
ಬೆಂಗಳೂರು (ಜೂ.05) ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಖಾತೆ ಸಿಕ್ಕ ಬೆನ್ನಲ್ಲೇ ಸಚಿವರು ಕಾರ್ಯಪ್ರವೃತ್ತರಾಗಿದ್ದು ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಸಭೆ ಕರೆದಿದ್ದಾರೆ. ಇದರ ನಡುವೆ ಜಲಸಂಪನ್ಮೂಲ ಖಾತೆ ಪಡೆದಿರುವ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡಿದ್ದಾರೆ ಏನ್ನಲಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಮತನಾಡಿರುವ ರಾಮಲಿಂಗಾ ರೆಡ್ಡಿ ಇಂದು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ವಿಚಾರಕ್ಕಾಗಿ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಖಾತೆ ಸಿಗದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಜೊತೆ ಮಾತನಾಡಿರುವ ರಾಮಲಿಂಗಾ ರೆಡ್ಡಿ ರಾಜೀನಾಮೆ ಕುರಿತು ಮಾಹಿತಿ ನೀಡಿದ್ದಾರೆ. ಖಾತೆ ಬದಲಾವಣೆಗೆ ಎಐಸಿಸಿ ನಾಯಕರು ಒಪ್ಪಿಲ್ಲ ಎಂದು ಡಿಕೆ ಶಿವಕುಮಾರ್ ಸಮಜಾಯಿಷಿ ನೀಡಿದ್ದಾರೆ. ಇದರಿಂದ ಮತ್ತಷ್ಟು ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಇಂದು ಮುಖ್ಯಮಂತ್ರಿಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ವಿಚಾರದಲ್ಲಿ ಮುನಿಸಿಕೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಯಕರ್ತರ ಎದುರು ಸ್ಫೋಟಕ ಮಾಹಿತಿ ಹೇಳಿದ್ದಾರೆ. ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಮಲಿಂಗಾ ರೆಡ್ಡಿ, ವಾಪಸ್ ಅವ್ರಿಗೆ ಕೊಟ್ಟುಬಿಡ್ತೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ತಮ್ಮ ಖಾತೆಯನ್ನು ವಾಪಸ್ ನೀಡುವ ಕುರಿತು ಹೇಳಿಕೆ ನೀಡಿದ್ದಾರೆ. ರಾಮಲಿಂಗಾ ರೆಡ್ಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪರಿಸರ ದಿನಾಚರಣೆ ಕಾರ್ಯಕ್ರಮದ ವೇಳೆ ರಾಮಲಿಂಗಾ ರೆಡ್ಡಿ ಈ ಮಾತು ಹೇಳಿದ್ದಾರೆ.
ರಾಜ್ಯ ನಾಯಕರು ತಾವು ಇಟ್ಟ ಬೇಡಿಕೆಗೆ ಸೊಪ್ಪು ಹಾಕದ ಕಾಂಗ್ರೆಸ್ ಹೈಕಮಾಂಡ್ ಎಲ್ಲಾ ನಿರ್ಧಾರ ದೆಹಲಿಯಲ್ಲೇ ಕೈಗೊಂಡಿದೆ ಎಂದು ರಾಜ್ಯ ನಾಯಕರು ಅಸಮಾಧಾನಗೊಂಡಿದ್ದಾರೆ. ರಾಜ್ಯ ನಾಯಕರ ಅಭಿಪ್ರಾಯಗಳಿಗೆ ಮನ್ನಣೆ ಇಲ್ಲ ಎಂದು ರಾಮಲಿಂಗಾ ರೆಡ್ಡಿ ಆಕ್ರೋಶಗೊಂಡಿದ್ದಾರೆ. ಸಿಎಂ ಬದಲಾವಣೆ, ಸಚಿವರ ಆಯ್ಕೆ, ಎಂಎಲ್‌ಸಿ ಆಯ್ಕೆ, ರಾಜ್ಯಸಭೆ ಆಯ್ಕೆ, ಖಾತೆ ಹಂಚಿಕೆ ಎಲ್ಲಾ ಬೆಳವಣಿಗೆಗಳಲ್ಲೂ ಹೈಕಮಾಂಡ್ ಹಿಡಿತ ಸಾಧಿಸಿದೆ. ಹೈಕಮಾಂಡ್ ಸಿಕ್ಕಾಪಟ್ಟೆ ಸ್ಟ್ರಾಂಗ್ ಎಂದು ದೆಹಲಿ ನಾಯಕರು ತೋರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.