ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿದ್ದಾರೆ. ಅದು ಅವರ ಕನಸು ಅಷ್ಟೇ ಎಂದು ವಿಪ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಮೈಸೂರು (ಆ.8): ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿದ್ದಾರೆ. ಅದು ಅವರ ಕನಸು ಅಷ್ಟೇ ಎಂದು ವಿಪ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ನೇರ ಭಾಗಿಯಾಗಿದ್ದಾರೆ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ ಡಾ ಯತೀಂದ್ರ ಅವರು, ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಜನಾದೇಶ ಇರೋರು. ಇವರ ಕುತಂತ್ರಗಳು ಇಲ್ಲಿ ನಡೆಯೊಲ್ಲ. ಇದೇ ಮೊದಲೇನಲ್ಲ, ಈ ಹಿಂದೆಯೂ ಸಿದ್ದರಾಮಯ್ಯ ಅವರ ವಿರುದ್ಧ ಕುತಂತ್ರಗಳನ್ನು ಮಾಡಿದ್ದಾರೆ ಈಗಲೂ ಅದನ್ನೇ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ-ಜೆಡಿಎಸ್ ನನ್ನ ಟಾರ್ಗೆಟ್ ಮಾಡಿವೆ; ಅವರ ಎಲ್ಲ ಹಗರಣ ಸಮಾವೇಶದಲ್ಲಿ ಬಿಚ್ಚಿಡುತ್ತೇನೆ: ಸಿಎಂ
ಈ ರೀತಿ ಮಾಡಿರೋದು ಕರ್ನಾಟಕದಲ್ಲಷ್ಟೇ ಅಲ್ಲ, ಮಹಾರಾಷ್ಟ್ರ, ದೆಹಲಿಯಲ್ಲೂ ಬಿಜೆಪಿಯವರು ಅದನ್ನೇ ಮಾಡಿದ್ದಾರೆ. ನಾಳೆ ನಡೆಯಲಿರುವ ಕಾಂಗ್ರೆಸ್ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಾರೆ. ರಾಜ್ಯಮಟ್ಟದ ಎಲ್ಲ ನಾಯಕರು ಬರುತ್ತಾರೆ. ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದರು.