ಜೆಡಿಎಸ್‌-ಬಿಜೆಪಿ ಮೈತ್ರಿ ನಂತರ ಮುಸಲ್ಮಾನ ಬಂಧುಗಳು ಎಚ್ಚರಿಕೆಯಿಂದ ಇರಿ: ಎಚ್‌ಡಿ ಕುಮಾರಸ್ವಾಮಿ ಸಲಹೆ

Published : Oct 01, 2023, 06:24 PM ISTUpdated : Oct 01, 2023, 06:35 PM IST
ಜೆಡಿಎಸ್‌-ಬಿಜೆಪಿ ಮೈತ್ರಿ ನಂತರ ಮುಸಲ್ಮಾನ ಬಂಧುಗಳು ಎಚ್ಚರಿಕೆಯಿಂದ ಇರಿ: ಎಚ್‌ಡಿ ಕುಮಾರಸ್ವಾಮಿ ಸಲಹೆ

ಸಾರಾಂಶ

ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಯಿಂದ ಯಾರ ರಾಜಕೀಯ ಭವಿಷ್ಯವನ್ನೂ ಹೊಸಕಿ ಹಾಕಲ್ಲ. ಆದರೆ, ಮುಸಲ್ಮಾನ ಬಂಧುಗಳು ಎಚ್ಚರಿಕೆಯಿಂದ ಇರಿ. 

ರಾಮನಗರ (ಅ.01): ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್‌ ಸಮಸ್ಯೆಗಳು ಉಂಟಾಗಲ್ಲ. ಹೊಂದಾಣಿಕೆಯಿಂದ ಯಾರ ರಾಜಕೀಯ ಭವಿಷ್ಯವನ್ನೂ ಹೊಸಕಿ ಹಾಕಲ್ಲ. ಆದರೆ, ಮುಸಲ್ಮಾನ ಬಂಧುಗಳು ಎಚ್ಚರಿಕೆಯಿಂದ ಇರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರದಲ್ಲಿ ನಡೆಯುತ್ತಿರುವ ಜೆಡಿಎಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದಿನ ಪಕ್ಷದ ಸಭೆಯಲ್ಲಿ ಮೈತ್ರಿ ಬಗ್ಗೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ. ಮುಂದಿನ ಒಂದು ತಿಂಗಳೊಳಗೆ 31 ಜಿಲ್ಲೆಗಳಲ್ಲೂ ಸಭೆ ಮಾಡ್ತೀವಿ. ಎಲ್ಲಾ ಸಮಸ್ಯೆಗಳನ್ನ ಬಗೆಹರಿಸುವ ಕೆಲಸ ಆಗುತ್ತದೆ. ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೇಟ್ ಸಮಸ್ಯೆಗಳು ಉಂಟಾಗಲ್ಲ. ಈ ಬಗ್ಗೆ ನಾನು ಭರವಸೆ ಕೊಡುತ್ತೇನೆ. ಅದರ ಬಗ್ಗೆ ಕೂತು ಮುಕ್ತವಾಗಿ ಚರ್ಚೆ ಮಾಡುತ್ತೇವೆ. ಹೊಂದಾಣಿಕೆಯಿಂದ ಯಾರ ರಾಜಕೀಯ ಭವಿಷ್ಯವನ್ನೂ ಹೊಸಕಿ ಹಾಕಲ್ಲ. ಶಾಸಕ ಜಿ.ಡಿ. ದೇವೇಗೌಡರ ನೇತೃತ್ವದ ಕೋರ್ ಕಮಿಟಿ ರಚಿಸಿ ಸಂಘಟನೆ ಮಾಡ್ತೀವಿ ಎಂದು ತಿಳಿಸಿದರು.

ಕೋಲಾರದಲ್ಲಿ ಕತ್ತಿ ವರಸೆ ಪ್ರದರ್ಶಿಸಿದ ಹಿಂದೂ ಮುಖಂಡನ ಮೇಲೆ ಎಫ್‌ಐಆರ್‌

ಕಾಂಗ್ರೆಸ್‌ ನಾಯಕರಿಗೆ ಜನರೇ ಉತ್ತರ ಕೊಡುತ್ತಾರೆ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ನನ್ನ ಬಗ್ಗೆ ಏನು ಬೇಕಾದ್ರೂ ಅವಹೇಳನ ಮಾಡಲಿ. ನನ್ನ ಕಾರ್ಯಕರ್ತರು, ನಾಡಿನ ಜನತೆ ಉತ್ತರ ಕೊಡ್ತಾರೆ. ಇನ್ಮುಂದೆ ಅವರ ಯಾವ ಟೀಕೆಗೂ ಉತ್ತರ ಕೊಡಲ್ಲ. 17ಜನ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ನನ್ನ ತೀರ್ಮಾನಕ್ಕೆ ಎಲ್ಲರ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ, ಮುಖ್ಯವಾಗಿ ಮುಸಲ್ಮಾನ ಮುಸಲ್ಮಾನ ಬಂಧುಗಳಿ ಎಚ್ಚರಿಕೆಯಿಂದ ಇರಬೇಕು. ಕೆಲ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡ್ತಿದ್ದಾರೆ. ನಾನು ಮತಕ್ಕಾಗಿ ಒಂದು ಸಮಾಜವನ್ನ ಓಲೈಕೆ ಮಾಡುವ ಅವಶ್ಯಕತೆ ಇಲ್ಲ. ಮುಸಲ್ಮಾನ ಬಂದುಗಳ ಬಗ್ಗೆ ನನ್ನ ಕಮಿಟ್‌ಮೆಂಟ್ ಏನು ಅಂತ ಗೊತ್ತು. ಕಳೆದ ಬಾರಿ ಉಂಟಾದ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ಅವರ ಪರವಾಗಿ ನಿಂತಿದ್ದು ನಾನು. ಹಾಗಾಗಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಮೈತ್ರಿ ಮಾತುಕತೆ ಎಲ್ಲಾ ಹಂತದಲ್ಲೂ ಇಬ್ರಾಹಿಂ ಜೊತೆ ಚರ್ಚೆ ಮಾಡಿದೆ: ಬಿಡದಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಬಿ.ಎಂ.ಫಾರೂಕ್ ಮಾತನಾಡಿ, ಬಿಜೆಪಿ ಜೊತೆ ಯಾವ ಪಕ್ಷ ಮೈತ್ರಿ ಮಾಡಿಕೊಂಡಿಲ್ಲ ಹೇಳಿ. ಶಿವಸೇನೆ, ಶರತ್ ಪವಾರ್, ನಿತೀಶ್ ಕುಮಾರ್ ಕೂಡಾ ಮೈತ್ರಿ ಮಾಡಿಕೊಂಡಿದ್ದರು. ಈ ಹಿಂದೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ರಲ್ವಾ.? ಆಗ ನಮ್ಮ ಜಮೀರ್‌ ಅವರಿಗೆ ಮಂತ್ರಿ ಸ್ಥಾನ ಕೊಡಲಿಲ್ವಾ.? ಈಗಲೂ ಮೈತ್ರಿಯಿಂದ ಯಾವುದೇ ಗೊಂದಲ ಇಲ್ಲ. ಮೈತ್ರಿಯ ಪ್ರತಿ ಹಂತದಲ್ಲೂ ಇಬ್ರಾಹಿಂ ಜೊತೆ ಚರ್ಚೆ ಮಾಡಿದ್ದಾರೆ. ಮೈತ್ರಿ ಮಾತುಕತೆ ಎಲ್ಲಾ ಹಂತದಲ್ಲೂ ಇಬ್ರಾಹಿಂನ ವಿಶ್ವಾಸಕ್ಕೆ ಪಡೆದಿದ್ದಾರೆ ಎಂದು ತಿಳಿಸಿದರು.

ಬಿಜೆಪಿ- ಜೆಡಿಎಸ್‌ ಮೈತ್ರಿ: ಯಡಿಯೂರಪ್ಪ ಜೈಲಿಗೆ ಹೋಗಲು ಕುಮಾರಸ್ವಾಮಿ ಕಾರಣ, ಲಕ್ಷ್ಮಣ ಸವದಿ

ಅಲ್ಪಸಂಖ್ಯಾತರ ಭಾವನೆಗಳಿಗೆ ಧಕ್ಕೆಯಾಗಲು ಬಿಡುವುದಿಲ್ಲ: ಮೈತ್ರಿಯಿಂದಾಗಿ ಜೆಡಿಎಸ್ ನಿಂದ ಅಲ್ಪಸಂಖ್ಯಾತರು ದೂರ ಆಗ್ತಿಲ್ಲ. ನಾನು ಇಲ್ಲೇ ಇದೀನಲ್ಲಾ.! ಅಲ್ಪಸಂಖ್ಯಾತರ ಸಮಸ್ಯೆಗಳು ಹಾಗೂ ಹಿತರಕ್ಷಣೆಗೆ ಬದ್ಧವಾಗಿದ್ದೇನೆ. ಹಿಂದುತ್ವದ ಅಜೆಂಡಾಗೆ ನಾವು ಶಿಫ್ಟ್ ಆಗಲ್ಲ. ಅಲ್ಪಸಂಖ್ಯಾತರ ಭಾವನೆಗಳಿಗೆ ದಕ್ಕೆ ಆಗಲು ಬಿಡಲ್ಲ. ಹಿಂದೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಾಗ ಮುಸ್ಲಿಂಗೆ ಸಮಸ್ಯೆ ಆಗಿದ್ಯಾ.? ಆಗ ಸಮುದಾಯಕ್ಕೆ ಏನು ಕೆಟ್ಟದಾಗಿ ಆಗಿಲ್ಲ. ಸಾರ್ವಜನಿಕವಾಗಿ ಸೌಹಾರ್ದಯುತ ವಾತಾವರಣ ಇರಬೇಕು. ನಮ್ಮ ಆಚಾರ ವಿಚಾರಗಳಿಗೆ ಧಕ್ಕೆ ಬಂದಾಗ ನಾವು ಖಂಡಿಸ್ತೀವಿ ಎಂದು ಬಿ.ಎಂ.ಫಾರೂಕ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ