
ಕೆ.ಆರ್.ನಗರ (ಅ.29): ರಾಜ್ಯ ವಿಧಾನ ಪರಿಷತ್‌ಗೆ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯ ಫಲಿತಾಂಶ ಬಂದ ಮರುದಿನವೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತುಕೊಂಡು ಸುದೀರ್ಘ ಕಾಲ ಉಭಯ ಕುಶಲೋಪರಿ ನಡೆಸಿದ್ದು ಗಮನ ಸೆಳೆಯಿತು.
ಮೈಸೂರು ಜಿಲ್ಲೆ ಕೆ.ಆರ್.ನಗರದ ಪುರಸಭಾ ಬಯಲು ರಂಗಮಂದಿರ ಮೈದಾನದಲ್ಲಿ ಬುಧವಾರ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರು ನಾಯಕರು ಭಾಗವಹಿಸಿ, ಅಕ್ಕಪಕ್ಕದಲ್ಲೇ ಕುಳಿತು ಪರಸ್ಪರ ಚರ್ಚೆಯಲ್ಲಿ ತೊಡಗಿದ್ದರು. ಮೇಲ್ಮನೆ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಎನ್‌ಡಿಎ ಗೆದ್ದಿರುವ ಖುಷಿಯಲ್ಲಿದ್ದ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಕೈಮುಗಿದಾಗ ಅವರು ಬೆನ್ನು ತಟ್ಟಿ ಮೆಚ್ಚುಗೆ ಸೂಚಿಸಿದ್ದು ಗಮನ ಸೆಳೆಯಿತು.
ಈ ಇಬ್ಬರು ನಾಯಕರ ಅಕ್ಕಪಕ್ಕದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ, ಮತ್ತೊಂದು ಬದಿಯಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಸೀನರಾಗಿದ್ದರು. ಮಾಜಿ ಸಚಿವ ಸಾ.ರಾ.ಮಹೇಶ್, ಸ್ಥಳೀಯ ಶಾಸಕ ಡಿ.ರವಿಶಂಕರ್ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.