ಇದು ಗೂಂಡಾ ರಾಜ್ಯ; ಹುಬ್ಬಳ್ಳಿ ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

By Sathish Kumar KH  |  First Published May 16, 2024, 3:02 PM IST

ಹುಬ್ಬಳ್ಳಿಯ ಯುವತಿ ಅಂಜಲಿಗೆ ಕೊಲೆ ಬೆದರಿಕೆ ಹಾಕಿದ ಬಗ್ಗೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.


ಗದಗ (ಮೇ 16): ಹುಬ್ಬಳ್ಳಿಯ ಯುವತಿ ಅಂಜಲಿಗೆ ಕೊಲೆ ಬೆದರಿಕೆ ಹಾಕಿದ ಬಗ್ಗೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಗದಗ ನಗರದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ‌ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರೆ ಈ ಕೊಲೆ ತಪ್ಪಿಸಬಹುದಿತ್ತು. ಕೊಲೆಯನ್ನು ತಡೆಯದೇ ಪರೋಕ್ಷವಾಗಿ ಕೊಲೆಗೆ ಪೊಲೀಸರು ಕಾರಣರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Tap to resize

Latest Videos

undefined

ಹುಬ್ಬಳ್ಳಿ ಅಂಜಲಿ ಕೊಂದವನ ಬಂಧಿಸುವುದು ಬಿಟ್ಟು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು!

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕಾಗಿ ಬಳಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕಲು ಪೊಲೀಸರು ನಿರತರಾಗಿದ್ದಾರೆ. ಪೊಲೀಸರು ಇಸ್ಪೀಟು, ಮಟಕಾ, ಕ್ಲಬ್, ಮರಳು ವ್ಯವಹಾರಗಳ ದಂಧೆಯಲ್ಲಿ ಸಂಪೂರ್ಣವಾಗಿ ಶಾಮಿಲಾಗಿದ್ದಾರೆ. ಬಹಳ ಲಂಚ ಕೊಟ್ಟು ಪೋಸ್ಟಿಂಗ್ ಹಾಕಿಸಿಕೊಂಡು ಬಂದಿದ್ದಾರೆ. ಅಧಿಕಾರಿಗಳು ಹಾಗೂ ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ‌ ಮುಳುಗಿದೆ. ಇಡೀ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದರು‌.

ರಾಜ್ಯದಲ್ಲಿ  ಗೂಂಡಾಗಳು ನಿರ್ಭಿತಿ, ನಿರ್ಭಯವಾಗಿ  ಓಡಾಡುತ್ತಿದ್ದಾರೆ. ರಾಜ್ಯದಲ್ಲಿ ಸಾಮಾನ್ಯ ಜನರ, ಹೆಣ್ಣುಮಕ್ಕಳ  ಯಾರ ಪ್ರಾಣಕ್ಕೂ ಸುರಕ್ಷತೆ  ಇಲ್ಲ. ರಾಜ್ಯದಲ್ಲಿ ಭಯದ ವಾತಾವರಣ, ಗೂಂಡಾ ವಾತಾವರಣ ಇದೆ. ನೇಹಾ ಪ್ರಕರಣದಲ್ಲಿ ನಾವು ರಾಜಕೀಯ ಮಾಡಿಲ್ಲ. ಹಾಡುಹಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ‌ ಕೊಲೆ ಆದರೆ, ಸುಮ್ಮನೆ ಕುಳಿತುಕೊಳ್ಳಬೇಕಾ? ಕಾಂಗ್ರೆಸ್ ನವರು ವಿರೋಧ ಪಕ್ಷದಲ್ಲಿದ್ದರೆ ಸುಮ್ಮನೆ ಕೂಡುತ್ತಿದ್ದರಾ ? ಅಂಜಲಿ ಮನೆಗೆ ಹೊಕ್ಕು ಕೊಲೆ ಮಾಡುತ್ತಾರೆ ಅಂದರೆ ಪರಸ್ಥಿತಿ ಎಲ್ಲಿಗೆ ಬಂತು? ಎಲ್ಲಿದೆ ಕಾನೂನು? ಎಲ್ಲಿದೆ ಪೊಲೀಸರ ಭಯ? ಎಂದು ಪ್ರಶ್ನಿಸಿದರು. ಒಂದು ಕಡೆ ಸಾವಿರ ವಿದ್ಯಾರ್ಥಿಗಳ ಮಧ್ಯೆ ನೇಹಾ ಕೊಲೆ ಆಗುತ್ತಾಳೆ. ಮತ್ತೊಂದು ಕಡೆ ಅಂಜಲಿ ಮನೆ ಹೊಕ್ಕು ಕೊಲೆ ಮಾಡುತ್ತಾರೆ ಅಂದರೆ, ಇದು ಗೂಂಡಾ ರಾಜ್ಯ ಅಲ್ಲದೆ ಇನ್ನೇನು? ಇಷ್ಟೇಲ್ಲಾ ಆದರೂ  ಸಿಎಂ ಹಾಗೂ ಗೃಹ ಸಚಿವರು ಏನು ಆಗೇ ಇಲ್ಲ ಅನ್ನುವ ರೀತಿಯಲ್ಲಿದ್ದಾರೆ. ಇದರ ಬಗ್ಗೆ ಸಣ್ಣ ಪರಿಶೀಲನೆ ಸಹ ಮಾಡ್ತಿಲ್ಲ ಎಂದರು.

ಬೆಂಗಳೂರು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಗಿಣಿಯಂತೆ ಸಾಕಿದ್ದ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ-ತಾಯಿ

ಕಾಂಗ್ರೆಸ್ ಯಾರ ಪರ ಇದೆ? 
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಆದಾಗ ಬರಲಿಲ್ಲ, ತನಿಖೆ ಚುರುಕುಗೊಳಿಸಲಿಲ್ಲ. ಅಂಜಲಿ‌ ಕೊಲೆ ಆದಾಗಲೂ ಉದಾಸೀನ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮಹಿಳೆ ಮೇಲೆ ಸಾಮೂಹಿಕ ರೇಪ್ ಆದರೂ ತಿರುಗಿ ನೋಡಲಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ದಲಿತ ಮಹಿಳೆ ವಿವಸ್ತ್ರಗೊಳಿಸಿದರೂ ನೋಡಲಲಿಲ್ಲ? ಕಾಂಗ್ರೆಸ್ ಯಾರ ಪರವಾಗಿದ್ದಿರಿ? ರಾಜ್ಯದಲ್ಲಿ ಏನು ನಡೆಯುತ್ತಿದೆ? ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

click me!