
ಬೆಂಗಳೂರು, (ಜುಲೈ.14): ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸಹಕಾರ ಸಂಘಗಳ ಚುನಾವಣೆಯನ್ನು ಡಿಸೆಂಬರ್ ಅಂತ್ಯದವರೆಗೆ ಮುಂದೂಡಿ ರಾಜ್ಯ ಸರ್ಕಾರ ಇಂದು (ಮಂಗಳವಾರ) ಆದೇಶ ಹೊರಡಿಸಿದೆ.
ಈಗಾಗಲೇ ಚುನಾವಣಾ ವೇಳಾ ಪಟ್ಟಿ ಹೊರಡಿಸಿ ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿದ್ದಲ್ಲಿ ಅದನ್ನು ಸಹ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುವಂತೆ ಸಹಕಾರ ಇಲಾಖೆಯ ಸರಕಾರದ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ರಾಜ್ಯದಲ್ಲಿ 2496 ಜನರಿಗೆ ಕೊರೋನಾ: ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್..?
ಆಡಳಿತ ಅಧಿಕಾರಿ ನೇಮಕ
ಪ್ರಾಥಮಿಕ, ಮಾಧ್ಯಮಿಕ ಒಕ್ಕೂಟಗಳ (ಫೆಡರಲ್ ಸಂಸ್ಥೆ) ಮತ್ತು ಅಪೆಕ್ಸ್ ಸಹಕಾರ ಸಂಘಗಳ ಚುನಾವಣೆ ಮುಂದೂಡಲಾಗಿದೆ. ಅವಧಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಲಿರುವ ಸಹಕಾರ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶದಲ್ಲಿ ಸೂಚಿಸಲಾಗಿದೆ.
ರಾಜ್ಯದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಜೂನ್ 16 ರಂದು ಹೊರಡಿಸಿರುವ ಆದೇಶವನ್ನು ಮುಂದುವರಿಸಲಾಗಿದೆ. ಈ ಹಿಂದೆ ಗ್ರಾಮ ಪಂಚಾಯತ್ ಚುನಾವಣೆಗಳನ್ನೂ ಮುಂದೂಡಲಾಗಿತ್ತು. ಅಲ್ಲದೇ ಆಡಳಿತಾಧಿಕಾರಿಗಳನ್ನ ನೇಮಕ ಮಾಡಲಾಗಿದೆ.
ಇದೀಗ ಸಹಕಾರ ಸಂಘಗಳ ಚುನಾವಣೆಯನ್ನೂ ಮುಂದೂಡಲಾಗಿದ್ದು, ಆಡಳಿತಾಧಿಕಾರಿ ನೇಮಕ ಮಾಡುವುದೊಂದೇ ಬಾಕಿ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.