ರಾಜ್ಯಪಾಲರಿಂದ ಸಿಎಂಗೆ ನೋಟಿಸ್: 'ಏನು ಉತ್ತರ ಕೊಡಬೇಕೋ ಕೊಡ್ತೀವಿ': ಪರಮೇಶ್ವರ್

By Ravi Janekal  |  First Published Aug 1, 2024, 11:43 AM IST

ಯಾವುದೇ ಸ್ಪಷ್ಟನೆ ಕೇಳದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಶೋಕಸ್ ನೋಟಿಸ್ ಕೊಟ್ಟಿದ್ದಾರೆ. ಅದಕ್ಕೆ ಸಿಎಂ ಏನು ಉತ್ತರ ಕೊಡಬೇಕೋ ಕೊಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು.  


ಬೆಂಗಳೂರು (ಆ.1): ಯಾವುದೇ ಸ್ಪಷ್ಟನೆ ಕೇಳದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಶೋಕಸ್ ನೋಟಿಸ್ ಕೊಟ್ಟಿದ್ದಾರೆ. ಅದಕ್ಕೆ ಸಿಎಂ ಏನು ಉತ್ತರ ಕೊಡಬೇಕೋ ಕೊಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು.  

ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ಕೊಟ್ಟಿರುವ ವಿಚಾರವಾಗಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಇಂದು ಕ್ಯಾಬಿನೆಟ್‌ನಲ್ಲಿ ಆ ಬಗ್ಗೆ ಚರ್ಚೆ ಮಾಡುತ್ತೇವೆ. ರಾಜ್ಯಪಾಲರಿಗೆ ಏನು ಉತ್ತರ ಕೊಡಬೇಕು ಎಂಬ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.

Latest Videos

undefined

ಬಿಜೆಪಿ ಪಾದಯಾತ್ರೆ ವಿಚಾರದ ಬಗ್ಗೆ ಮಾಧ್ಯಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರ ಪಾದಯಾತ್ರೆ  ವಿಫಲವಾಗಿದೆ. ಅವರವರೇ ಜಗಳ ಮಾಡ್ಕೊಂಡು ಕೂತಿದ್ದಾರೆ. ನಾವು ಪಾದಯಾತ್ರೆ ಮಾಡಬೇಡಿ ಎಂದು ಹೇಳಿಲ್ಲ. ಆದರೆ ಅವರಲ್ಲೇ ಒಬ್ಬರು ಪಾದಯಾತ್ರೆ ಮಾಡಬೇಕು ಅಂತಾರೆ, ಇನ್ನೊಬ್ಬರು ಬೇಡ ಅಂತಿದ್ದಾರೆ. ಕುಮಾರಸ್ವಾಮಿ ಅವರು ಬಿಜೆಪಿ ಪಾದಯಾತ್ರೆಯಲ್ಲಿ ಭಾಗವಹಿಸೊಲ್ಲ ಅಂತಾ ಹೇಳಿದ್ದಾರೆ. ಅದು ಅವರಿಗೆ ಬಿಟ್ಟಿದ್ದು. ಆದರೆ ಈ ಪಾದಯಾತ್ರೆಯಲ್ಲಿ ಯಾವುದೇ ವಿಶೇಷ ಇಲ್ಲ. ಕೇವಲ ರಾಜಕೀಯ ಕಾರಣಕ್ಕೆ, ಸಿದ್ದರಾಮಯ್ಯ ಅವರನ್ನ ವಿರೋಧಿಸಲಿಕ್ಕೆಂದೇ ಮಾಡ್ತಿದ್ದಾರೆ. ಮುಡಾದಲ್ಲಿ ಏನೂ ನಡೆದಿಲ್ಲ ಎಂದರು.

ಮುಡಾ ಹಗರಣ: ಬಿಜೆಪಿ ಪಾದಯಾತ್ರೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ವಿಧಾನಸೌಧದಲ್ಲಿ ಇಂದು ಮಹತ್ವದ ಮೀಟಿಂಗ್:

ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಸ್ ನೀಡಿದ ಬೆನ್ನಲ್ಲೇ ಇಂದು ಕರೆದಿರುವ ಕ್ಯಾಬಿನೆಟ್ ಮೀಟಿಂಗ್ ಮಹತ್ವ ಪಡೆದುಕೊಂಡಿದೆ. ಈಗಾಗಲೇ ವಿಧಾನಸೌಧಕ್ಕೆ ಆಗಮಿಸಿದ ಸಚಿವರು. ಇದಕ್ಕೂ ಮುನ್ನ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ್ದ ಸಚಿವರು. ಸಿಎಂ ನಿವಾಸದಲ್ಲೇ ಕೆಲಹೊತ್ತು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದ್ದರು. ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದರು. ಸರ್ಕಾರದ ಮುಖ್ಯಕಾರ್ಯದರ್ಶಿಗೆ ನೋಟಿಸ್ ನೀಡಿರುವ ರಾಜ್ಯಪಾಲರು. ಇದಕ್ಕೆ ಹೇಗೆ ಉತ್ತರಿಸಬೇಕು ಎಂಬ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ್ದ ಸಚಿವರು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಾಸಿಕ್ಯೂಷನ್ ವಿರೋಧಿಸಿ ನಿರ್ಣಯ ಮಾಡುವ ಸಾಧ್ಯತೆಯಿದೆ

click me!