
ಬೆಂಗಳೂರು, (ಅ.15): ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಈ ಎರಡು ಕ್ಷೇತ್ರಗಳಿಗೆ ಇದೇ ನವೆಂಬರ್ 3 ರಂದು ಮತದಾನ ನಡೆಯಲಿದೆ. ಇದರಿಂದ ಅಂದು ಈ ಎರಡು ಕ್ಷೇತ್ರಗಳಲ್ಲಿ ಮಾತ್ರ ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 3 ರಂದು 2 ಕ್ಷೇತ್ರಗಳ ಸರ್ಕಾರಿ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು, ಶಾಲೆ-ಕಾಲೇಜುಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.
RR ನಗರ ಬೈ ಎಲೆಕ್ಷನ್: ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ ಬಿಗ್ ಶಾಕ್
ರಾಜ್ಯ ಸರ್ಕಾರಿ ಕಚೇರಿ, ಶಾಲಾ-ಕಾಲೇಜು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ದಿನಾಂ 3-11-2020ರ ಮಂಗಳವಾರದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಈ ರಜೆ ತುರ್ತು ಸೇವೇಗಳಿಗೆ ಅನ್ವಯಿಸುವುದಿಲ್ಲ. ಅದಾಗ್ಯೂ ಕೂಡ ತುರ್ತು ಸೇವೆಯಡಿ ಕೆಸಲ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂವಾಗುಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಸರ್ಕಾರಿ ಹೇಳಿದೆ.
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.