ಸಂಸದ ಸ್ಥಾನ ಎಲ್ಲಿ ಅನರ್ಹವಾಗಿಬಿಡುತ್ತೋ ಎನ್ನುವ ಸಂಕಷ್ಟದಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಿಜೆಪಿ ಭಾರೀ ಮುಖಭಂಗವಾಗಿದೆ.
ಬೆಂಗಳೂರು/ಹಾಸನ, (ಜ.17): ಸಂಸದ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್ ನಿಡಿದೆ. ಈ ಮೂಲಕ ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಇದ್ರಿಂದ ಅರ್ಜಿದಾರ ಬಿಜೆಪಿ ನಾಯಕ ಎ.ಮಂಜುಗೆ ಮುಖಭಂಗವಾಗಿದೆ.
ನಾಮಪತ್ರ ಕೇಸ್ ತೀರ್ಪು ಕಾಯ್ದಿರಿಸಿದ ಕೋರ್ಟ್: ಆತಂಕದಲ್ಲಿ ಸಂಸದ ಪ್ರಜ್ವಲ್ ರೇವಣ್ಣ
ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣನವರ ನಾಮಪತ್ರ ಕ್ರಮಬದ್ಧವಾಗಿ. ಚುನಾವಣೆ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವನ್ನು ರದ್ದುಪಡಿಸಬೇಕೆಂದು ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಎ.ಮಂಜು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ , ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಕೋರ್ಟ್ ತೀರ್ಪು ನೀಡಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಬಿಜೆಪಿಯ ಎ.ಮಂಜು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದೆ.
ಈ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ, ಪ್ರಕರಣ ಕುರಿತು ಹೈಕೋರ್ಟ್ ನಲ್ಲಿ ಅಫಿಡೆವಿಟ್ ಹಾಕಿಲ್ಲ ಎಂದು ತಾಂತ್ರಿಕ ಕಾರಣದಿಂದ ಪ್ರಕರಣವನ್ನು ವಜಾಗೊಳಿಸಿದೆ ಎಂದು ತೀರ್ಪು ಪ್ರಕಟಿಸಿದರು.
ನಾಮಪತ್ರ ಕೇಸ್ ತೀರ್ಪು ಕಾಯ್ದಿರಿಸಿದ ಕೋರ್ಟ್: ಆತಂಕದಲ್ಲಿ ಸಂಸದ ಪ್ರಜ್ವಲ್ ರೇವಣ್ಣ
ಏನಿದು ಪ್ರಕರಣ?
2019ರಲ್ಲಿ ನಡೆದ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಮತ್ತು ವಕೀಲ ದೇವರಾಜೇಗೌಡ ಅವರು ಹೈ ಕೋರ್ಟ್ನಲ್ಲಿ ಕೇಸ್ ಹಾಕಿದ್ದರು.
ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿಗಳಿಕೆ ಮಾಡಿದ್ದಾರೆ. ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ್ದಾರೆ. ಹಲವು ಕಂಪನಿಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಆಸ್ತಿ ಘೋಷಣೆ ಮಾಡುವಾಗ ಪ್ರಮಾಣ ಪತ್ರದಲ್ಲಿ ಇದನ್ನು ಉಲ್ಲೇಖಿಸಿಲ್ಲ. ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ್ದರು.