ್ಥಾಪಿತ ಸಂಸ್ಥೆ ಗಳಲ್ಲಿ ಖಾಯಂ ಆಗಿ, ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂನ್ 13, ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

ಯಾವ ಯಾವ ಜಿಲ್ಲೆಯಲ್ಲಿ ರಜೆ ಸಿಗಲಿದೆ..?
*ಕರ್ನಾಟಕ ವಾಯುವ್ಯ ಪದವೀಧರರ ಕ್ಷೇತ್ರ - ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ.

*ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ - ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ

 *ಕರ್ನಾಟಕ ವಾಯುವ್ಯ ಕ್ಷೇತ್ರ ಶಿಕ್ಷಕರ ಕ್ಷೇತ್ರ- ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ

*ಕರ್ನಾಟಕ ಪಶ್ಚಿಮ ಕ್ಷೇತ್ರ ಶಿಕ್ಷಕರ ಕ್ಷೇತ್ರ- ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ.

ಕರ್ನಾಟಕದ ವಿಜಯಪುರ, ಬಾಗಲಕೋಟೆ , ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ , ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗಳು ನಡೆಯುತ್ತಿದ್ದು ಮತದಾನದ ಅನೂಕೂಲಕ್ಕಾಗಿ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ.
 

click me!