Karnataka Politics ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಣೆ

By Suvarna News  |  First Published Apr 3, 2022, 3:43 PM IST

* ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಖಚಿತ
* ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ ಬಸವರಾಜ ಹೊರಟ್ಟಿ
* ಬಿಜೆಪಿಯಿಂದ ಬಸವರಾಜ ಹೊರಟ್ಟಿ ಸ್ಪರ್ಧೆ
 


ಹುಬ್ಬಳ್ಳಿ, (ಏ.03): ಪಶ್ಚಿಮ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಗೂ ಮುನ್ನವೇ ರಾಜಕೀಯ ಚಟುವಟಿಕೆಗಳು (Political Activities) ಬಿರುಸುಗೊಂಡಿವೆ. ಜೆಡಿಎಸ್ ನಾಯಕ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಬಿಜೆಪಿ ಸೇರ್ಪಡೆಯಾವುದು ಪಕ್ಕಾ ಆಗಿದೆ. ಈ ಬಗ್ಗೆ ಅವರೇ ಮಾಧ್ಯಮಗಳ ಮುಂದೆ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಇಂದು(ಭಾನುವಾರ) ಹುಬ್ಬಳ್ಳಿ ಸುದ್ದಿಗಾರರೊಂದಿಗೆ ಮಾತನಾಡಿರುವ ಹೊರಟ್ಟಿ,  ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ತಿಳಿಸುವೆ ಎಂದು ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್, ಕುತೂಹಲ ಮೂಡಿಸಿದ ಹೊರಟ್ಟಿ ನಡೆ

Latest Videos

undefined

ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಯಡಿಯೂರಪ್ಪ ನನ್ನೊಂದಿಗೆ ಮಾತನಾಡಿದ್ದಾರೆ.  ಬಿಜೆಪಿ‌ ಸೇರ್ಪಡೆಗೆ ಅವರಲ್ಲಿ ಯಾರು ವಿರೋಧ ಮಾಡುತ್ತಿದ್ದಾರೊ ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ  ನನ್ನೊಂದಿಗೆ ಮಾತನಾಡಿದ್ದಾರೆ. ಮುಖ್ಯಮಂತ್ರಿ ಒಪ್ಪಿದ್ದಾರೆ. ನಾನೂ ಆಯಿತು ಎಂದಿದ್ದೇನೆ ಎಂದು ಹೇಳಿದರು.

ಬಿಜೆಪಿಯಿಂದ ಸ್ಪರ್ಧೆಗೆ ಎಲ್ಲಕ್ಕಿಂತ ಹೆಚ್ಚಾಗಿ ಕುಮಾರಸ್ವಾಮಿ ಮುಕ್ತವಾಗಿ ‌ಒಪ್ಪಿದ್ದಾರೆ. ನಮ್ಮ ಪಕ್ಷದ ಒಡನಾಟವನ್ನು ಮೆಚ್ಚಿಯೇ ಹೇಳಿದ್ದಾರೆ. ಹೀಗಾಗಿ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಾಗುವುದು ಎಂದು ತಿಳಿಸಿದರು.

ಹೊರಟ್ಟಿ ಬಿಜೆಪಿ ಸೇರ್ಪಡೆಗೆ ವಿರೋಧ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕೆಲ ಮುಖಂಡರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹೊರಟ್ಟಿ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ. ಹೊರಟ್ಟಿ ಪಕ್ಷ ಸೇರ್ಪಡೆಗೆ ವಿರೋಧಿಸಿ ಬಿಜೆಪಿ ಮುಖಂಡರು ಹತ್ತು ಅಂಶಗಳನ್ನು ಪತ್ರದಲ್ಲಿ ತಿಳಿಸಿದ್ದಾರೆ. ಬಸವರಾಜ್ ಹೊರಟ್ಟಿಗೆ 76 ವರ್ಷ ಆಗಿದೆ, ಪಕ್ಷದ ನಿಯಮದಂತೆ ಇವರಿಗೆ ಟಿಕೆಟ್ ನೀಡಲು ಅವಕಾಶವಿಲ್ಲ ಅನ್ನೋದು ಮುಖ್ಯ ಅಂಶವಾಗಿದೆ.

"

ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ
ಬೆಂಗಳೂರು, (ಮಾ.11): ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ (Karnataka MLC Elections) ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ 3ಕ್ಕೆ ಮಾತ್ರ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ  ಅಭ್ಯರ್ಥಿಗಳ (BJP Candidates) ಪಟ್ಟಿಯನ್ನು ಇಂದು(ಶುಕ್ರವಾರ) ಬಿಡುಗಡೆ ಮಾಡಿದೆ.

ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ್ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಾಜಿ ಎಂಎಲ್​ಸಿ ಗೋ. ಮಧುಸೂಧನ್  ಅವರಿಗೆ ಟಿಕೆಟ್ ಕೈತಪ್ಪಿದೆ. 

ಇನ್ನು ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಕೆಲ ಗೊಂದಗಳು ಇದ್ದು, ಅವು ಬಗೆಹರಿಯದ ಕಾರಣ ಅಭ್ಯರ್ಥಿ ಘೋಷಣೆ ಮಾಡಿಲ್ಲ.  ಆದರೆ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಮತ್ತು ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಈ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಮತ್ತೊಂದೆಡೆ ಈ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಬಿಜೆಪಿ ಸೇರ್ಪಡೆ ಅಥವಾ ಬೆಂಬಲ ನೀಡುವ ವಿಚಾರವಾಗಿ ಮಾತುಕತೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ. ಇದೀಗ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ  ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ.

click me!