Latest Videos

Mysuru Lok Sabha constituency : ಗೆಲ್ಲುವ ಮುನ್ನವೇ ಸಂಸದ ಯದುವೀರ್ ಒಡೆಯರ್ ನಾಮಫಲಕಕ್ಕೆ ಪೂಜೆ ಸಲ್ಲಿಕೆ

By Sathish Kumar KHFirst Published Jun 4, 2024, 12:25 PM IST
Highlights

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಗೆಲುವಿಗೆ ಮುನ್ನವೇ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಸಂಸದರ ನಾಮಫಲಕ ಸಿದ್ಧಪಡಿಸಿ ಚಾಮುಂಡೇಶ್ವರಿ ದೇವಿ ಮುಂದಿಟ್ಟು ಪೂಜೆ ಸಲ್ಲಿಸಲಾಗಿದೆ. 

ಮೈಸೂರು (ಜೂ.04): ಮೈಸೂರು ಹಾಗೂ ಕೊಡಲು ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ಇದೇ ಮೊದಲ ಬಾರಿಗೆ ಸ್ಪರ್ಧೆ ಮಾಡದ್ದ ರಾಜ ಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಫಲಿತಾಂಶ ಬರುವ ಮುನ್ನವೇ ಸಂಸದ ಯದುವೀರ್ ಒಡೆಯರ್ ಎಂದು ನೇಮ್‌ ಪ್ಲೇಟ್ ಬರೆಸಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಲು ಮುಂದಾಗಿರುವುದು ಕಂಡುಬಂದಿದೆ.

ಹೌದು, ಮೈಸೂರಿನಲ್ಲಿ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈಗಾಗಲೇ 1 ಲಕ್ಷ ಮತಗಳ ಮುನ್ನಡೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಗೆಲುವು ಸ್ಪಷ್ಟವೆಂದೇ ಹೇಳಬಹುದು. ಹೀಗಾಗಿ, ಅವರ ಹಿಂಬಾಲಿಗರು ಮತ್ತು ಬೆಂಬಲಿಗರು ಸಂಸದರಿಗೆ ಒಂದು ಪ್ರತ್ಯೇಕ ಕಚೇರಿಯನ್ನು ಆರಂಭಿಸಲು ಎಲ್ಲ ತಯಾರಿಯನ್ನೂ ಮಾಡಿಕೊಂಡಿದ್ದಾರೆ. ಜೊತೆಗೆ, ಗೆಲ್ಲುವುದಕ್ಕೂ ಮುನ್ನವೇ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಎಂಬ ಫಲಕವನ್ನು ಸಿದ್ಧಪಡಿಸಿ ಚಾಮುಂಡೇಶ್ವರಿ ದೇವಿಯ ಸನ್ನಿಧಿಗೆ ಪೂಜೆಯನ್ನು ಸಲ್ಲಿಸಲು ಕೊಂಡೊಯ್ದಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರ ದನಿ ಎತ್ತಿದ ಸಂಸದ ಪ್ರತಾಪ ಸಿಂಹ!

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿಕೊಂಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೇಮ್ ಪ್ಲೇಟ್ ಸಿದ್ದವಾಗಿದೆ. ಯದುವೀರ್ ಯುವ ಬ್ರಿಗೇಡ್ ವತಿಯಿಂದ ಮಹಾರಾಜರಿಗೆ ಈ ಉಡುಗೊರೆ ಕೊಡಲಾಗುತ್ತಿದೆ ಎಂದು ಬರೆದುಕೊಳ್ಳಲಾಗಿದೆ. ಈ ನಾಮ ಫಲಕವನ್ನು ನಾಡಿನ ಅಧಿದೇವತೆ ಚಾಮುಂಡಿ ಮುಂದಿಟ್ಟು ವಿಶೇಷ ಪೂಜೆ ಮಾಡಿಸಲಾಗಿದೆ. ದೇವಾಲಯದ ಪ್ರಧಾನ ಅರ್ಚಕರು ನೇಮ್ ಪ್ಲೇಟ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. 

ದೇಶದ 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2 ಹಂತದ ಮತದಾನ ನಡೆದಿದೆ. ಮೊದಲ ಹಂತದಲ್ಲಿ ಏ.26ರಂದು 14 ಕ್ಷೇತ್ರಗಳಾದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮತದಾನವಾಗಿದೆ. ಎರಡನೇ ಹಂತದಲ್ಲಿ ಮೇ 7ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಸೇರಿ 14 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

Live Blog: ಕರ್ನಾಟಕದಲ್ಲಿ ಎನ್‌ಡಿಎಗೆ 18, ಕಾಂಗ್ರೆಸ್‌ಗೆ 10 ಕ್ಷೇತ್ರಗಳಲ್ಲಿ ಗೆಲವು ಸಾಧ್ಯತೆ?

ರಾಜ್ಯದಲ್ಲಿ ಒಟ್ಟು 5,47,25,675 ಮತದಾರರಿದ್ದು, ಈ ಪೈಕಿ 3,86,57,725 ಜನರು ಮತದಾನ ಮಾಡುವ ಮೂಲಕ ಶೇ.70.64 ಜನರು ಮತ ಚಲಾಯಿಸಿದ್ದಾರೆ. ಮತದಾನ ನಡೆದ ಒಂದು ತಿಂಗಳ ಬಳಿಕ ಇಂದು (ಜೂ.4ರಂದು) ಫಲಿತಾಂಶ ಪ್ರಕಟವಾಗುತ್ತಿದೆ. ಇದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಫಲಿತಾಂಶ ಅತ್ಯಂತ ಕುತೂಹಲವನ್ನು ಕೆರಳಿಸಿದೆ. ಮತ್ತೊಂದೆಡೆ ಮೈಸೂರಿನ ಮಹಾರಾಜರು ಸ್ಪರ್ಧಿಸಿದ ಕ್ಷೇತ್ರ, ಅಶ್ಲೀಲ ವಿಡಿಯೋ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ ಹಾಸನ ಲೋಕಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಹೆಚ್ಚು ಜನರ ಚಿತ್ತ ನೆಟ್ಟಿದೆ. ಸುಮಾರು 10ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಘಟಾನುಘಟಿ ನಾಯಕರು ತಮ್ಮ ಸಹೋದರರು, ಮಕ್ಕಳು, ಪತ್ನಿಯರನ್ನು ಕಣಕ್ಕಿಳಿಸಿದ್ದು 2ನೇ ತಲೆಮಾರಿನ ರಾಜಕೀಯ ಬೆಳೆಸಲು ಮುಂದಡಿಯಿಟ್ಟಿದ್ದಾರೆ.

click me!