ಸಚಿವ ಕೆ.ಎನ್. ರಾಜಣ್ಣ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ

Published : May 20, 2025, 09:44 AM ISTUpdated : May 20, 2025, 10:56 AM IST
ಸಚಿವ ಕೆ.ಎನ್. ರಾಜಣ್ಣ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ

ಸಾರಾಂಶ

೭೫ರ ಹರೆಯದ ಸಹಕಾರ ಸಚಿವ ಎಚ್.ಎಸ್. ರಾಜಣ್ಣ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಯುವಕರಿಗೆ ಅವಕಾಶ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಡೇರಿ ಚುನಾವಣೆಗಳ ಮುಂದೂಡಿಕೆಗೆ ತಾಂತ್ರಿಕ ಕಾರಣಗಳಿವೆ ಎಂದಿದ್ದಾರೆ.

ಮೈಸೂರು (ಮೇ 20): ನನಗೆ ಈಗಾಗಲೇ 75 ವರ್ಷವಾಗಿದೆ. ಮುಂದಿನ ಚುನಾವಣೆಗೆ ಸ್ಪರ್ಧಿಸುವ ಆಲೋಚನೆ ಇಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಚುನಾವಣೆಗೆ ಸ್ಪರ್ಧೆ ತ್ಯಜಿಸುತ್ತಿದ್ದೇನೆ ಎನ್ನುವ ಮೂಲಕ ರಾಜ್ಯ ಸಹಕಾರ ಸಚಿವ ಕೆ.ಎನ್.. ರಾಜಣ್ಣ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ನನಗೆ ಈಗಾಗಲೇ 75 ವರ್ಷವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ. ಆದರೆ, ಸಹಕಾರಿ ಕ್ಷೇತ್ರ ಹಾಗೂ ಸಕ್ರೀಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು. 'ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದು ಹೇಳಿದರು.

ಸಹಕಾರ ಕ್ಷೇತ್ರಕ್ಕೆ ಹೊಸ ಚಟುವಟಿಕೆಗಳು: 
ಹುಣಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಜಣ್ಣ ಅವರು ಸಹಕಾರ ಕ್ಷೇತ್ರದ ಸ್ಥಿತಿಗತಿಗಳನ್ನು ವಿವರಿಸಿದರು. ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರವನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರ ಕ್ಷೇತ್ರದ ಕಾಯ್ದೆಯಲ್ಲಿ ತಿದ್ದುಪಡಿ ತರಲು ರಾಜ್ಯಪಾಲರ ಅಂಕಿತದ ನಂತರ ಕೇಂದ್ರಕ್ಕೆ ಕಳುಹಿಸುವ ಅಗತ್ಯವಿಲ್ಲ. ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾದ ಅಗತ್ಯವಿಲ್ಲ. ಈ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಡೇರಿ ಚುನಾವಣೆಗಳು ಮುಂದೂಡಿಕೆಗೆ ತಾಂತ್ರಿಕ ಕಾರಣ:
ಎಂಡಿಸಿಸಿ ಸೇರಿದಂತೆ ಕೆಲವು ಡೇರಿ ಚುನಾವಣೆಗಳನ್ನು ಮತಪಟ್ಟಿ ಹಾಗೂ ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಲಾಗಿದೆ. ಅಲ್ಲದೆ ಮತಪಟ್ಟಿ ಸೇರಿದಂತೆ ಕೆಲ ತಾಂತ್ರಿಕ ಕಾರಣದಿಂದಾಗಿ  ಚುನಾವಣೆ ಮುಂದೂಡಲಾಗಿದೆ. ಈ ಬಗ್ಗೆ ಯಾವುದೇ ರಾಜಕೀಯ ಕಾರಣವಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ವಹಿವಾಟು, ಮಹಾಸಭೆ ಸೇರಿದಂತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೇ ವಿನಃ, ಚುನಾವಣೆಯಲ್ಲಿ ಮತ ಹಾಕಲು ಸಹಕಾರ ಸಂಸ್ಥೆ ಸದಸ್ಯತ್ವ ಪಡೆಯುವುದಲ್ಲ. ಇದರಿಂದ ಆ ಸಂಘಗಳಿಗೆ ಹೊರೆಯಾಗಲಿದೆ. ಎಲ್ಲ ಸದಸ್ಯರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂಬುದು ಸರಕಾರದ ಉದ್ದೇಶ. ಮುಂದಿನ ದಿನಗಳಲ್ಲಿ ಎಲ್ಲಾ ಚುನಾವಣೆಗಳನ್ನು ಕಾಲಮಿತಿಯಲ್ಲಿ ನಡೆಸಲಾಗುವುದು ಎಂದು ಸಚಿವ ರಾಜಣ್ಣ ತಿಳಿಸಿದ್ದಾರೆ.

ಜನ್ಮದಿನಾಚರಣೆ ಮುಂದೂಡಿಕೆ:
ಸಹಕಾರ ಸಚಿವ ಕೆ.ಎನ್.ರಾಜಣ್ಣರ 75ನೇ ಹುಟ್ಟುಹಬ್ಬದ ನಿಮಿತ್ತ ಮೇ.13 ರಂದು‌ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿತ್ತು. ಈ ವೇಳೆ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಲೋಕಾರ್ಪಣೆಯನ್ನೂ ಮಾಡಲು ಮುಂದಾಗಿತ್ತು. ಕೆ.ಎನ್‌ರಾಜಣ್ಣರ ಹಿತೈಷಿಗಳು ಬೃಹತ್ ಕಾರ್ಯಕ್ರಮ ಆಯೋಜಿಸಿದ್ದರು. ಒಂದು ಲಕ್ಷಕ್ಕೂ‌ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಆಪರೇಷನ್ ಸಿಂದೂರ್ ಯುದ್ಧ ಸಂಘರ್ಷದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿದೆ. 2 ತಿಂಗಳಿನಿಂದ ಈ ಕಾರ್ಯಕ್ರಮಕ್ಕೆ ಸಾಕಷ್ಟು ಶ್ರಮ ವಹಿಸಿದ್ದರು. ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಬೇಕಿತ್ತು. ಇದೀಗ ಕಾರ್ಯಕ್ರಮ ಮುಂದೂಡಿಕೆ ಬೇಜಾರಿಲ್ಲಾ, ನಮಗೆ ದೇಶ ಮೊದಲು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ತಿಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!