LIVE: Shivamogga Elections 2024: ಶಿವಮೊಗ್ಗ ಕ್ಷೇತ್ರಕ್ಕೆ ಬೈಂದೂರಿನಲ್ಲಿ ನಟ ರಿಷಬ್ ಶೆಟ್ಟಿ ಮತದಾನ

By Suvarna NewsFirst Published May 7, 2024, 8:56 AM IST
Highlights

ಈ ಬಾರಿ ಬಹಳ ಕುತೂಹಲದ ಕ್ಷೇತ್ರವೆಂದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರ. ಬಿಜೆಪಿಯಿಂದ ಬಿವೈ ರಾಘವೇಂದ್ರ ಸ್ಪರ್ಧಿಸಿದ್ದರೆ.  ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ , ಕಾಂಗ್ರೆಸ್‌ ನಿಂದ ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್‌ ಕುಮಾರ್ ಸ್ಪರ್ಧಿಸಿದ್ದಾರೆ.

ತೀರ್ಥಹಳ್ಳಿ (ಮೇ.7): ಈ ಬಾರಿ ಬಹಳ ಕುತೂಹಲದ ಕ್ಷೇತ್ರವೆಂದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರ. ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಸ್ಪರ್ಧಿಸಿದ್ದರೆ. ಬಿಜೆಪಿಗೆ ಬಂಡಾಯವೆದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ ನಿಂದ ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್‌ ಕುಮಾರ್ ಸ್ಪರ್ಧಿಸಿದ್ದಾರೆ. ಶಿವಮೊಗ್ಗದಲ್ಲಿ ಸಂಜೆ 5 ಗಂಟೆವರೆಗೆ  ಶೇ. 72.36 ರಷ್ಟು ಮತದಾನವಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಶೇ.57.96ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 1  ಗಂಟೆವರೆಗೆ ಶೇ.45.19%ರಷ್ಟು ಮತದಾನವಾಗಿತ್ತು. ಬೆಳಗ್ಗೆ 11 ಗಂಟೆವರೆಗೆ ಶೇ.  27.22ರಷ್ಟು ಮತದಾನವಾಗಿತ್ತು. ಬೆಳಗ್ಗೆ 9 ಗಂಟೆವರೆಗೆ ಶೇ. 11.39ರಷ್ಟು ಮತದಾನವಾಗಿತ್ತು.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬೈಂದೂರಿನಲ್ಲಿ ನಟ ರಿಷಬ್ ಶೆಟ್ಟಿ ಮತ ಚಲಾವಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಾಡಿ ಮತಗಟ್ಟೆ ಸಂಖ್ಯೆ 135 ರಲ್ಲಿ ರಿಷಬ್ ಮತದಾನ ಮಾಡಿದರು. ಇನ್ನು ನಟ ನಿರ್ದೇಶಕ ಸಂದೇಶ್ ಶೆಟ್ಟಿ ಮತದಾನ ಮಾಡಿದರು. ಕುಂದಾಪುರದ ಮುದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ. ನಕ್ಸಲ್ ಪೀಡಿತ ಪ್ರದೇಶದಲ್ಲಿರುವ ಮತಗಟ್ಟೆ. ನಕ್ಸಲ್ ಪೀಡಿತ ಪ್ರದೇಶದ ಅಭಿವೃದ್ಧಿಯ ಕನಸಿನೊಂದಿಗೆ ಮತದಾನ ಮಾಡಿದ್ದೇನೆ ಎಂದು ಮತದಾನದ ಬಳಿಕ ನಟ ಹೇಳಿಕೆ. ಕನ್ನಡ ಸೇರಿದಂತೆ ದಕ್ಷಿಣದ ಬಹು ಭಾಷೆಗಳಲ್ಲಿ ನಟಿಸಿರುವ ಯುವ ನಟ ಸಂದೇಶ ಶೆಟ್ಟಿ. 

ಶಿವಮೊಗ್ಗ: ಪಾರ್ಕಿನ್ಸನ್ ರೋಗದಿಂದ ಬಳಲುತ್ತಿರುವ 84 ವರ್ಷದ ರಕ್ತ ದಾನಿ, ಸಾಮಾಜಿಕ ಕಾರ್ಯಕರ್ತ ಯಜ್ಞನಾರಾಯಣ್ ಅವರು ಆ್ಯಂಬುಲೆನ್ಸ್‌ನಲ್ಲಿ ಹೋಗಿ ತಮ್ಮ ಹಕ್ಕು ಚಲಾಯಿಸಿ, ಮತದಾನದಿಂದ ದೂರ ಉಳಿಯೋ ಯುವಕರಿಗೆ ಮಾದರಿಯಾಗಿದ್ದಾರೆ. ಪುತ್ರ ವಿನಯ್ ಶಿವಮೊಗ್ಗ ಅವರು ತಮ್ಮ ತಂದೆಗೆ ಹಕ್ಕು ಚಲಾಯಿಸಲು ಸಹಕರಿಸಿದರು.

ಪತ್ನಿಯ ಗೆಲುವಿಗಾಗಿ ನಟ ಶಿವರಾಜ್ ಕುಮಾರ್ ಟೆಂಪಲ್ ರನ್. ಶಿರಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ. ಪತ್ನಿಯ ಜೊತೆ ಬಂದು ಶ್ರೀ ಮಾರಿಕಾಂಬೆಗೆ ಉಡಿ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಶಿವಮೊಗ್ಗ ಲೋಕ ಅಖಾಡದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕಿಳಿದಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಪತ್ನಿಯ ಜೊತೆ  ಶಿವರಾಜ್ ಕುಮಾರ್ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ಮತದಾನ ಹಿನ್ನೆಲೆ ಶಿರಸಿ ಶ್ರೀ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ ರಾಜ್ಯದಲ್ಲಿ ಉತ್ತಮ ವಾತಾವರಣ ಇದೆ. 28ಕ್ಕೆ 28 ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ. ರಾಘವೇಂದ್ರ ಎರಡು ಲಕ್ಷ ಲೀಡ್ ನಲ್ಲಿ ಗೇಲ್ತಾರೆ. ಇಂದು ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರದಲ್ಲಿ 14 ಕ್ಷೇತ್ರ ಗೆಲ್ಲುತ್ತೇವೆ ಎಂದರು.  ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ ರಾಜ್ಯದಲ್ಲಿ ಉತ್ತಮ ವಾತಾವರಣ ಇದೆ. 28ಕ್ಕೆ 28 ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ. ರಾಘವೇಂದ್ರ ಎರಡು ಲಕ್ಷ ಲೀಡ್ ನಲ್ಲಿ ಗೇಲ್ತಾರೆ. ಇಂದು ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರದಲ್ಲಿ 14 ಕ್ಷೇತ್ರ ಗೆಲ್ಲುತ್ತೇವೆ ಎಂದರು.

ಮತದಾನಕ್ಕೂ ಮೊದಲು ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ ,ವಿಜಯೇಂದ್ರ‌, ರಾಘವೇಂದ್ರ ಮತ್ತು ಕುಟುಂಬಸ್ಥರು. ನಂತರ ಗುರು ರಾಘವೇಂದ್ರ ಮಠಕ್ಕೆ ಭೇಟಿ. ರಾಘವೇಂದ್ರ ಸ್ವಾಮಿಗಳ ಪೂಜೆ ನೆರವೇರಿಸಿದ ಬಳಿಕ ಮತಗಟ್ಟೆ ಕೇಂದ್ರಕ್ಕೆ ಭೇಟಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. 
 ಮತದಾನಕ್ಕೂ ಮೊದಲು ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ ,ವಿಜಯೇಂದ್ರ‌, ರಾಘವೇಂದ್ರ ಮತ್ತು ಕುಟುಂಬಸ್ಥರು. ನಂತರ ಗುರು ರಾಘವೇಂದ್ರ ಮಠಕ್ಕೆ ಭೇಟಿ. ರಾಘವೇಂದ್ರ ಸ್ವಾಮಿಗಳ ಪೂಜೆ ನೆರವೇರಿಸಿದ ಬಳಿಕ ಮತಗಟ್ಟೆ ಕೇಂದ್ರಕ್ಕೆ ಭೇಟಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು.

LIVE: Uttara Kannada Elections 2024: ಬಿಜೆಪಿಯ ಕಾಗೇರಿಗೆ ಕೈ ನಾಯಕಿ ಅಂಜಲಿ ನಿಂಬಾಳ್ಕರ್ ಪ್ರತಿಸ್ಪರ್ಧಿ

ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರ ಹೊಂದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ  ಒಟ್ಟು ಮತದಾರರು 17,52,885.  ಪುರುಷ ಮತದಾರರು 8,62,789 ಮತ್ತು ಮಹಿಳಾ ಮತದಾರರು 8,90061  ಒಟ್ಟು 2039 ಮತಗಟ್ಟೆ ಹೊಂದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ  325 ಸೂಕ್ಷ್ಮ ಮತಗಟ್ಟೆ ಕೇಂದ್ರವಿದೆ.

India General Elections 2024 Live: ರಾಜ್ಯದಲ್ಲಿ ಕೊನೇ ಹಂತದ ಮತದಾನ, ಹಕ್ಕು ಚಲಾಯಿಸಿದ ಮೋದಿ

click me!