ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿದಿದೆ.
ಬೆಂಗಳೂರು (ಸೆ.01): ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿದಿದೆ.
ಇನ್ನು 2019ರ ಲೋಕಸಭಾ ಚುನಾವಣೆಯ ವೇಳೆ ಹಾಸನ ಲೋಕಸಭೆಯಿಂದ ಸ್ಪರ್ಧೆ ಮಾಡಿದ್ದ ಅವರು, ಈ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ನೀಡಲಾಗಿತ್ತು. ಈ ಬಗ್ಗೆ ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿದ್ದು, ಹಲವು ವಿಚಾರಣೆಗಳನ್ನು ನಡೆಸಲಾಗಿತ್ತು. ಈಗ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಬೇಕು ಎಂದು ಅಂದಿನ ಸೋತ ಅಭ್ಯರ್ಥಿ ಎ. ಮಂಜು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಆದರೆ, ಇನ್ನೇನು ಲೋಕಸಭಾ ಚುನಾವಣೆಗೆ 6 ತಿಂಗಳು ಬಾಕಿ ಇರುವ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅನರ್ಹವಾಗಿದೆ.
ಮಗನ ಅನರ್ಹ ಆದೇಶದ ಬೆನ್ನಲ್ಲೆ ತಂದೆ ಹೆಚ್.ಡಿ.ರೇವಣ್ಣಗೂ ಶಾಕ್ ಕೊಟ್ಟ ಹೈಕೋರ್ಟ್
ದೂರು ದಾಖಲಿಸಿದ್ದ ದೇವರಾಜೇಗೌಡ: ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ.ದೇವರಾಜೇಗೌಡ ಅವರು, ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಏ.26, 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೂಲಂಕುಷವಾಗಿ ಪರಿಶೀಲಿಸಿ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.
ದೂರು ಕೊಟ್ಟಾಗ ಬಿಜೆಪಿ ನಾಯಕ, ತೀರ್ಪು ಬಂದಾಗ ಜೆಡಿಎಸ್ ಶಾಸಕ:
ಇನ್ನು ಲೋಕಸಭಾ ಚುನಾವಣೆ ವೇಳೆ ಅನರ್ಹಗೊಂಡ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿಯಿಂದ ಎ.ಮಂಜು ಸ್ಪರ್ಧೆ ಮಾಡಿದ್ದರು. ಚುನಾವಣಾ ಫಲಿತಾಂಶದಲ್ಲಿ ಎ. ಮಂಜು ಅವರಿಗೆ ಸೋಲುಂಟಾಗಿದ್ದರಿಂದ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿ ಸ್ಪರ್ಧೆ ಮಾಡಿ ಗೆದ್ದಿದ್ದಾರೆ. ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಿ ನನಗೆ ಸಂಸದ ಸ್ಥಾನವನ್ನು ನೀಡಬೇಕು ಎಂದು ಎ.ಮಂಜು ನ್ಯಾಯಾಲಯದ ಮೊರೆ ಹೋಗಿದ್ದರು. ಇನ್ನು ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರುವ ಬೆನ್ನಲ್ಲಿಯೇ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿ, ಈಗ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯಲ್ಲಿದ್ದಾಗ ಅರ್ಜಿ ಹಾಕಿದ್ದೆನು, ನಮ್ಮ ಪರವಾಗಿ ಆದೇಶ ಬಂದಿದೆ:
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎ. ಮಂಜು ಅವರು, ಹೈಕೋರ್ಟ್ ಆದೇಶ ಸ್ಬಾಗತಿಸುತ್ತೇನೆ. ಆದೇಶದ ಪ್ರತಿ ನೋಡಿ ಮುಂದೆ ಕಾನೂನು ಹೋರಾಟ ಮಾಡುವ ಬಗ್ಗೆ ತಿರ್ಮಾನ ಮಾಡಲಾಗುತ್ತದೆ. ಈಗ ಒಂದೇ ಪಕ್ಷದಲ್ಲಿ ಇದ್ದೇವೆ. ದೇವೆಗೌಡರು, ರೇವಣ್ಣ ಹಾಗೂ ಪ್ರಜ್ವಲ ಜೊತೆಗೆ ಚರ್ಚೆ ಆಗಲಿದೆ. ನಂತರ ಮುಂದೇನು ಅಂತ ತಿರ್ಮಾನ ಮಾಡ್ತೇನೆ. ನಾನು ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ಮಾಡುವ ಬಗ್ಗೆ ಮುಂದೆ ತಿರ್ಮಾನ ಮಾಡುತ್ತೇನೆ. ನನ್ನ ಮನವಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಅರ್ಜಿ ಹಾಕುವಾಗ ಪಕ್ಷ ಬೇರೆಯಾಗಿತ್ತು. ನಾನು ಬಿಜೆಪಿ ಯಲ್ಲಿ ಇದ್ದಾಗ ಅರ್ಜಿ ಹಾಕಿದ್ದೆನು. ಈಗ ಜೆಡಿಎಸ್ ನಲ್ಲಿಇದ್ದೇನೆ. ಕೊನೆಗಾದರೂ ಆದೇಶ ನಮ್ಮ ಪರ ಬಂದಿದೆ ಎಂದು ಹೇಳಿದರು.
ಬಿಜೆಪಿಯವರು ಔಟ್ ಸೋರ್ಸ್ ಮೂಲಕವಾದ್ರೂ ವಿಪಕ್ಷ ನಾಯಕನ ಆರಿಸಿ: ನಾಗತಿಹಳ್ಳಿ ಚಂದ್ರಶೇಖರ್ ಸಲಹೆ
2019ರಲ್ಲಿ ಪಜ್ವಲ್ ಆಸ್ತಿ ವಿವರ: 2019ರ ಲೋಕಸಭೆ ಚುನಾವಣೆಗೆ ಪ್ರಜ್ವಲ್ ತಮ್ಮ ಆಸ್ತಿ ವಿವರ ಸಲ್ಲಿಕೆ ಮಾಡಿದ್ದರು. ಈ ವೇಳೆ ಪ್ರಜ್ವಲ್ ಒಟ್ಟು ಆಸ್ತಿ .8,13,622 ಆಗಿದ್ದು, ಇದರಲ್ಲಿ .4,89,15,029 ಮೌಲ್ಯದ ಸ್ಥಿರಾಸ್ತಿ, .1,68,86,632 ಮೌಲ್ಯದ ಚರಾಸ್ತಿಗಳೂ ಸೇರಿವೆ. ಇಷ್ಟೇ ಅಲ್ಲದೆ, ಪ್ರಜ್ವಲ್ ಅವರು .3.72 ಕೋಟಿ ಖಾಸಗಿ ಸಾಲವನ್ನೂ ಮಾಡಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ತಂದೆ ರೇವಣ್ಣ, ತಾಯಿ ಭವಾನಿ, ಅನಸೂಯ, ಸಿ.ಎನ್. ಪಾಂಡು, ಸಿ.ಎನ್. ಪುಟ್ಟಸ್ವಾಮಿಗೌಡ, ಜಯರಾಂ, ಡಿ.ಕೆ.ನಾಗರಾಜ್, ಕಾಳೇಗೌಡ, ಬೋರೇಗೌಡ, ಶೈಲ ಅವರಿಂದ ಈ ಸಾಲ ಪಡೆದಿದ್ದಾರೆ. ಪ್ರಜ್ವಲ್ ಹೆಸರಲ್ಲಿ ಒಟ್ಟು 36 ಎಕರೆ ಕೃಷಿ ಭೂಮಿಯೂ ಇದೆ. ಜತೆಗೆ, ಪ್ರಜ್ವಲ್ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳಲ್ಲಿ ಒಟ್ಟು .15.58 ಲಕ್ಷ ನಗದೂ ಇದೆ. ಒಟ್ಟು .37.31 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನೂ ಅವರು ಹೊಂದಿದ್ದಾರೆ. 18 ಹಸುಗಳು, 2 ಎತ್ತುಗಳನ್ನೂ ಪ್ರಜ್ವಲ್ ಸಾಕಿಕೊಂಡಿದ್ದರು.