ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ, ಟನ್ ಕಬ್ಬಿಗೆ 3300 ನಿಗದಿ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Published : Nov 07, 2025, 06:17 PM ISTUpdated : Nov 07, 2025, 07:00 PM IST
Siddaramaiah

ಸಾರಾಂಶ

ಪ್ರತಿ ಟನ್‌ ಕಬ್ಬಿಗೆ 3300 ರೂ. ನೀಡಲು ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು (ನ.07): ಪ್ರತಿ ಟನ್‌ ಕಬ್ಬಿಗೆ 3300 ರೂ. ನೀಡಲು ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ ಕಾರ್ಖಾನೆಯಿಂದ 3250 ರೂ. ನೀಡಬೇಕು, ಉಳಿದಂತೆ ಸರ್ಕಾರದಿಂದ 50 ರೂ. ಸಬ್ಸಿಡಿ ನೀಡಲು ನಿರ್ಧಾರ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿದ ಸಚಿವ ಎಚ್‌.ಕೆ. ಪಾಟೀಲ್, ನಿರಂತರವಾಗಿ ಸಂವಾದ ಮಾಡಲಾಗಿದ್ದು, ರೈತರ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳಲಾಗಿದೆ, ಕೇಂದ್ರ ಸರ್ಕಾರದ ಮುಂದೆ ನಿಯೋಗ ತೆಗೆದುಕೊಂಡು ಹೋಗುವ ಬಗ್ಗೆ ಸಹ ತೀರ್ಮಾನ ಆಗಿದೆ, ವಿದ್ಯುತ್ ತೆರಿಗೆ ಕಡಿಮೆ ಮಾಡಲು ಮನವಿ ಬಂದಿದೆ. ಇದಕ್ಕೆ ಪ್ರತ್ಯೇಕ ಸಭೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಇಂದು ಸುಧೀರ್ಘ ಸಭೆ ನಡೆಸಲಾಗಿದೆ. ಡಿಸಿಗಳ ಜೊತೆಗೆ ಸಹ ಚರ್ಚೆ ಮಾಡಲಾಗಿದೆ. ಸಕ್ಕರೆ ಕಾರ್ಖಾನೆ ಮಾಲಿಕರ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಪ್ರತ್ಯೇಕ ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬಳಿಗೆ ನಿಯೋಗ ಕೊಂಡೊಯ್ಯಲು ಸಭೆಯಲ್ಲಿ ತೀರ್ಮಾನ ಆಗಿದೆ. ಸಕ್ಕರೆ ಕಾರ್ಖಾನೆ ಮಾಲಿಕರನ್ನು ಒಳಗೊಂಡಂತೆ ನಿಯೋಗ ಇರಲಿದೆ. ಕಾರ್ಖಾನೆ ಮಾಲೀಕರ ಸಮಸ್ಯೆ ಪರಿಹಾರಕ್ಕೆ ಕೇಂದ್ರಕ್ಕೆ ನಿಯೋಗ ಹೋಗಲಿದೆ. ಟನ್ ಕಬ್ಬಿಗೆ 3300 ರೂ ನೀಡಲು ತೀರ್ಮಾನ ಆಗಿದೆ. 1125 ರಿಕವರಿ ಇರುವ ಕಬ್ಬಿಗೆ 3300 ರೂ, 1023 ರಿಕವರಿ ಇರುವ ಕಬ್ಬಿಗೆ 3200ರೂ ನೀಡಲು ತೀರ್ಮಾನಿಸಲಾಗಿದ್ದು, ಇದಕ್ಕೆ ಬಹುತೇಕ ಮಾಲಿಕರು ಒಪ್ಪಿದ್ದಾರೆ. ರೈತರಿಗೆ ಪ್ರತಿಭಟನೆ ಕೈಬಿಡಲು ಮನವಿ ಮಾಡ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

* ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆ ಎಂಎಸ್ಪಿ ಹೆಚ್ಚಳ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅವರು ಸಮಯ ನೀಡಿದರೆ ನಾಳೆಯೇ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು.

* ಸಕ್ಕರೆಗೆ ಎಮ್ಎಸ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ.

* ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್ಪಿ ಹೆಚ್ಚಳ ಮಾಡಿಲ್ಲ.

* ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

* ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ತಿಳಿಸಿದ್ದೇವೆ.

* ಕಬ್ಬಿನ11.25 ರಿಕವರಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.

* ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.

* ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!