ಸಿಎಂ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್‌ಗೆ ಸಂಕಷ್ಟ

Published : Feb 01, 2021, 10:33 PM ISTUpdated : Feb 01, 2021, 10:36 PM IST
ಸಿಎಂ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್‌ಗೆ ಸಂಕಷ್ಟ

ಸಾರಾಂಶ

ಈಶ್ವರಪ್ಪನವರ ಮಾಜಿ ಪಿ.ಎ  ವಿನಯ್ ಮೇಲೆ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ N.R.ಸಂತೋಷ್​​ಗೆ ಸಂಕಷ್ಟ ಎದುರಾಗಿದೆ.  

ಬೆಂಗಳೂರು, (ಫೆ.01): ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಾಜಿ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಯತ್ನ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. 

ಈ ಹಿನ್ನೆಲೆಯಲ್ಲಿ ಪ್ರಸ್ತುತ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿರುವ N.R.ಸಂತೋಷ್​​ಗೆ ಸಂಕಷ್ಟ ಎದುರಾಗಿದೆ. 

'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

ಪ್ರಕರಣವನ್ನು ರದ್ದುಕೋರಿ  N.R.ಸಂತೋಷ್ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇಂದು (ಸೋಮವಾರ) ನ್ಯಾ.ಹೆಚ್.ಪಿ.ಸಂದೇಶ್​ರವರಿದ್ದ ಏಕಸದಸ್ಯ ಪೀಠ  N.R.ಸಂತೋಷ್ ಅರ್ಜಿಯನ್ನು ವಜಾಗೊಳಿಸಿದೆ. 

ಅಂದ ಹಾಗೆ, ಪ್ರಕರಣದ ವಿಚಾರಣೆ ವೇಳೆ ತಮ್ಮ ಪರ ಸ್ವತಃ ವಿನಯ್ ವಾದ ಮಂಡಿಸಿದ್ದರು. ಪ್ರಕರಣವನ್ನು CCBಗೆ ವರ್ಗಾಯಿಸಿದ್ದನ್ನು ಪ್ರಶ್ನಿಸಿ N.R.ಸಂತೋಷ್​ ಅರ್ಜಿ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ