ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ 10 ನಿರ್ದೇಶಕರನ್ನ ನೇಮಿಸಿದ ಸರ್ಕಾರ

By Suvarna NewsFirst Published Nov 30, 2020, 10:17 PM IST
Highlights

ಇತ್ತೀಚೆಗೆ ರಚನೆಯಾಗಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ ರಾಜ್ಯ ಸರ್ಕಾರ ನಿರ್ದೇಶಕರನ್ನು ನೇಮಕ ಮಾಡಿದೆ. ಅವರ ಹೆಸರುಗಳು ಈ ಕೆಳಗಿನಂತಿವೆ.

ಬೆಂಗಳೂರು, (ನ.30): ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಬೆನ್ನಲ್ಲೇ ಇದೀಗ ನಿರ್ದೇಶಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 10 ನಿರ್ದೇಶಕರನ್ನು ನೇಮಕ ಮಾಡಿ ಇಂದು (ಸೋಮವಾರ) ಆದೇಶಿಸಿದೆ. ಪರಮಶಿವಯ್ಯ ಅವರು ಅಧ್ಯಕ್ಷರಾಗಿದ್ದಾರೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ನೂತನ ಅಧ್ಯಕ್ಷರ ನೇಮಕ

ನಿರ್ದೇಶಕರ ಹೆಸರುಗಳು
ವೀರಣ್ಣ ಚರಂತಿಮಠ, ಪ್ರಭಾಕರ ಕೋರೆ, ಹಾಲಪ್ಪ ಆಚಾರ್​, ಸೊಗಡು ಶಿವಣ್ಣ, ಶಂಕರ್​ ಮುನೇನಕೊಪ್ಪ ಪಾಟೀಲ್​, ಯು.ಬಿ.ಬಣಕಾರ, ಅರವಿಂದ ಬೆಲ್ಲದ, ಲಿಂಗಮೂರ್ತಿ, ಮಹಾಂತೇಶ್​ ಎಂ ಪಾಟೀಲ್​, ವಿಜಯಲಕ್ಷ್ಮಿ ಈಶ್ವರಪ್ಪ ಬಾಳೆಕುಂದ್ರಿ ಅವರನ್ನು ನಿರ್ದೇಶಕರಾಗಿ ನೇಮಿಸಲಾಗಿದೆ. 

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ನವೆಂಬರ್​ 17ರಂದು ಸಿಎಂ ಬಿಎಸ್ ಯಡಿಯೂರಪ್ಪ  ಆದೇಶ ಹೊರಡಿಸಿದ್ದು. ಜೊತೆಗೆ ಕೊರೋನಾ ಆರ್ಥಿಕ ಸಂಕಷ್ಟದಲ್ಲೂ 500 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು.

click me!