ದೇಶವನ್ನ ಉಳಿಸುವ ಒಬ್ಬನೇ ಒಬ್ಬ ವ್ಯಕ್ತಿಯೆಂದರೆ ಅದು ಮೋದಿ: ಎಚ್‌ಡಿ ದೇವೇಗೌಡ

Published : Apr 22, 2024, 08:43 PM IST
ದೇಶವನ್ನ ಉಳಿಸುವ ಒಬ್ಬನೇ ಒಬ್ಬ ವ್ಯಕ್ತಿಯೆಂದರೆ ಅದು ಮೋದಿ: ಎಚ್‌ಡಿ ದೇವೇಗೌಡ

ಸಾರಾಂಶ

: ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ. ಇಂತಹ ಕೆಟ್ಟ ಸರ್ಕಾರವನ್ನ ಕಿತ್ತೊಗೆಯಬೇಕು ಎನ್ನುವ ಕಾರಣಕ್ಕೆ ಬಿಜೆಪಿಯೊಂದಿಗೆ ನಾವು ಕೈಜೋಡಿಸಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಚಿಕ್ಕಮಗಳೂರು (ಏ.22): ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ. ಇಂತಹ ಕೆಟ್ಟ ಸರ್ಕಾರವನ್ನ ಕಿತ್ತೊಗೆಯಬೇಕು ಎನ್ನುವ ಕಾರಣಕ್ಕೆ ಬಿಜೆಪಿಯೊಂದಿಗೆ ನಾವು ಕೈಜೋಡಿಸಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವರಹಳ್ಳಿಯಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಸಂಪತ್ತನ್ನು ಬೇರೆ ರಾಜ್ಯಗಳ ಚುನಾವಣೆಗೆ ಹಂಚುತ್ತಿದ್ದಾರೆ. ರಾಜ್ಯದ ಜನರ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ಚುನಾವಣೆಗಾಗಿ ಹಂಚುವ ಇಂಥ ಕೆಟ್ಟ ಸರ್ಕಾರ ಬೇಕಾ? ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯಬೇಕು ಆ ಕಾರಣಕ್ಕೆ ಬಿಜೆಪಿ ಜೆಡಿಎಸ್ ಒಂದಾಗಿದೆ ಎಂದರು.

ಬಿಜೆಪಿಯವರಿಗೆ ರಾಜಕೀಯ ಮಾಡಲು ಒಂದು ಹೆಣ ಬೇಕು; ಹಳದಿಪುರದಲ್ಲಿ ನಾಲಗೆ ಹರಿಬಿಟ್ಟ ಸಚಿವ ಮಾಂಕಾಳು ವೈದ್ಯ!

ದೇಶವನ್ನು ಉಳಿಸುವ ಒಬ್ಬನೇ ಒಬ್ಬ ವ್ಯಕ್ತಿ ಎಂದರೆ ಅದು ನರೇಂದ್ರ ಮೋದಿ. ಇಂತಹ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾದರೆ ಮಾತ್ರ ದೇಶಕ್ಕೆ ಉಳಿಗಾಲ. ಯಾವುದೇ ಕಾರಣಕ್ಕೂ ಭ್ರಷ್ಟ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು, ರಾಜ್ಯದಿಂದ 28ಕ್ಕೇ 28 ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಮೈತ್ರಿ ಸರ್ಕಾರ ಗೆಲ್ಲುವ ಮೂಲಕ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿಯನ್ನ ಮಾಡಬೇಕಿದೆ ರಾಜ್ಯದ ಮತದಾರರು ಬೆಂಬಲಿಸುವಂತೆ ಕರೆ ನೀಡಿದರು.

ಬಿಎಸ್‌ ಯಡಿಯೂರಪ್ಪವರು ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರು. ಆದರೆ ಕರ್ನಾಟಕದ ಉದ್ದಗಲಕ್ಕೂ ಹೋರಾಟ ಮಾಡಿದ್ದಾರೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ, ಜನರ ಸಮಸ್ಯೆಗಳನ್ನ ಅರ್ಥಮಾಡಿಕೊಂಡಿದ್ದಾರೆ ಎಂದು ಹಾಡಿಹೊಗಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ