ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ದಿನಾಂಕವೂ ಫಿಕ್ಸ್

By Suvarna NewsFirst Published Oct 21, 2020, 5:42 PM IST
Highlights

ರಾಜ್ಯದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೇ ಮೀಸಲಾತಿ ಪ್ರಕಾರ ಚುನಾವಣೆಗೆ ದಿನಾಂಕವನ್ನೂ ಸಹ ಫಿಕ್ಸ್ ಮಾಡಿದೆ.

ಬೆಂಗಳೂರು, (ಅ.21): ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಅನುಮತಿ ಕೊಟ್ಟಿದ್ದು,  ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿಗೆ ಹೈಕೋರ್ಟ್ ಮತ್ತೆ ತಡೆ

ನಿಯಮದಂತೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನೀಡಲಾಗಿದೆ. ಚುನಾವಣೆ ಘೋಷಣೆ ನಂತರ ತಡೆಯಾಜ್ಞೆ ಸೂಕ್ತವಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡನೆ ಮಾಡಿದರು. ಬಳಿಕ ವಿಭಾಗೀಯ ಪೀಠ ಸರ್ಕಾರದ ಮೇಲ್ಮನವಿಯನ್ನು ಅಂಗೀಕರಿಸಿದ್ದು, ತಡೆಯಾಜ್ಞೆ ತೆರವುಗೊಳಿಸಿದೆ, ಇದರಿಂದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ  ರಿಲೀಫ್ ಸಿಕ್ಕಂತಾಗಿದೆ.

click me!