ಜಿಲ್ಲಾ ಪಂಚಾಯತಿ ಎಲೆಕ್ಷನ್ ಮುಂದಕ್ಕೆ: ಆಡಳಿತಾಧಿಕಾರಿಗಳನ್ನು ನೇಮಿಸಿದ ಸರ್ಕಾರ

By Suvarna NewsFirst Published Apr 26, 2021, 8:46 PM IST
Highlights

ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಿಸಿದೆ.

ಬೆಂಗಳೂರು, (ಏ.27): ರಾಜ್ಯಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏ. 27ರಿಂದ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಚುನಾವಣೆಗಳನ್ನು ಐದು ತಿಂಗಳುಗಳ ಕಾಲ ಮುಂದೂಡಲಾಗಿದೆ.

ಚುನಾವಣೆಗಳನ್ನು ಮುಂದೂಡುವ ಬಗ್ಗೆ ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ರಾಜ್ಯದ ಜಿಲ್ಲಾ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ನವೀನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ ಪ್ರಕಟಿಸಿದ ಚುನಾವಣಾ ಆಯೋಗ 

ರಾಜ್ಯದ ಜಿಲ್ಲಾ ಪಂಚಾಯತ್ ಗಳ ಆಡಳಿತ ಅವಧಿಯು 2021ರ ಮೇ, ಜೂನ್ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣದಲ್ಲಿ 321 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯವಾಗುವ ಮರು ದಿನದ ದಿನಾಂಕದಿಂದ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯತಿಗಳಿಗೆ ಸಂಬಂಧ ಪಟ್ಟ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 ನೇಮಕಗೊಂಡ ಆಡಳಿತಾಧಿಕಾರಿಗಳ ಅವಧಿಯು ಸಂಬಂಧಿಸಿದ ಜಿಲ್ಲಾ ಪಂಚಾಯತ್ ಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿಯುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇರತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

click me!