ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿಗೆ ಹೈಕೋರ್ಟ್ ಮತ್ತೆ ತಡೆ

By Ramesh BFirst Published Oct 15, 2020, 7:16 PM IST
Highlights

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಬೆಂಗಳೂರು, (ಅ.15): ಮೊನ್ನೇ ಅಷ್ಟೇ ಪ್ರಕಟವಾಗಿದ್ದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. 

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತ್ವರಿತವಾಗಿ ಎಲೆಕ್ಷನ್: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಮಾರ್ಗಸೂಚಿ ಪ್ರಕಟ

ಮೀಸಲಾತಿ ಪರಿಶೀಲನೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ.

ಅಕ್ಟೋಬರ್ 22 ರಂದು ವರದಿ ನೀಡಲು ಸೂಚಿಸಲಾಗಿದೆ. ಹಾಸನ, ಅರಸೀಕೆರೆಯ ಮೀಸಲಾತಿಯನ್ನು ಪ್ರಶ್ನಿಸಲಾಗಿತ್ತು. ಎಸ್.ಟಿ.ಗೆ ಮೀಸಲಾತಿ ನಿಗದಿಪಡಿಸಿರುವುದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಈ ಹಿನ್ನಲೆಯಲ್ಲಿ ಮಧ್ಯಂತರ ತಡೆ ನೀಡಲಾಗಿದೆ.

click me!