ಬಿಜೆಪಿಗೆ ಅಣ್ಣಾಮಲೈ ಸೇರ್ಪಡೆ| ಕರ್ನಾಟಕ ಸಿಗಂನನ್ನು ಪಕ್ಷಕ್ಕೆ ಸ್ವಾಗತಿಸಿದ ಸಿ. ಟಿ. ರವಿ| ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಅತೀವ ಸಂತಸ ತಂದಿದೆ
ಬೆಂಗೂರು(ಆ.25): ಕರ್ನಾಟಕದ ದಕ್ಷ ಅಧಿಕಾರಿಯಾಗಿದ್ದ, ಅಪರಾಧಿಗಳಲ್ಲಿ ನಡುಕ ಹುಟ್ಟಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರುವುದು ಖಚಿತವಾಗಿದೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ ಪೊಲೀಸ್ ಇಲಾಖೆಯ ರಿಯಲ್ ಸಿಂಗಂ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಶ್ರೀ ಕೆ. ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರಲಿದ್ದಾರೆ.
ತಮ್ಮ ದಕ್ಷ ಕಾರ್ಯವೈಖರಿಯಿಂದ ನಾಡಿನಾದ್ಯಂತ ಹೆಸರುವಾಸಿಯಾದ ಶ್ರೀ ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಅತೀವ ಸಂತಸ ತಂದಿದೆ. ನಿಮಗೆ ಹೃದಯಪೂರ್ವಕ ಸ್ವಾಗತ. pic.twitter.com/oca7ln27oz
‘ಕರ್ನಾಟಕ ಸಿಂಗಂ’, ಮಾಜಿ IPS ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ!
undefined
ಈ ಮಾಹಿತಿ ಬಹಿರಂಗಗೊಂಡ ಬೆನ್ನಲ್ಲೇ ಬಿಜೆಪಿ ನಾಯಕರು ಅಣ್ಣಾಮಲೈಯವರಿಗೆ ಶುಭ ಕೋರಿದ್ದಾರೆ. ಸದ್ಯ ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸಿ. ಟಿ. ರವಿ ಕರ್ನಾಟಕ ಪೊಲೀಸ್ ಇಲಾಖೆಯ ರಿಯಲ್ ಸಿಂಗಂ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಶ್ರೀ ಕೆ. ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರಲಿದ್ದಾರೆ. ತಮ್ಮ ದಕ್ಷ ಕಾರ್ಯವೈಖರಿಯಿಂದ ನಾಡಿನಾದ್ಯಂತ ಹೆಸರುವಾಸಿಯಾದ ಶ್ರೀ ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಅತೀವ ಸಂತಸ ತಂದಿದೆ. ನಿಮಗೆ ಹೃದಯಪೂರ್ವಕ ಸ್ವಾಗತ ಎಂದು ಬರೆದಿದ್ದಾರೆ
ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ. pic.twitter.com/iDqL3SEoaf
ರಾಜ್ಯದ 3 ಲಕ್ಷ ಸ್ಲಂ ನಿವಾಸಿಗಳಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್!
ಇನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೂಡಾ ಟ್ವೀಟ್ ಮಾಡಿ ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ ಎಂದಿದ್ದರು.