ರಾಜ್ಯಾದ್ಯಂತ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ವಾರ್ಡ್‌ವಾರು ಮೀಸಲಾತಿಯನ್ನು ಸಹ ಪ್ರಕಟಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.
ಬೆಂಗಳೂರು, (ಸೆ.01): ಗ್ರಾಮ ಪಂಚಾಯಿತಿ ಚುನಾವಣೆಗೆ ರಣಾಂಗಣಾ ಸಜ್ಜಾಗಿದ್ದು, ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಧುಮುಕಲು ಸಜ್ಜಾಗಿದ್ದಾರೆ.
ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ಇವುಗಳಿಗೆ ವಾರ್ಡ್‌ವಾರು ಮೀಸಲಾತಿ ಪ್ರಕಟಿಸಲಾಗಿದೆ. ಇದರಿಂದ ಕೊರೋನಾ ಭೀತಿ ಮಧ್ಯೆಯೂ ಹಳ್ಳಿ ಪಾಲಿಟಿಕ್ಸ್ ಗರಿಗೆದರಿದೆ.
ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು, ಆದರೆ ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು. ಇದೀಗ ಅಕ್ಟೋಬರ್‌ನಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ.
ಆ.31ರೊಳಗೆ ಗ್ರಾಪಂ ಮತದಾರರ ಅಂತಿಮ ಪಟ್ಟಿ
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಘೋಷಿಸುವ ಸಂಬಂಧ 2020ರ ಅಕ್ಟೋಬರ್ ಮೊದಲ ವಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಈಗಾಗಲೇ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ತಿಳಿಸಿದೆ.
ಅದರಂತೆ ಈಗ ವಾರ್ಡ್‌ಗಳ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಚುನಾವಣೆ ಎಲ್ಲಾ ತಯಾರಿ ನಡೆಸಿದೆ. ಇತ್ತ ರಾಜಕೀಯ ನಾಯರು ಸಹ ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಮೀಸಲಾತಿ ಪ್ರಕಾರ ಅಭ್ಯರ್ಥಿಗಳ ಹುಡುಕಾಟ ನಡೆಸಿದ್ದಾರೆ.
ಎಲ್ಲವೂ ಅಂದುಕೊಂಡಂತೆ ಆದ್ರೆ ಅಕ್ಟೋಬರ್‌ನಲ್ಲೇ ಚುನಾವಣೆ ನಡೆಯುವುದು ಸಾಧ್ಯತೆಗಳು ಹೆಚ್ಚಿವೆ. ಅದಕ್ಕೆ ಕೊರೋನಾ ಮಾರ್ಗಸೂಚಿಗಳನ್ನ ಸಹ ಈಗಾಗಲೇ ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಿದೆ.
ಒಟ್ಟಿನಲ್ಲಿ ವಾರ್ಡ್ ಮೀಸಲಾತಿ ಪ್ರಕಟವಾಗುತ್ತಿದ್ದಂತೆಯೇ ಹಳ್ಳಿಗಳಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.