ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಮತದಾನದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಚುನಾವಣಾ ನಿಯಮ ಉಲ್ಲಂಘಿಸಿ ಮತದಾನದ ಫೋಟೋ, ವಿಡಿಯೋ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಘಟನೆ ನಡೆದಿದೆ.
ಬೆಂಗಳೂರು/ ಚಿಕ್ಕಬಳ್ಳಾಪುರ/ ಕೋಲಾರ/ ದಕ್ಷಿಣ ಕನ್ನಡ (ಏ.26): ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆ ವೇಳೆಗೆ ವಿವಿಧೆಡೆ ನಾಲ್ಕು ಜನರು ಚುನಾವಣಾ ಆಯೋಗದ ನಿಯಮ ಮೀರಿ ಮತದಾನ ಮಾಡುವಾಗಿನ ಫೋಟೋ ಹಾಗೂ ವಿಡಿಯೋ ಮಾಡಿದ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರಿಗೆ ಮತ ಹಾಕಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಜೊತೆಗೆ, ಬ್ಯಾಲೆಟ್ ಪೇಪರ್ ಮುದ್ರಣ ಆಗುವುದನ್ನೂ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಗುರುರಾಜ್ ಅಂಜನ್ ಎನ್ನುವವರು ಟ್ವಿಟರ್‌ನಲ್ಲಿ ಹಂಚಿಕೊಂಡು ಒಳ್ಳೆಯ ಕಾರ್ಯವನ್ನು ಶುಭ ಮುಂಜಾನೆಯೇ ಆರಂಭ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾನೆ.
ಕರ್ನಾಟಕ Election 2024 Live: ಮತದಾನ ನಿಮ್ಮ ಹಕ್ಕು, ಬೇಗ ಹೋಗಿ ಚಲಾಯಿಸಿ...
ದಕ್ಷಿಣ ಕನ್ನಡ ಪುತ್ತೂರಿನಲ್ಲಿಯೂ ನಿಯಮ ಉಲ್ಲಂಘನೆ: ರಾಜ್ಯದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪುತ್ತೂರಿನ ಮತಗಟ್ಟೆಯೊಂದರಲ್ಲಿ ರಂಜಿತ್ ಬಂಗೇರ ಎಂಬ ಯುವಕ ಮತದಾನ ಮಾಡುವಾಗ ತಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಫೋಟೋ ತೆಗೆದುಕೊಂಡು ಶೇರ್ ಮಾಡಿಕೊಂಡಿದ್ದಾರೆ. ತಾನು ಮತದಾನ ಮಾಡಿದ ಯುವಕ ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊ ಶೇರ್ ಮಾಡಿಕೊಂಡಿದ್ದಾನೆ. ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿದ್ದಾನೆ.
📌: HAVE YOU CASTED YOUR VOTE? NOT YET? GO OUT & VOTE.!
📌Huge Support for Youth's Favourite in ChikkaballaPura.
GROUND ZERO.!!! https://t.co/CIgFJZ6fBu pic.twitter.com/iXL7Tt9sFk
ಕೋಲಾರದಲ್ಲಿಯೂ ನಿಯಮ ಉಲ್ಲಂಘಿಸಿದ ಮತದಾರ: ಪ್ರಜಾಪ್ರಭುತ್ವದ ಪ್ರಮುಖ ಹಕ್ಕಾಗಿರುವ ಮತದಾನವನ್ನು ಚಲಾವಣೆ ಮಾಡಲು 18 ವರ್ಷ ಪೂರೈಸಿದ ಎಲ್ಲ ಭಾರತೀಯ ನಾಗರಿಕರಿಗೂ ಹಕ್ಕಿದೆ. ನಮ್ಮ ದೇಶದಲ್ಲಿ ಗೌಪ್ಯ ಮತದಾನ ವ್ಯವಸ್ಥೆ ಇದೆ. ಆದರೆ, ಈ ನಿಯಮ ಉಲ್ಲಂಘಿಸುವ ಮತದಾರರು ತಾವು ಮತದಾನ ಮಾಡುತ್ತಿದ್ದಾರೆ. ಕೋಲಾರದಲ್ಲಿ ಮತದಾರನೊಬ್ಬ ತಾನು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರಿಗೆ ಮತದಾನ ಮಾಡುವುದನ್ನು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.
LIVE: ಬೆಂಗಳೂರು ಗ್ರಾಮಾಂತರ Elections 2024; ಬೆಳಗ್ಗೆ 9 ಗಂಟೆ ವೇಳೆಗೆ ಶೇ.8.39 ಮತದಾನ
ಚಿಕ್ಕಬಳ್ಳಾಪುರದಲ್ಲಿಯೂ ನಿಯಮ ಉಲ್ಲಂಘನೆ: ಚುನಾವಣಾ ಆಯೋಗದಿಂದ ಮತದಾನ ಕೇಂದ್ರದೊಳಗೆ ಮೊಬೈಲ್ ತೆಗೆದುಕೊಂಡು ಹೋಗಿ, ಫೋಟೋ ಮತ್ತು ವಿಡಿಯೋ ಮಾಡುವಂತಿಲ್ಲ ಎಂಬ ನಿಯಮವಿದೆ. ಆದರೆ, ಈ ನಿಯಮ ಉಲ್ಲಂಘಿಸಿ ಚಿಕ್ಕಬಳ್ಳಾಪುರ ಲೋಕಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಮತ ಹಾಕುವುದನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಜೊತೆಗೆ, ಮತದಾನ ಮಾಡುವ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡಿದ್ದಾನೆ.