ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಚುನಾವಣೆ ಯಾವಾಗ..?
ಬೆಂಗಳೂರು, (ಡಿ.04): ಬಿಬಿಎಂಪಿ ಚುನಾವಣೆ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು (ಶುಕ್ರವಾರ) ತೀರ್ಪು ಪ್ರಕಟಿಸಿದ್ದು, ಸಾಧ್ಯವಾದಷ್ಟು ಬೇಗ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಇಂದಿನಿಂದ 6 ವಾರಗಳಲ್ಲಿ ಚುನಾವಣೆ ಘೋಷಣೆ ಮಾಡುವಂತೆ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಿದೆ.
ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಕಟ: ಯಾರಿಗೆ ಯಾವ ವಾರ್ಡ್ ಮೀಸಲು..?
ಇಂದಿನಿಂದ 6 ವಾರ ಚುನಾವಣೆ ಘೋಷಣೆಗೆ ಕಾಲಾವಕಾಶ ನೀಡಲಾಗುವುದು. ಎಷ್ಟು ಬೇಗ ಸಾಧ್ಯವೋ ಅಷ್ಟೂ ಬೇಗ ಚುನಾವಣೆ ನಡೆಸಬೇಕು. ಒಂದು ತಿಂಗಳಲ್ಲಿ ಮಿಸಲಾತಿ ಅಧಿಸೂಚನೆ ಹೊರಡಿಸಿ. ಮೀಸಲಾತಿ ಆದೇಶ ಹೊರಡಿಸಿದ 6 ವಾರದಲ್ಲಿ ಎಲೆಕ್ಷನ್ ನಡೆಯಬೇಕು. ನಗರದಲ್ಲಿರುವ 198 ವಾರ್ಡ್ಗೆ ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ ಹೊರಡಿಸಿದೆ.
ಬಿಬಿಎಂಪಿ ಚುನಾವಣೆ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನ ಹೈಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಪಿಐಎಲ್ ಸಲ್ಲಿಕೆಯಾಗಿತ್ತು.