Bengaluru Rural Results: ಕನಕಪುರ ಬಂಡೆಗೆ ಸರ್ಜರಿ ಮಾಡಿದ ಡಾ. ಮಂಜುನಾಥ್, ಡಿಕೆ ಸುರೇಶ್‌ಗೆ ಸೋಲು

By Gowthami KFirst Published Jun 4, 2024, 1:01 PM IST
Highlights

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಪಟ್ಟು ಹಿಡಿದಿದ್ದ ಬಿಜೆಪಿಗೆ ಕೊನೆಗೂ ಗೆಲುವಾಗಿದೆ. ಹಾಲಿ ಸಂಸದರಾಗಿರುವ ಡಿಕೆ ಸುರೇಶ್ ಹೀನಾಯ ಸೋಲು ಕಂಡು ಡಾ.ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು ಕಂಡಿದ್ದಾರೆ.

ಬೆಂಗಳೂರು (ಜೂ.4): ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಪಟ್ಟು ಹಿಡಿದಿದ್ದ ಬಿಜೆಪಿಗೆ ಕೊನೆಗೂ ಗೆಲುವಾಗಿದೆ. ಹಾಲಿ ಸಂಸದರಾಗಿರುವ ಡಿಕೆ ಸುರೇಶ್ ಹೀನಾಯ ಸೋಲು ಕಂಡಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ ಡಾ.ಸಿ.ಎನ್ ಮಂಜುನಾಥ್ ಅವರಿಗೆ ಬರೋಬ್ಬರಿ 1 ಲಕ್ಷ 90 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ . ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಸಹೋದರ  ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗುವ ಮೂಲಕ ಸತತ ನಾಲ್ಕನೇ ಗೆಲುವು ಕಾಣುವ ಕನಸು ನುಚ್ಚು ನೋರಾಗಿದೆ.

ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಡಾ.ಸಿ.ಎನ್ ಮಂಜುನಾಥ್ ಗೆಲ್ಲುವ ಬಗ್ಗೆ ವಿಶ್ವಾಸವಿತ್ತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದೊಂದು ಐತಿಹಾಸಿಕ ಗೆಲುವು ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.

Latest Videos

Live Blog: ಪೆನ್ ಡ್ರೈವ್ ಕಮಾಲ್, ಹಾಸನದಲ್ಲಿ ಪ್ರಜ್ವಲ್ ರೇವಣ್ಣಂಗೆ ಸೋಲು

ನಾನು ಗೆಲ್ಲುತ್ತೇನೆ ಅನ್ನುವ ನಿರೀಕ್ಷೆ ಇತ್ತು. ಆದರೆ ಜನ ನನಗೆ ವಿಶ್ರಾಂತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವನ್ನು ಸಮನಾಗಿ ತೆಗೆದುಕೊಳ್ಳುತ್ತೇನೆ. ನನ್ನ ಕ್ಷೇತ್ರದ ಮತದಾರರಿಗೆ ಧನ್ಯವಾದ. ಮೂರು ಭಾರಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ರಿ. ನಾಲ್ಕನೇ ಬಾರಿ ವಿರಾಮ ಕೊಟ್ಟಿದ್ದೀರಾ ಎಂದು ಸೋಲಿನ ಬಳಿಕ ಡಿಕೆ ಸುರೇಶ್ ಹೇಳಿಕೆ ನೀಡಿದ್ದಾರೆ.

Hassan Constituency Result ಪೆನ್ ಡ್ರೈವ್ ಕಮಾಲ್, ಹಾಸನದಲ್ಲಿ 2 ದಶಕಗಳ ನಂತರ ಕಾಂಗ್ರೆಸ್‌ಗೆ ಭರ್ಜರಿ ಗೆಲವು!

ಇಲ್ಲಿ ಏ.26ರಂದು ಮೊದಲ ಹಂತದಲ್ಲಿ ಚುನಾವಣೆ ನಡೆದಿತ್ತು.  ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಟ್ಟು 27 ಲಕ್ಷದ 63 ಸಾವಿರದ 910ಮತದಾರರಿದ್ದಾರೆ. ಈ ಪೈಕಿ 14 ಲಕ್ಷದ 6 ಸಾವಿರದ 42 ಪುರುಷ ಮತದಾರರಿದ್ದಾರೆ. ಅಲ್ಲದೆ 13 ಲಕ್ಷದ 57 ಸಾವಿರದ 547 ಮಹಿಳಾ ಮತದಾರರಿದ್ದಾರೆ. ಇನ್ನು 321 ಇತರ ಮತದಾರರಿದ್ದಾರೆ. ಈ ಬಾರಿ ಶೇ.67.29ರಷ್ಟು ಮತದಾನ ಆಗಿದೆ.

click me!